KSRTC,  ಬೈಕ್ ಮುಖಾಮುಖಿ ಡಿಕ್ಕಿ – ಬಸ್ಸಿನ ಅಡಿಗೆ ಸಿಲುಕಿ ಸವಾರ ಸಾವು

1 Min Read

ಬೀದರ್: ಸಾರಿಗೆ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೀದರ್ (Bidar) ಜಿಲ್ಲೆಯ ಔರಾದ್ (Aurad) ತಾಲೂಕಿನ ಬಲ್ಲೂರು ಗ್ರಾಮದ ಬಳಿ ನಡೆದಿದೆ

ಬಲ್ಲೂರು ಮೂಲದ 36 ವರ್ಷದ ಬಸವರಾಜ ಕಂಟ್ಟೆಪ್ಪ ಸಾವನ್ನಪ್ಪಿದ ದುರ್ದೈವಿ. ಹೊಲದಲ್ಲಿ ನೀರುಣಿಸಲು ಬೈಕ್ ಮೇಲೆ ತೆರಳುತ್ತಿದ್ದ ವೇಳೆ ಅವಘಡ ಸಂಭವಿಸಿದೆ. ಇದನ್ನೂ ಓದಿ: ಹಾಸ್ಯನಟಿ ಭಾರ್ತಿ ಸಿಂಗ್‌, ಹರ್ಷ್‌ ಲಿಂಬಾಚಿಯಾ ದಂಪತಿಗೆ 2ನೇ ಮಗು ಜನನ

ಸಾರಿಗೆ ಬಸ್ ಬೀದರ್‌ನಿಂದ ಔರಾದ್‌ಗೆ ಸಂಚರಿಸುತ್ತಿತ್ತು. ಈ ವೇಳೆ ಬೈಕ್ ಸವಾರ ಕೂಡ ಅದೇ ರಸ್ತೆಯಲ್ಲಿ ಹೊರಟಿದ್ದು, ಬಸ್ ಹಾಗೂ ಬೈಕ್ ಮುಖಾಮುಖಿ ಡಿಕ್ಕಿಯಾಗಿದೆ. ಪರಿಣಾಮ ಬೈಕ್ ಸವಾರ ಬಸ್ಸಿನ ಅಡಿಗೆ ಸಿಲುಕಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಮೃತನ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ.

ಸ್ಥಳಕ್ಕೆ ಸಂತಪೂರ್ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.ಇದನ್ನೂ ಓದಿ: ಗುಜರಾತ್‌ SIR ಪ್ರಕಟ – 73.73 ಲಕ್ಷ ಮತದಾರರ ಹೆಸರು ಡಿಲೀಟ್‌

Share This Article