ಕೃಷ್ಣಾ ನದಿ ನೀರು ಹಂಚಿಕೆ ವಿವಾದ – ಮೇ 7ರಂದು ಕೇಂದ್ರ ಜಲಶಕ್ತಿ ಸಚಿವಾಲಯದಿಂದ ಸಭೆ

Public TV
2 Min Read

– ಕೃಷ್ಣಾ ನ್ಯಾಯಾಧಿಕರಣ ತೀರ್ಪಿನ ನೀರು ಬಳಕೆಗೆ ಅಧಿಸೂಚನೆ ಹೊರಡಿಸಲು ರಾಜ್ಯದಿಂದ ಒತ್ತಡ: ಡಿಕೆಶಿ

ಬೆಂಗಳೂರು: ಕೃಷ್ಣಾ ನದಿ (Krishna River) ನೀರಿನ ಹಂಚಿಕೆ ವಿಚಾರವಾಗಿ ನ್ಯಾಯಾಧಿಕರಣದ ತೀರ್ಪಿನ ಅನ್ವಯ ರಾಜ್ಯದ ಪಾಲಿನ ನೀರು ಬಳಕೆಗೆ ಕೇಂದ್ರ ಸರ್ಕಾರ ಗೆಜೆಟ್ ಅಧಿಸೂಚನೆ ಹೊರಡಿಸಬೇಕು ಎಂದು ಇದೇ ತೀಂಗಳು 7ರಂದು ಕೇಂದ್ರ ಜಲಶಕ್ತಿ ಸಚಿವರು (Department Of Water Resources) ಕರೆದಿರುವ ಸಭೆಯಲ್ಲಿ ಒತ್ತಡ ಹಾಕಲಾಗುವುದು. ಈ ಸಭೆಯ ನಂತರ ರಾಜ್ಯದಲ್ಲಿ ಸರ್ವಪಕ್ಷ ಸಭೆ ಕರೆದು ಚರ್ಚಿಸಲಾಗುವುದು ಎಂದು ಡಿಸಿಎಂ ಡಿ.ಕೆ ಶಿವಕುಮಾರ್ (DK Shivakumar) ತಿಳಿಸಿದರು.

ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, 2010ರಲ್ಲಿ ಕೃಷ್ಣಾ ನದಿ ನ್ಯಾಯಾಧಿಕರಣ ತೀರ್ಪಿನ ಬಗ್ಗೆ ಗೆಜೆಟ್ ಅಧಿಸೂಚನೆ ಹೊರಡಿಸುವ ಸಂಬಂಧ ಕೇಂದ್ರ ಸರ್ಕಾರದ ವಿರುದ್ಧ ಒತ್ತಡ ಹಾಕಿದ್ದೇವೆ. ಹೀಗಾಗಿ ಕೇಂದ್ರ ಸಚಿವರು ಕರ್ನಾಟಕ, ಆಂಧ್ರ, ತೆಲಂಗಾಣ, ಮಹಾರಾಷ್ಟ್ರ ರಾಜ್ಯಗಳ ಸಚಿವರ ಸಭೆ ಕರೆದಿದ್ದು, ಈ ಸಭೆಯಲ್ಲಿ ರಾಜ್ಯದ ನಿಲುವನ್ನು ಮಂಡಿಸುವ ಮುನ್ನ ಇಂದು ಪೂರ್ವಭಾವಿ ಸಭೆ ನಡೆಸಿದ್ದೇವೆ ಎಂದರು. ಇದನ್ನೂ ಓದಿ: ಬಳ್ಳಾರಿ | ಪಿಯುಸಿ ಟಾಪರ್‌ಗಳಿಗೆ ಸ್ಕೂಟಿ ಜೊತೆ 5 ಲಕ್ಷ ಸಹಾಯ ಮಾಡಿದ ಜಮೀರ್

ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ಇಂದಿನ ಸಭೆಯಲ್ಲಿ ಕಾನೂನು ಸಚಿವರು, ಸಂಬಂಧಪಟ್ಟ ಎಲ್ಲಾ ಜಿಲ್ಲಾ ಸಚಿವರುಗಳಾದ ಆರ್.ಬಿ ತಿಮ್ಮಾಪುರ, ಎಂ.ಬಿ ಪಾಟೀಲ್, ಶಿವಾನಂದ ಪಾಟೀಲ್, ದರ್ಶನಾಪುರ ಅವರ ಜೊತೆ ಚರ್ಚೆ ಮಾಡಿದ್ದೇವೆ. ಸಚಿವರು ಅನೇಕ ಸಲಹೆಗಳನ್ನು ನೀಡಿದ್ದಾರೆ. ಈ ಮಧ್ಯೆ ದೆಹಲಿ ವಕೀಲರ ತಂಡ ಕೂಡ ಸಭೆಯಲ್ಲಿ ಇದ್ದರು. ಮೇ 7ರ ಸಭೆಯಲ್ಲಿ ನಮ್ಮ ನಿಲುವು ಏನು, ನಮ್ಮ ತಂತ್ರಗಾರಿಕೆ ಏನು ಎಂದು ಚರ್ಚೆ ಮಾಡಲಾಗಿದೆ. ಕೇಂದ್ರದ ಸಭೆಯಲ್ಲಿ ಇಡೀ ತಂಡ ರಾಜ್ಯವನ್ನು ಪ್ರತಿನಿಧಿಸಿ ರಾಜ್ಯದ ನಿಲುವು ಮಂಡಿಸುತ್ತೇವೆ ಎಂದು ತಿಳಿಸಿದರು. ಇದನ್ನೂ ಓದಿ: ತುಮಕೂರಲ್ಲಿ ಎರಡು ದಿನಗಳ ಕಾಲ ಮಳೆ ಮುನ್ಸೂಚನೆ – ಯೆಲ್ಲೋ ಅಲರ್ಟ್ ಘೋಷಣೆ

ಈ ಯೋಜನೆಯ ಭೂಸ್ವಾಧೀನ ಪ್ರಕ್ರಿಯೆ ಮುಂದುವರಿಸಲು ಬೆಳಗಾವಿ ಅಧಿವೇಶನದಲ್ಲೇ ತೀರ್ಮಾನ ಮಾಡಿದ್ದೇವೆ. 2010ರಲ್ಲಿ ನ್ಯಾಯಾಧಿಕರಣದ ತೀರ್ಪು ಬಂದಿದ್ದು, ಈವರೆಗೂ ಕೇಂದ್ರ ಸರ್ಕಾರ ಗೆಜೆಟ್ ನೋಟಿಫಿಕೇಶನ್ ಹೊರಡಿಸಿಲ್ಲ. ಕಳೆದ 15 ವರ್ಷಗಳಲ್ಲಿ ನಮ್ಮ ರಾಜ್ಯಕ್ಕೆ ಭಾರಿ ನಷ್ಟವಾಗಿದೆ. ಹೀಗಾಗಿ ಈ ವಿಚಾರವಾಗಿ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹಾಕುತ್ತಿದ್ದೇವೆ. ಪ್ರತಿ ವರ್ಷ ಯೋಜನಾ ವೆಚ್ಚದ ಪ್ರಮಾಣವೂ ಏರಿಕೆಯಾಗುತ್ತಿದೆ. ನೀರು ಅನಗತ್ಯವಾಗಿ ಪೋಲಾಗುತ್ತಿದ್ದು, ಇದನ್ನು ಬಳಸಿಕೊಳ್ಳಲು ಒತ್ತಡ ಹಾಕುತ್ತಿದ್ದೇವೆ. ಕೇಂದ್ರ ಸರ್ಕಾರ ನಮ್ಮ ಪರಿಸ್ಥಿತಿ ಅರಿತಿದ್ದು ಸಭೆ ಕರೆದಿರುವುದು ಸ್ವಾಗತಾರ್ಹ ಎಂದರು. ಇದನ್ನೂ ಓದಿ:  ದಾವಣಗೆರೆ | ಬ್ಲಡ್‌ ಕ್ಯಾನ್ಸರ್‌ನೊಂದಿಗೆ ಹೋರಾಡಿ ಎಸ್ಎಸ್ಎಲ್‌ಸಿಯಲ್ಲಿ ಶಾಲೆಗೆ ಫಸ್ಟ್ ಬಂದ ವಿದ್ಯಾರ್ಥಿನಿ

Share This Article