ತುಮಕೂರು: ಜಿಲ್ಲೆಯಲ್ಲಿ ಮುಂದಿನ 6 ತಿಂಗಳೊಳಗಾಗಿ ಎಲ್ಲಾ 330 ಗ್ರಾಮ ಪಂಚಾಯತಿಗಳಲ್ಲಿ ಘನತ್ಯಾಜ್ಯ ನಿರ್ವಹಣೆ ಮಾಡಬೇಕೆಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್ ಈಶ್ವರಪ್ಪ ಗ್ರಾಮ ಪಂಚಾಯತಿ ಅಧ್ಯಕ್ಷರು ಹಾಗೂ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಿಗೆ ಸೂಚನೆ ನೀಡಿದರು.
ನಗರದ ಎಸ್.ಐ.ಟಿ ಕಾಲೇಜಿನ ಬಿರ್ಲಾ ಆಡಿಟೋರಿಯಂನಲ್ಲಿ ಬುಧವಾರ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಮೈಸೂರಿನ ಅಬ್ದುಲ್ ನಜೀರ್ಸಾಬ್ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಂಸ್ಥೆ, ಜಿಲ್ಲಾ ಪಂಚಾಯತಿಯ ಸಹಯೋಗದಲ್ಲಿ ಗ್ರಾಮ ಪಂಚಾಯ್ತಿಗಳ ಅಧ್ಯಕ್ಷರು ಮತ್ತು ಪಂಚಾಯ್ತಿ ಅಭಿವೃದ್ಧಿ ಅಧಿಕಾರಿಗಳಿಗಾಗಿ ಏರ್ಪಡಿಸಿದ್ದ ಒಂದು ದಿನದ ಕಾರ್ಯಗಾರದಲ್ಲಿ ಪಾಲ್ಗೊಂಡು ಮಾತನಾಡಿದರು. ಹೊಸದಾಗಿ ಆಯ್ಕೆಯಾಗಿರುವ ಗ್ರಾಮಪಂಚಾಯತಿ ಅಧ್ಯಕ್ಷರು ತಮ್ಮ ವ್ಯಾಪ್ತಿಯ ಗ್ರಾಮಗಳಲ್ಲಿ ಸ್ವಚ್ಛತೆ, ಕುಡಿಯುವ ನೀರಿನ ವ್ಯವಸ್ಥೆ, ಶೌಚಾಲಯ ಸೇರಿದಂತೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಆದ್ಯತೆ ನೀಡುವುದರೊಂದಿಗೆ ತ್ಯಾಜ್ಯ ನಿರ್ವಹಣೆ ಮಾಡಲು ಸೂಕ್ತ ಕಟ್ಟಡವನ್ನು ಗುರುತಿಸಬೇಕು ಎಂದು ನಿರ್ದೇಶನ ನೀಡಿದರು. ಇದನ್ನೂ ಓದಿ: ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಆ.30ರವರೆಗೆ ಯಾವುದೇ ಸೇವೆಗಳಿಗೆ ಅವಕಾಶವಿಲ್ಲ
ಗ್ರಾಮಪಂಚಾಯತಿ ಅಧ್ಯಕ್ಷರಾಗಿ ಆಯ್ಕೆಯಾಗುವ ಅವಕಾಶ ಎಲ್ಲರಿಗೂ ದೊರೆಯುವುದಿಲ್ಲ. ಗ್ರಾಮಗಳ ಅಭಿವೃದ್ಧಿಗೆ ಸಿಕ್ಕಿರುವ 5 ವರ್ಷಗಳ ಅಧಿಕಾರಾವಕಾಶವನ್ನು ಬಳಸಿಕೊಳ್ಳಬೇಕು. ಉತ್ತಮ ಕೆಲಸವನ್ನು ಮಾಡುವುದರ ಮೂಲಕ ನಂಬಿಕೆ ಇಟ್ಟು ಗೆಲ್ಲಿಸಿರುವ ಜನರ ಋಣವನ್ನು ತೀರಿಸಬೇಕು. ಪ್ರತಿ ದಿನ ಗ್ರಾಮಪಂಚಾಯತಿ ಕಚೇರಿಗೆ ಭೇಟಿ ನೀಡಿ, ಪಂಚಾಯತಿ ಸಮಸ್ಯೆಗಳ ಬಗ್ಗೆ ಪರಿಶೀಲಿಸಿ ಜನರ ವಿಶ್ವಾಸವನ್ನು ತೆಗೆದುಕೊಂಡು ಪರಿಹರಿಸಬೇಕು ಎಂದು ಗ್ರಾ.ಪಂ. ಅಧ್ಯಕ್ಷರಿಗೆ ಕಿವಿಮಾತು ಹೇಳಿದರು. ಇದನ್ನೂ ಓದಿ: ಬದಲಾಗಿದ್ದೇವೆ ಅಂತಲೇ ತಾಲಿಬಾನ್ ಹಿಂಸಾಚಾರ – ಪ್ರತಿಭಟನಾಕಾರರ ಮೇಲೆ ಗುಂಡಿನ ದಾಳಿ, ಇಬ್ಬರು ಬಲಿ
ದೇಶದ ಯಾವುದೇ ಉದ್ಯೋಗ ರಹಿತ ಪ್ರಜೆ ಉಪವಾಸವಿರಬಾರದೆಂದು ನರೇಗಾ ಯೋಜನೆಯನ್ನು ಜಾರಿಗೆ ತಂದಿದ್ದು, ಈ ಯೋಜನೆಯಡಿ ಬಡವರಿಗೆ ಉದ್ಯೋಗ ನೀಡುವ ಮೂಲಕ ಆರ್ಥಿಕವಾಗಿ ಸಬಲರನ್ನಾಗಿ ಮಾಡಬೇಕು. ನರೇಗಾ ಯೋಜನೆಯಡಿ ಅಂಗನವಾಡಿ ದುರಸ್ಥಿಯಲ್ಲದೆ ಶಾಲಾ ಕಟ್ಟಡ ದುರಸ್ಥಿಗೂ ಅವಕಾಶ ಮಾಡಿಕೊಡಲಾಗುವುದು. ನರೇಗಾ ಯೋಜನೆಯಡಿ ಕೇಂದ್ರದಿಂದ 13 ಕೋಟಿ ಮಾನವ ದಿನಗಳನ್ನು ಸೃಜಿಸಲು ಗುರಿ ನೀಡಲಾಗಿತ್ತು. ಗುರಿ ಮೀರಿದ ಸಾಧನೆಗಾಗಿ ಪ್ರಧಾನ ಮಂತ್ರಿ ಮೋದಿ ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ ಎಂದು ತಿಳಿಸಿದರು. ಇದನ್ನೂ ಓದಿ: ರಾಷ್ಟ್ರೀಯ ನಾಯಕರು ನಮ್ಮವರೇ, ಯಾರೂ ಹಗುರವಾಗಿ ಮಾತನಾಡಬಾರದು : ಶೋಭಾ ಕರಂದ್ಲಾಜೆ
ನರೇಗಾ ಯೋಜನೆಯಡಿ ಪ್ರತಿಯೊಬ್ಬರಿಗೂ ಕೆಲಸ ನಿರ್ವಹಿಸುವ ಅವಕಾಶವಿದ್ದು, ಉದ್ಯೋಗ ಚೀಟಿಯನ್ನು ಪಡೆದುಕೊಳ್ಳಬಹುದು. ಕಲ್ಯಾಣಿ, ಗೋಕಟ್ಟೆ, ಕೊಳವೆ ಬಾವಿಗೆ ಮರುಪೂರಣ ಗುಂಡಿ, ಕೃಷಿ ಹೊಂಡ, ಕೆರೆಗಳ ಹೂಳೆತ್ತುವುದು ಸೇರಿದಂತೆ ಅನೇಕ ಕಾಮಗಾರಿಗಳನ್ನು ಕೈಗೊಳ್ಳಬಹುದಾಗಿದೆ. ಗ್ರಾ.ಪಂ. ವ್ಯಾಪ್ತಿಯಲ್ಲಿರುವ ಕೆರೆ-ಕಟ್ಟೆ, ಕಲ್ಯಾಣಿಗಳು ಒತ್ತುವರಿಯಾಗದಂತೆ ಕ್ರಮವಹಿಸುವುದು ಪ್ರತೀ ಸದಸ್ಯನ ಹೊಣೆಗಾರಿಕೆಯಾಗಿದೆ ಎಂದರು. ಇದನ್ನೂ ಓದಿ: ತಾಲಿಬಾನಿಗಳಿಗೆ ಸಂಸದ ಬರ್ಖ್, ಓವೈಸಿ ಸಪೋರ್ಟ್ – ಸ್ವಾತಂತ್ರ್ಯ ಹೋರಾಟಗಾರರಿಗೆ ಉಗ್ರರ ಹೋಲಿಕೆ
ಪ್ರತಿ ಹಳ್ಳಿಗಳಲ್ಲು ಬಯಲು ಶೌಚಾಲಯ ಮುಕ್ತಗೊಳಿಸಲು ವೈಯಕ್ತಿಕ ಶೌಚಾಲಯ ನಿರ್ಮಾಣ ಮಾಡಿಕೊಳ್ಳಲು ಗ್ರಾಮ ಪಂಚಾಯ್ತಿಯ ಸದಸ್ಯರು, ಪಿಡಿಓಗಳು ಜನರಲ್ಲಿ ಅರಿವು ಮೂಡಿಸಬೇಕು. ವಿಶೇಷ ಘಟಕ ಯೋಜನೆಯಡಿ ಎಸ್.ಸಿ., ಎಸ್.ಟಿ ಸಮುದಾಯಗಳಿಗೆ ಶೌಚಾಲಯ ನಿರ್ಮಿಸಿಕೊಳ್ಳಲು ನೀಡಲಾಗುತ್ತಿದ್ದ 15 ಸಾವಿರ ರೂ.ಗಳ ಸಹಾಯಧನವನ್ನು 20 ಸಾವಿರ ರೂ.ಗಳಿಗೆ ಹೆಚ್ಚಿಸಲಾಗುವುದು ಎಂದು ಅವರು ತಿಳಿಸಿದರು.ಗ್ರಾ.ಪಂ. ಅಧ್ಯಕ್ಷರು, ಸದಸ್ಯರು ಪಕ್ಷಬೇಧ ಮರೆತು ತಮ್ಮ ಗ್ರಾಮದ ಕೆರೆಗಳನ್ನು ಅಭಿವೃದ್ಧಿಪಡಿಸಬೇಕು. ಗ್ರಾಮಪಂಚಾಯತಿಗಳಲ್ಲಿ ಪ್ರತಿವರ್ಷ ಹೊಸ ಯೋಜನೆಗಳನ್ನು ರೂಪಿಸಿ ಜನಪರ ಕೆಲಸಗಳನ್ನು ಕೈಗೊಳ್ಳಬೇಕು ಎಂದು ತಿಳಿಸಿದರು.
ಕ.ರಾ.ವಿ.ಯೋ.ಅ.ಸಮಿತಿಯ ಉಪಾಧ್ಯಕ್ಷ ಪ್ರಮೋದ್ ಹೆಗಡೆ, ಉಡುಪಿ ಜಿ.ಪಂ. ಯೋಜನಾಧಿಕಾರಿ ಶ್ರೀನಿವಾಸರಾವ್, ಪರಿಸರವಾದಿ ಶಿವಾನಂದ ಕಳವೆ, ಗ್ರಾಮಪಂಚಾಯತಿ ಆಯುಕ್ತಾಲಯದ ನಿರ್ದೇಶಕ ಯಾಲಕ್ಕಿಗೌಡ ಮಾತನಾಡಿದರು.ಕಾರ್ಯಾಗಾರಕ್ಕೆ ಗೈರು ಹಾಜರಾಗಿದ್ದ ಮಧುಗಿರಿ ತಾಲ್ಲೂಕು ಚಂದ್ರಗಿರಿ ಗ್ರಾ.ಪಂ ಪಂಚಾಯತಿ ಅಭಿವೃದ್ಧಿ ಅಧಿಕಾರಿಯನ್ನು ಅಮಾನತ್ತು ಮಾಡಲು ಸಚಿವ ಕೆ.ಎಸ್ ಈಶ್ವರಪ್ಪ ಅವರು ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಿದ್ಯಾಕುಮಾರಿ ಅವರಿಗೆ ನಿರ್ದೇಶನ ನೀಡಿದರು.