ಸಾರಿಗೆ ಮುಷ್ಕರ ನಿಲ್ಲಿಸಲು KSRTC, BMTC ಕೊನೆಯ ಕಸರತ್ತು

Public TV
1 Min Read

ಬೆಂಗಳೂರು: ಸಾರಿಗೆ ಮುಷ್ಕರ ನಿಲ್ಲಿಸಲು ಕೆಎಸ್‌ಆರ್‌ಟಿಸಿ ಈಗ ಕೊನೆಯ ಕಸರತ್ತು ಆರಂಭಿಸಿದೆ.

ಕೆಎಸ್‌ಆರ್‌ಟಿಸಿಯ ವ್ಯವಸ್ಥಾಪಕ ನಿರ್ದೇಶಕರಾದ ಅಕ್ರಂ‌ ಪಾಷಾ ಮತ್ತು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ವ್ಯವಸ್ಥಾಪಕ ನಿರ್ದೇಶಕ ರಾಮಚಂದ್ರನ್‌ ಪತ್ರ ಬರೆದು ಮನವಿ ಮಾಡಿದ್ದಾರೆ. ಇದನ್ನೂ ಓದಿ: ಸಾರಿಗೆ ಮುಷ್ಕರ – ಸಿಎಂ ಸಭೆಯಲ್ಲಿ ಏನಾಯ್ತು? ಸಾರಿಗೆ ಮುಖಂಡರು ಸಂಧಾನ ತಿರಸ್ಕರಿಸಿದ್ದು ಯಾಕೆ?

 

 ಪತ್ರದಲ್ಲಿ ಏನಿದೆ?
ಹೈಕೋರ್ಟ್‌ ಕಾರ್ಮಿಕ ಸಂಘಟನೆಗಳು ಕರೆ ನೀಡಿರುವ ಮುಷ್ಕರಕ್ಕೆ ತಡೆಯಾಜ್ಞೆ ನೀಡಿರುವುದರಿಂದ ಕೋರ್ಟ್‌ ಆದೇಶವನ್ನು ಗೌರವಿಸಬೇಕು. ಈಗಾಗಲೇ ಮಾನ್ಯ ಮುಖ್ಯಮಂತ್ರಿಗಳು ಸಹ ಸಕಾರಾತ್ಮಕವಾಗಿ‌ ಸ್ಪಂದಿಸಿರುವುದರಿಂದ, ಸಾರ್ವಜನಿಕ ಅಗತ್ಯ ಸೇವಾ ಸಂಸ್ಥೆಯಾಗಿರುವ ಸಾರಿಗೆ ಸಂಸ್ಥೆಯ ನೌಕರರು ನಾಳಿನ‌ ಮುಷ್ಕರದಲ್ಲಿ ಪಾಲ್ಗೊಳ್ಳಬಾರದೆಂದು ಮನವಿ ಮಾಡಲಾಗಿದೆ.

 

Share This Article