ಸಿಎಂ ಹೇಳಿಕೆ ವೈಯಕ್ತಿಕವಾಗಿ ನೋವುಂಟು ಮಾಡಿದೆ- ಎಚ್‍ಡಿಕೆಗೆ ಈಶ್ವರಪ್ಪ ಬಹಿರಂಗ ಪತ್ರ

Public TV
2 Min Read

ಶಿವಮೊಗ್ಗ: ಸಿಎಂ ಕುಮಾರಸ್ವಾಮಿ ಅವರು ಪದೇ ಪದೇ ಸಾಯುವ ಹೇಳಿಕೆ ನೀಡುತ್ತಿದ್ದಾರೆ. ಆದರೆ ಒಬ್ಬ ಮುಖ್ಯಮಂತ್ರಿ ಆಗಿ ಅವರು ಜನತೆಗೆ ಆತ್ಮಸ್ಥೈರ್ಯ ತುಂಬಬೇಕು. ರಾಜ್ಯದ ರೈತರ ಸಾಲ ಮನ್ನಾ ಮಾಡಿ, ಅವರ ಆಶೀರ್ವಾದ ಪಡೆಯಿರಿ ಎಂದು ಬಿಜೆಪಿ ಮುಖಂಡ, ಶಾಸಕ ಕೆಎಸ್ ಈಶ್ವರಪ್ಪ ಸಿಎಂ ಕುಮಾರಸ್ವಾಮಿ ಅವರಿಗೆ ಬಹಿರಂಗ ಪತ್ರ ಬರೆದಿದ್ದಾರೆ.

ಉಪಚುನಾವಣೆ ಪ್ರಚಾರ ಹಿನ್ನೆಲೆಯಲ್ಲಿ ಶಿವಮೊಗ್ಗಕ್ಕೆ ಆಗಮಿಸುತ್ತಿರುವ ಸಿಎಂ ಕುಮಾರಸ್ವಾಮಿ ಅವರಿಗೆ ಸ್ವಾಗತ ಕೋರಿ ಈಶ್ವರಪ್ಪ ಅವರು ಪತ್ರ ಬರೆದಿದ್ದಾರೆ. ಪತ್ರದಲ್ಲಿ ಸಿಎಂ ಕುಮಾರಸ್ವಾಮಿ ಅವರ ಹೇಳಿಕೆ ಉಲ್ಲೇಖಿಸಿರುವ ಅವರು, ಮುಖ್ಯಮಂತ್ರಿಗಳಾಗಿ ಸಾವಿನ ಬಗ್ಗೆ ಪದೇ ಪದೇ ಕೇಳಿಕೆ ನೀಡುತ್ತಿರುವುದು ವಿಷಾದ ತಂದಿದೆ. ರೈತರ ಸಾಲಮನ್ನಾ ಮಾಡುವ ಮೂಲಕ ರಾಜ್ಯದ ಜನರಲ್ಲಿ ಆತ್ಮಸ್ಥೈರ್ಯ ತುಂಬಿ, ರೈತರ ಆಶೀರ್ವಾದ ಪಡೆಯಬೇಕು. ಈ ಮೂಲಕ ಹತ್ತಾರು ವರ್ಷ ಬದುಕಿ ಬಾಳಿ ಎಂದು ಕಿವಿಮಾತು ಹೇಳಿದ್ದಾರೆ.

ಸುದೀರ್ಘ 4 ಪುಟಗಳ ಪತ್ರ ಬರೆದಿರುವ ಈಶ್ವರಪ್ಪ ಅವರು, ಸ್ಮಾರ್ಟ್ ಸಿಟಿ ಯೋಜನೆ ಅನುಷ್ಠಾನ ಹಾಗೂ ಜಿಲ್ಲೆಯ ಸಮಸ್ಯೆಗಳ ಬಗ್ಗೆ ಪ್ರಸ್ತಾಪ ಮಾಡಿದ್ದಾರೆ. ಇದೇ ವೇಳೆ ಮಾಜಿ ಸಿಎಂ ಸಿದ್ದರಾಮಯ್ಯ ಅವರು, ಶೋಭಾ ಕರಂದ್ಲಾಜೆ ಅವರ ಬಗ್ಗೆ ಏಕವಚನದಲ್ಲಿ ಮಾತನಾಡುತ್ತಿರುವುದು ಉತ್ತಮವಲ್ಲ. ಅಲ್ಲದೇ ನಿಮ್ಮದೇ ಸರ್ಕಾರದ ಸಚಿವ ರಮೇಶ್ ಜಾರಕಿಹೊಳಿ ಅವರು ಕೂಡ ಅವರದ್ದೇ ಪಕ್ಷದ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧವಾಗಿ ಹಗುರವಾಗಿ ಮಾತನಾಡುತ್ತಿದ್ದಾರೆ. ನಮ್ಮ ಪರಂಪರೆಯಲ್ಲಿ ಹೆಣ್ಣುಮಕ್ಕಳಿಗೆ ತಾಯಿ ಸ್ಥಾನ ನೀಡಿದ್ದೇವೆ. ಅವರಿಗೆ ಗೌರವ ನೀಡಲು ಸೂಕ್ತವಾದ ನಿರ್ದೇಶನ ನೀಡಲು ಆಗ್ರಹಿಸಿದ್ದಾರೆ.

ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಬಿಜೆಪಿಗೆ ದಕ್ಷಿಣ ಭಾರತದಲ್ಲಿ ಕರ್ನಾಟಕವನ್ನ ಬಂದ್ ಮಾಡಲಾಗುವುದು ಎಂಬ ದೇವೇಗೌಡರು ಹೇಳಿಕೆಗೆ ತಿರುಗೇಟು ನೀಡಿದ ಈಶ್ವರಪ್ಪ ಅವರು, ಜೆಡಿಎಸ್ ಲೋಕಸಭಾ ಚುನಾವಣೆಯಲ್ಲಿ ಎಷ್ಟು ಸೀಟು ಗೆದ್ದಿದೆ ಎಂದು ಪ್ರಶ್ನೆ ಮಾಡಿದರು. ಅಲ್ಲದೇ ನಮಗೆ ತಡೆಯಲು ಇವರಿಗೆ ಆಗುತ್ತಾ. ಅವರ ಕ್ಷೇತ್ರವಾಗಿರುವ ಹಾಸನದಲ್ಲಿಯೇ, ಒಂದು ಕ್ಷೇತ್ರವನ್ನ ಬಿಜೆಪಿ ಗೆದ್ದಿದೆ. ಮುಂದಿನ ದಿನಗಳಲ್ಲಿ ಬಿಜೆಪಿ ಕರ್ನಾಟಕದಲ್ಲಿ ಜಿಲ್ಲೆ, ರಾಜ್ಯ ಹಾಗೂ ದೇಶದ ಅಧಿಕಾರ ಹಿಡಿಯಲಿದ್ದೇವೆ. ದಕ್ಷಿಣ ಭಾರತವನ್ನೂ ಗೆಲ್ಲಲಿದ್ದೇವೆ ಎಂದು ಆತ್ಮವಿಶ್ವಾಸ ವ್ಯಕ್ತಪಡಿಸಿದರು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

Share This Article
Leave a Comment

Leave a Reply

Your email address will not be published. Required fields are marked *