KSRTC ಬಸ್, ಕಾರು ಮುಖಾಮುಖಿ ಡಿಕ್ಕಿ – ಚಾಲಕ ಸಾವು, ಓರ್ವ ಗಂಭೀರ

Public TV
1 Min Read

ಮೈಸೂರು: ಕೆಎಸ್‌ಆರ್‌ಟಿಸಿ ಬಸ್ (KSRTC Bus) ಹಾಗೂ ಕಾರು ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಕಾರು ಚಾಲಕ ಸಾವನ್ನಪ್ಪಿದ್ದು, ಮತ್ತೋರ್ವ ಗಂಭೀರ ಗಾಯಗೊಂಡ ಘಟನೆ ಮೈಸೂರು (Mysuru) ಜಿಲ್ಲೆ ಕೆ.ಆರ್ ನಗರ (KR Nagar) ತಾಲೂಕಿನ ಮಂಚನಹಳ್ಳಿಯಲ್ಲಿ ನಡೆದಿದೆ.

ಅಪಘಾತದಲ್ಲಿ ಕಾರು ಚಾಲಕ ಮೈಸೂರಿನ ಕನಕದಾಸನಗರ ನಿವಾಸಿ ಸುನೀಲ್ (34) ಮೃತಪಟ್ಟಿದ್ದು, ರಮೇಶ್ ಎಂಬವರು ಗಂಭೀರ ಗಾಯಗೊಂಡಿದ್ದಾರೆ. ಮೂಲತಃ ಚಿಕ್ಕಮಗಳೂರಿನ ಮೂಡಿಗೆರೆ ನಿವಾಸಿಯಾದ ಸುನೀಲ್ ತಮ್ಮ ಕಾರಿನಲ್ಲಿ ಮೈಸೂರಿನಿಂದ ಹಾಸನದ ಕಡೆಗೆ ತೆರಳುತ್ತಿದ್ದರು. ಬಸ್ ಚಿಕ್ಕಮಗಳೂರಿನಿಂದ ಮೈಸೂರು ಕಡೆಗೆ ಬರುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಇದನ್ನೂ ಓದಿ: ಕುಕ್ಕೆ ಸುಬ್ರಹ್ಮಣ್ಯ ಅಧ್ಯಕ್ಷನಾಗಿ ರೌಡಿಶೀಟರ್ ನೇಮಕ – ನಾನು ಶಿಫಾರಸು ಪತ್ರ ಕೊಟ್ಟಿಲ್ಲ: ದಿನೇಶ್ ಗುಂಡೂರಾವ್

ಘಟನೆಯಲ್ಲಿ ಬಸ್‌ನಲ್ಲಿದ್ದ ಪ್ರಯಾಣಿಕರಿಗೆ ಸಣ್ಣಪುಟ ಗಾಯಗಳಾಗಿವೆ. ಕಾರಿನಲ್ಲಿದ್ದ ಉಳಿದವರಿಗೆ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಘಟನೆ ಸಂಬಂಧ ಕೆ.ಆರ್ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.  ಇದನ್ನೂ ಓದಿ: ಸಮಗ್ರ ಅಭಿವೃದ್ಧಿಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಸ್ಥಾಪನೆ: ದಿನೇಶ್ ಗುಂಡೂರಾವ್

Share This Article