KSRTC ಅಂಬಾರಿ ಬಸ್ ಬೆಂಕಿಗಾಹುತಿ

Public TV
1 Min Read

– ಚಾಲಕನ ಜಾಗರೂಕತೆಯಿಂದ ತಪ್ಪಿದ ಬಾರಿ ಅನಾಹುತ

ಬೆಂಗಳೂರು: ಕೆಎಸ್‍ಆರ್ ಟಿಸಿ ಅಂಬಾರಿ ಬಸ್ ಬೆಂಕಿಗಾಹುತಿ ಆದ ಘಟನೆ ಬೆಂಗಳೂರಿನ ಕೆ.ಆರ್.ಪುರ ಸಮೀಪದ ಐಟಿಐ ತೂಗು ಸೇತುವೆ ಮೇಲೆ ನಡೆದಿದೆ.

ಬಸ್ ತಿರುಪತಿಯಿಂದ ಬೆಂಗಳೂರಿಗೆ ಆಗಮಿಸುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ. ಚಾಲಕನ ಜಾಗರೂಕತೆಯಿಂದ ಭಾರೀ ಅನಾಹುತ ತಪ್ಪಿದೆ. ಇಂಜಿನ್ ನಲ್ಲಿ ದೋಷ ಕಾಣಿಸಿಕೊಂಡ ಕಾರಣ ಬೆಂಕಿ ಹೊತ್ತಿಗೊಂಡಿದೆ. ಬಸ್ ಹಿಂಬದಿಯಲ್ಲಿ ಹೊಗೆಯಾಡುತ್ತಿರುವುದನ್ನು ಕಂಡು ಬಸ್ ಚಾಲಕ ಕೂಡಲೇ ಪ್ರಯಾಣಿಕರನ್ನು ಕೆಳಗಿಳಿಸಿದ್ದಾರೆ.

ಇಂದು ಬೆಳಗ್ಗಿನ ಜಾವ 5:30 ರಲ್ಲಿ ಈ ಘಟನೆ ಸಂಭವಿಸಿದ್ದು, ಘಟನೆ ವೇಳೆ ಬಸ್‍ನಲ್ಲಿ 20 ಜನ ಪ್ರಯಾಣಿಕರು ಸಂಚರಿಸುತ್ತಿದ್ದರು. ಸದ್ಯ ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ಭೇಟಿ ನೀಡಿ ಬೆಂಕಿ ನಂದಿಸುವ ಕಾರ್ಯ ನಡೆಸಿದಾರೆ.

ಈ ಬಗ್ಗೆ ಕೆ.ಆರ್.ಪುರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

Share This Article
Leave a Comment

Leave a Reply

Your email address will not be published. Required fields are marked *