ಬಿಜೆಪಿ ಕಚೇರಿಗೆ ಮುತ್ತಿಗೆ – ಕಾಂಗ್ರೆಸ್ ಕಾರ್ಯಕರ್ತರು ವಶಕ್ಕೆ

Public TV
1 Min Read

ಕಲಬುರಗಿ: ನಗರದಲ್ಲಿ ಕಾಂಗ್ರೆಸ್ ಮುಖಂಡರು ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕುವ ಸಂದರ್ಭದಲ್ಲಿ ಮೂವತ್ತಕ್ಕೂ ಅಧಿಕ ಕಾಂಗ್ರೆಸ್ ಮುಖಂಡರನ್ನು ಪೊಲೀಸರು ವಶಕ್ಕೆ ಕರೆದೊಯ್ದಿರುವ ಘಟನೆ ನಗರದ ಎಸ್.ಟಿ.ಬಿ.ಟಿ.ಕ್ರಾಸ್ ಬಳಿ ನಡೆದಿದೆ.

ಕಾಂಗ್ರೆಸ್ ಭವನದಿಂದ ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಲು ಪ್ರಯತ್ನ ಮಾಡಿದ ಸಂದರ್ಭದಲ್ಲಿ ಈ ಘಟನೆ ನಡೆದಿದ್ದು, ಸಚಿವ ಕೆ.ಎಸ್. ಈಶ್ವರಪ್ಪ ವಿರುದ್ಧ ಧಿಕ್ಕಾರ ಕೂಗುತ್ತಾ ತಮ್ಮ ಆಕ್ರೋಶವನ್ನು ಹೊರಹಾಕಿದರು.

ದೇಶದಲ್ಲಿ ರಾಷ್ಟ್ರ ಧ್ವಜದ ಬದಲಾಗಿ, ಕೇಸರಿ ಭಗವಾನ್ ಧ್ವಜವನ್ನು ಹಾರಿಸುತ್ತೇವೆ ಎಂಬ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿಕೆ ವಿರೋಧಿಸಿ ಕಾಂಗ್ರೆಸ್ ಕಾರ್ಯಕರ್ತರು, ಮುಖಂಡರು ಬಿಜೆಪಿ ಕಚೇರಿ ಎದುರಿಗೆ ಪ್ರತಿಭಟನೆಯ ನಿರ್ಣಯವನ್ನು ಹಾಕಿಕೊಂಡಿದ್ದರು. ಇದನ್ನೂ ಓದಿ: ಮಲೆಮಹದೇಶ್ವರ ಜಾತ್ರಾಮಹೋತ್ಸವದ ಪೂರ್ವಸಿದ್ಧತೆಗಳ ಕುರಿತಂತೆ ಸಭೆ ನಡೆಸಿದ ಸೋಮಣ್ಣ

ಈ ವೇಳೆ ಎಚ್ಚೆತ್ತುಕೊಂಡ ಪೊಲೀಸರು ಪ್ರತಿಭಟನೆಯ ಮುನ್ನವೆ ಸುಮಾರು ಮೂವತ್ತಕ್ಕೂ ಅಧಿಕ ಕಾಂಗ್ರೆಸ್ ಮುಖಂಡರನ್ನು ವಶಕ್ಕೆ ಪಡೆದರು. ಈ ಸಂದರ್ಭದಲ್ಲಿ ಕಾರ್ಮಿಕ ಘಟಕದ ಅಧ್ಯಕ್ಷ ಪ್ರಕಾಶ್, ಜಿಲ್ಲಾ ಅಧ್ಯಕ್ಷ ಜಗದೇವ ಗುತ್ತೇದಾರ, ಶಿವಾನಂದ ಹೊನಗುಂಟಿ ಇತರರಿದ್ದರು. ಇದನ್ನೂ ಓದಿ: ತಾಕತ್ತಿದ್ದರೆ ನನ್ನನ್ನು ತುಂಡು, ತುಂಡು ಮಾಡಲಿ ನೋಡೋಣ: ಆಂದೋಲಾ ಶ್ರೀ ಕಿಡಿ

Share This Article
Leave a Comment

Leave a Reply

Your email address will not be published. Required fields are marked *