KPCL ನೇಮಕಾತಿ: 8 ದಿನಗಳಲ್ಲಿ ತಾತ್ಕಾಲಿಕ ಫಲಿತಾಂಶ ಪ್ರಕಟ – ಕೆಇಎ

1 Min Read

ಬೆಂಗಳೂರು: ಕರ್ನಾಟಕ ವಿದ್ಯುತ್ ನಿಗಮದ (KPCL) ಒಟ್ಟು 622 ಹುದ್ದೆಗಳ ನೇಮಕಾತಿ ಸಂಬಂಧ ಡಿ.27 ಮತ್ತು 28ರಂದು ನಡೆದ ಮರುಪರೀಕ್ಷೆಯ ತಾತ್ಕಾಲಿಕ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (Karnataka Examination Authority) ಸೋಮವಾರ (ಜ.5) ಪ್ರಕಟಿಸಿದೆ.

ಸುಪ್ರೀಂ ಕೋರ್ಟ್ (Supreme Court) ಆದೇಶದ ಮೇರೆಗೆ ಈ ಹುದ್ದೆಗಳಿಗೆ ಮರುಪರೀಕ್ಷೆ ನಡೆಸಲಾಗಿತ್ತು. ಪರೀಕ್ಷೆ ನಡೆದು ಕೇವಲ ಎಂಟು ದಿನಗಳಲ್ಲೇ ಫಲಿತಾಂಶವನ್ನೂ ಪ್ರಕಟಿಸಿದ್ದು, ಆಕ್ಷೇಪಣೆಗಳು ಇದ್ದಲ್ಲಿ ಜನವರಿ 7ರೊಳಗೆ ಸಲ್ಲಿಸಬಹುದು ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ (H Prasanna) ಹೇಳಿದ್ದಾರೆ.ಇದನ್ನೂ ಓದಿ: ಬೆಂಗಳೂರು | ಉಸಿರುಗಟ್ಟಿ ಮಹಿಳಾ ಟೆಕ್ಕಿ ಸಾವು?

ಇದಲ್ಲದೆ, ವಿವಿಧ ಹುದ್ದೆಗಳ ನೇಮಕಾತಿ ಸಂಬಂಧದ ಕನ್ನಡ ಕಡ್ಡಾಯ ಪರೀಕ್ಷೆಯ ಅಂತಿಮ ಅಂಕಪಟ್ಟಿಯನ್ನೂ ಪ್ರಕಟಿಸಲಾಗಿದೆ ಎಂದು ತಿಳಿಸಿದ್ದಾರೆ.

Share This Article