ಶಿವಕುಮಾರ್‌ ಸಿಎಂ ಆಗ್ತಾರೆ ಎಂದಿದ್ದ ಇಕ್ಬಾಲ್‌ ಹುಸೇನ್‌ಗೆ ವಾರ್ನಿಂಗ್‌ – ಡಿಕೆಶಿಯಿಂದ ನೋಟಿಸ್‌

Public TV
1 Min Read

ಬೆಂಗಳೂರು: ಡಿಕೆ ಶಿವಕುಮಾರ್ (DK Shivakumar) ಸಿಎಂ ಆಗುವ ಕಾಲ ಹತ್ತಿರ ಇದೆ. 100 ಶಾಸಕರ ಸಂಖ್ಯಾಬಲವೂ ಇದೆ ಎಂದು ಹೊಸ ಬಾಂಬ್ ಸಿಡಿಸಿದ್ದ ರಾಮನಗರದ (Ramangar) ಶಾಸಕ ಇಕ್ಬಾಲ್‌ ಹುಸೇನ್‌ಗೆ (Iqbal Hussain) ನೋಟಿಸ್‌ ಜಾರಿಯಾಗಿದೆ.

ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌ ನೋಟಿಸ್‌ ಜಾರಿ ಮಾಡಿ 1 ವಾರದ ಒಳಗಡೆ ಈ ಹೇಳಿಕೆಯ ಬಗ್ಗೆ ಸಮಜಾಯಿಷಿ ನೀಡುವಂತೆ ಸೂಚಿಸಿದ್ದಾರೆ. ಇದನ್ನೂ ಓದಿ: ಶೀಘ್ರದಲ್ಲೇ ಡಿಕೆಶಿ ಸಿಎಂ ಆಗ್ತಾರೆ ಇಕ್ಬಾಲ್ ಹುಸೇನ್ ಬಾಂಬ್


ನೋಟಿಸ್‌ನಲ್ಲಿ ಏನಿದೆ?
ಮುಖ್ಯಮಂತ್ರಿಗಳ ಬದಲಾವಣೆ ವಿಷಯದಲ್ಲಿ ಪಕ್ಷದಲ್ಲಿ ಗೊಂದಲ ಹಾಗೂ ಮುಜುಗರ ಉಂಟುಮಾಡುವಂತಹ ಬಹಿರಂಗವಾಗಿ ಹೇಳಿಕೆಗಳನ್ನು ನೀಡಿರುತ್ತೀರಿ.

‘ತಮ್ಮ ಈ ಬಹಿರಂಗ ಹೇಳಿಕೆಗಳು ಪಕ್ಷಕ್ಕೆ ಮುಜುಗರ ಉಂಟು ಮಾಡುವುದಲ್ಲದೆ, ಪಕ್ಷದ ಶಿಸ್ತು ಉಲ್ಲಂಘನೆ ಆಗಿರುತ್ತದೆ. ತಮ್ಮ ಈ ಅಶಿಸ್ತಿನ ಹೇಳಿಕೆಗಳನ್ನು ಗಂಭೀರವಾಗಿ ಪರಿಗಣಿಸಿ, ಈ ಕಾರಣ ಕೇಳಿ ನೋಟಿಸ್‌ ನೀಡಲಾಗಿದೆ

ತಾವುಗಳು ಈ ನೋಟಿಸ್‌ ತಲುಪಿದ ಒಂದು ವಾರದ ಒಳಗಾಗಿ ತಮ್ಮ ಹೇಳಿಕೆಗಳ ಬಗ್ಗೆ ಸಮಜಾಯಿಷಿ ನೀಡಲು ಸೂಚಿಸಲಾಗಿದೆ.

Share This Article