ಕಾಂಗ್ರೆಸ್‍ನವರು ಮತದಾರರಿಗೆ ನೇರವಾಗಿ ಹಣ ಹಂಚಿದ್ದಾರೆ: ಈಶ್ವರಪ್ಪ

Public TV
1 Min Read

-ಎರಡು ಕ್ಷೇತ್ರದಲ್ಲಿ ಬಿಜೆಪಿ ಗೆಲ್ಲಲಿದೆ 

ಶಿವಮೊಗ್ಗ: ಉಪಚುನಾವಣೆಯಲ್ಲಿ ಎರಡು ಕ್ಷೇತ್ರದಲ್ಲಿ ಶತಾಯಗತಾಯ ಗೆಲ್ಲಲೇ ಬೇಕು ಎಂಬ ಕಾರಣದಿಂದ ಕಾಂಗ್ರೆಸ್‍ನವರು ಮತದಾರರಿಗೆ, ನೇರವಾಗಿ ಹಣ ಹಂಚಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಆರೋಪಿಸಿದ್ದಾರೆ.

bjp - congress

ಶಿವಮೊಗ್ಗದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ರಾಜ್ಯದ ಹಾನಗಲ್ ಹಾಗೂ ಸಿಂದಗಿ ಎರಡು ಕ್ಷೇತ್ರಗಳಲ್ಲಿ ಈಗಾಗಲೇ ಮತದಾನ ನಡೆದಿದ್ದು, ನಾಳೆ ಫಲಿತಾಂಶ ಹೊರ ಬೀಳಲಿದೆ. ಈ ಎರಡು ಕ್ಷೇತ್ರದಲ್ಲಿ ಶತಾಯಗತಾಯ ಗೆಲ್ಲಲೇ ಬೇಕು ಎಂಬ ಕಾರಣದಿಂದ ಕಾಂಗ್ರೆಸ್‍ನವರು ಮತದಾರರಿಗೆ ನೇರವಾಗಿ ಹಣ ಹಂಚಿದ್ದಾರೆ ಎಂದು ಕೆ.ಎಸ್.ಈಶ್ವರಪ್ಪ ಆರೋಪಿಸಿದ್ದಾರೆ. ಇದನ್ನೂ ಓದಿ: 5-6 ದಿನ ಪುನೀತ್ ಸಮಾಧಿ ಬಳಿ ಯಾರನ್ನೂ ಬಿಡಲ್ಲ: ಅರಗ ಜ್ಞಾನೇಂದ್ರ

ಚುನಾವಣೆ ಎಂದ ಮೇಲೆ ಎಲ್ಲಾ ಪಕ್ಷದವರು ತಂತ್ರಗಾರಿಕೆ ಮಾಡಿರುತ್ತಾರೆ. ಬಿಜೆಪಿ ಪಕ್ಷ ಯಡಿಯೂರಪ್ಪ ಹಾಗು ಬೊಮ್ಮಾಯಿ ಅವರ ನೇತೃತ್ವದಲ್ಲಿ ಎರಡು ಕ್ಷೇತ್ರದಲ್ಲಿ ಪ್ರಚಾರ ನಡೆಸಿತ್ತು. ಬಿಜೆಪಿಯಲ್ಲಿ ಪ್ರಧಾನಿ ಮೋದಿ ಅವರಂತಹ ನಾಯಕ, ಪಕ್ಷದ ಸಂಘಟನೆ, ಪಕ್ಷಕ್ಕೆ ಬೂತ್ ಮಟ್ಟದ ಕಾರ್ಯಕರ್ತರು ಇದ್ದಾರೆ. ಹೀಗಾಗಿ ಎರಡು ಕ್ಷೇತ್ರದಲ್ಲಿ ಬಿಜೆಪಿ ಬಹಳ ಅಂತರದಲ್ಲಿ ಗೆಲ್ಲಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ:  ಬಾಂಗ್ಲಾದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯವನ್ನ ಸಹಜ ಎನ್ನುವ ರೀತಿ ಬಿಂಬಿಸುವ ಕೆಲಸ ನಡೆಯುತ್ತಿದೆ: ಸಿ.ಟಿ.ರವಿ

Share This Article
Leave a Comment

Leave a Reply

Your email address will not be published. Required fields are marked *