ರಾಯಚೂರು: ಕಾವೇರಿ ಪ್ರಾಂತ್ಯದ ಜನರಿಗೆ ನೀರಿನ ವ್ಯವಸ್ಥೆ ಮಾಡಬೇಕು ಎನ್ನುವ ಉದ್ದೇಶದಿಂದ ಮೈಸೂರು (Mysuru) ಸಂಸ್ಥಾನದ ಆಗಿನ ರಾಜಮಾತೆ ತಮ್ಮ ಆಭರಣಗಳನ್ನ ಮಾರಾಟ ಮಾಡಿ ಕೆಆರ್‌ಎಸ್ ಜಲಾಶಯವನ್ನು (KRS Dam) ಕಟ್ಟಿಸಿದ್ದಾರೆ ಎಂದು ಗುರುರಾಘವೇಂದ್ರ ಸ್ವಾಮಿ ಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥ ಸ್ವಾಮೀಜಿ (Shri Subhudendra Theertha) ತಿಳಿಸಿದ್ದಾರೆ.
ಮಂತ್ರಾಲಯದಲ್ಲಿ ಮಾತನಾಡಿದ ಶ್ರೀಗಳು ಕೆಆರ್‌ಎಸ್ ಡ್ಯಾಂಗೆ ಟಿಪ್ಪು ಸುಲ್ತಾನ್ ಅಡಿಗಲ್ಲು ಹಾಕಿದ್ದು ಎನ್ನುವ ಸಚಿವ ಮಹಾದೇವಪ್ಪ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿದರು. ರಾಜಮನೆತನದ ತ್ಯಾಗದ ಫಲವಾಗಿ ಕೆಆರ್‌ಎಸ್ ಡ್ಯಾಂ ನಿರ್ಮಾಣವಾಗಿದೆ. ಇನ್ನೂ ಬೇರೆ ಬೇರೆ ವಿಚಾರ ಬಂದರೆ, ಬೇರೆಯವರ ಹೆಸರುಗಳು ಬಂದರೆ ಅದರ ಬಗ್ಗೆ ಇತಿಹಾಸ ತಜ್ಞರೇ ಹೇಳಬೇಕು ಹೊರತು ನಾವು ಅದರ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಹೇಳಲು ಸಾಧ್ಯವಿಲ್ಲ ಎಂದಿದ್ದಾರೆ.ಇದನ್ನೂ ಓದಿ: ಬಿಬಿಎಂಪಿ ಚುನಾವಣೆ; ನವೆಂಬರ್ 3ಕ್ಕೆ ವಿಚಾರಣೆ ಮುಂದೂಡಿದ ಸುಪ್ರೀಂ
ಇದೇ ವೇಳೆ ಧರ್ಮಸ್ಥಳದ ಪ್ರಸ್ತುತ ವಿಚಾರಗಳ ಕುರಿತು ಪ್ರತಿಕ್ರಿಯಿಸಿದ ಅವರು, ಯಾವುದೇ ಧಾರ್ಮಿಕ ಸ್ಥಳ, ಕ್ಷೇತ್ರಗಳಲ್ಲಿ ಸಣ್ಣಪುಟ್ಟ ಲೋಪದೋಷಗಳಾದರೆ ಕ್ಷೇತ್ರದ ಪಾವಿತ್ರ್ಯತೆ ಹಾಗೂ ಕ್ಷೇತ್ರದ ಮಹತ್ವಕ್ಕೆ ಜೋಡಣೆ ಮಾಡಬಾರದು. ಅಲ್ಲಿನ ವ್ಯವಸ್ಥೆ, ಕಾನೂನು ವ್ಯವಸ್ಥೆ ಬಗ್ಗೆ ಮಾತನಾಡಬೇಕು. ಕ್ಷೇತ್ರ ಅತ್ಯಂತ ಪವಿತ್ರವಾದದ್ದು, ನಮ್ಮೆಲ್ಲರಿಗೂ ಅತ್ಯಂತ ಭಕ್ತಿ, ಶ್ರದ್ಧೆಯ ಕೇಂದ್ರವಾಗಿದೆ. ಅಲ್ಲಿ ಯಾವುದೇ ಪ್ರಕರಣ,ವಿಚಾರಗಳು ಇದ್ದರೂ ಕೂಡ ಕಾನೂನು ವಿಚಾರಣೆ ನಡೆಸುತ್ತದೆ ಎಂದು ಹೇಳಿದ್ದಾರೆ.
ರಾಜ್ಯದಲ್ಲಿ ಸಾರಿಗೆ ನೌಕರರ ಮುಷ್ಕರ ಹಿನ್ನೆಲೆ ಮಂತ್ರಾಲಯ ಭಕ್ತರಿಗೆ ತೊಂದರೆ ವಿಚಾರ ಕುರಿತು ಮಾತನಾಡಿ, ಸಾರಿಗೆ ಇಲಾಖೆಯವರು ತಮ್ಮ ಬೇಡಿಕೆ ಈಡೇರಿಕೆಗಾಗಿ ಹಲವಾರು ಬಾರಿ ಅಹವಾಲು ಕೊಟ್ಟಿದ್ದಾರೆ. ರಾಜ್ಯ ಸರ್ಕಾರ ಅವರ ಅಹವಾಲನ್ನ ಗಂಭೀರವಾಗಿ ಪರಿಗಣಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು. ಸಾರಿಗೆ ನೌಕರರಿಗೆ ಸರ್ಕಾರ ಸೂಕ್ತ ಪರಿಹಾರ ಒದಗಿಸುತ್ತದೆ ಎನ್ನುವ ಅನ್ನೋ ಧೃಡ ವಿಶ್ವಾಸವಿದೆ ಎಂದು ತಿಳಿಸಿದ್ದಾರೆ.
ಇದಕ್ಕೂ ಮುನ್ನ ಸಚಿವ ಹೆಚ್.ಸಿ ಮಹದೇವಪ್ಪ (HC Mahadevappa) ಅವರು ಕನ್ನಂಬಾಡಿ ಕಟ್ಟೋದಕ್ಕೆ ಟಿಪ್ಪು ಸುಲ್ತಾನ್ ಅಡಿಗಲ್ಲು ಹಾಕಿದ್ದರು. ಆದರೆ, ಈಗ ಅದನ್ನು ಹೇಳೋಕೆ ಯಾರಿಗೂ ಧೈರ್ಯ ಇಲ್ಲ. ಕೆಆರ್‌ಎಸ್ ಗೇಟ್ ಹೆಬ್ಬಾಗಿಲಿನಲ್ಲಿ ಈಗಲೂ ಅದನ್ನು ಕಾಣಬಹುದು. ಚರಿತ್ರೆ ಗೊತ್ತಿಲ್ಲದವರು ಚರಿತ್ರೆ ನಿರ್ಮಾಣ ಮಾಡಲು ಸಾಧ್ಯವಿಲ್ಲ. ಟಿಪ್ಪು ಮಸೀದಿ ಇದೆ, ಪಕ್ಕದಲ್ಲಿ ದೇವಸ್ಥಾನ ಇದೆ. ಈ ಕಡೆ ಅಲ್ಲಾವೋ ಅಕ್ಬರ್ ಅಂತಾರೆ, ಆ ಕಡೆ ಗಂಟೆ ಟಣ್, ಟಣ್ ಅನ್ನುತ್ತೆ. ಎರಡನ್ನು ಕೇಳ್ತಿದ್ರು ಅವರು. ಸಮಚಿತ್ತರಾಗಿದ್ದವರು ಟಿಪ್ಪು ಎಂದು ಬಣ್ಣಿಸಿದ್ದರು.ಇದನ್ನೂ ಓದಿ: ಆ.5ರಂದು ಸಾರಿಗೆ ನೌಕರರ ಮುಷ್ಕರ; 40% ಖಾಸಗಿ ಬಸ್ ರಸ್ತೆಗಿಳಿಸಲು ಸರ್ಕಾರ ನಿರ್ಧಾರ