ತಗ್ಗಿದ ಮಳೆ – ಕೆಆರ್‌ಎಸ್‌ ಡ್ಯಾಂ ಒಳಹರಿವು 3,406 ಕ್ಯೂಸೆಕ್‌ಗೆ ಇಳಿಕೆ

By
1 Min Read

ಮಂಡ್ಯ: ಕಾವೇರಿ (Cauvery) ಜಲಾನಯನ ಪ್ರದೇಶದಲ್ಲಿ ಮಳೆ ತಗ್ಗಿದೆ. ಪರಿಣಾಮವಾಗಿ ಕೆಆರ್‌ಎಸ್‌ ಡ್ಯಾಂ (KRS Dam) ಒಳಹರಿವು ಪ್ರಮಾಣ ಇಳಿಕೆಯಾಗಿದೆ.

ನಿನ್ನೆ 4,673 ಕ್ಯೂಸೆಕ್ ಇದ್ದ ಒಳಹರಿವು ಈಗ 3,406 ಕ್ಯೂಸೆಕ್‌ಗೆ ಇಳಿಕೆಯಾಗಿದೆ. 124.80 ಅಡಿ ಗರಿಷ್ಠ ಮಟ್ಟದ ಡ್ಯಾಂನಲ್ಲಿ ಸದ್ಯ 104.60 ಅಡಿ ನೀರು ಸಂಗ್ರಹವಾಗಿದೆ. ಇದನ್ನೂ ಓದಿ: ಸಿಎಂ ಸಿದ್ದರಾಮಯ್ಯಗೆ ಕೊಟ್ಟ ಮನವಿ ಪತ್ರಗಳು ಕಸದ ರಾಶಿಯಲ್ಲಿ ಪತ್ತೆ

49.452 ಟಿಎಂಸಿ ಸಾಮರ್ಥ್ಯದ ಜಲಾಶಯದಲ್ಲಿ 26.635 ಟಿಎಂಸಿ ನೀರು ಶೇಖರಣೆಯಾಗಿದೆ. ಡ್ಯಾಂನಿಂದ ನಾಲೆ ಹಾಗೂ ಕುಡಿಯುವ ನೀರಿಗಾಗಿ 2,257 ಕ್ಯೂಸೆಕ್ ನೀರು ಹೊರಹರಿವು ಇದೆ.

ಇಂದಿನ ಕೆಆರ್‌ಎಸ್ ಡ್ಯಾಂ ನೀರಿನ ಮಟ್ಟ
ಗರಿಷ್ಠ ಮಟ್ಟ – 124.80 ಅಡಿ
ಇಂದಿನ ಮಟ್ಟ – 104.60 ಅಡಿ
ಗರಿಷ್ಠ ಸಾಮರ್ಥ್ಯ – 49.452 ಟಿಎಂಸಿ
ಇಂದಿನ ಸಾಮರ್ಥ್ಯ – 26.635 ಟಿಎಂಸಿ
ಒಳಹರಿವು – 3,406 ಕ್ಯೂಸೆಕ್
ಹೊರಹರಿವು – 2,257 ಕ್ಯೂಸೆಕ್

Share This Article