ಪಂಕ್ಚರ್ ಆಗಿ ನಿಂತಿದ್ದ ಕ್ಯಾಂಟರ್‌ಗೆ ಸಾರಿಗೆ ಬಸ್ ಡಿಕ್ಕಿ – 20ಕ್ಕೂ ಹೆಚ್ಚು ಮಂದಿಗೆ ಗಾಯ

Public TV
1 Min Read

– ಬಸ್ ಚಾಲಕನ ಸ್ಥಿತಿ ಗಂಭೀರ

ರಾಮನಗರ: ಪಂಕ್ಚರ್ ಆಗಿ ನಿಂತಿದ್ದ ಕ್ಯಾಂಟರ್‌ಗೆ ಕೆಎಸ್‍ಆರ್‌ಟಿಸಿ (KSRTC) ಬಸ್ (Accident) ಡಿಕ್ಕಿಯಾಗಿ, 20ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ ಮಾಗಡಿಯ ಸೋಲೂರು ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

ಅಪಘಾತದಲ್ಲಿ ಬಸ್‍ನಲ್ಲಿದ್ದ 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಬಸ್ ಚಾಲಕನ ಸ್ಥಿತಿ ಗಂಭೀರವಾಗಿದೆ. ಅಪಘಾತದ ತೀವ್ರತೆಗೆ ಬಸ್ ನಜ್ಜುಗುಜ್ಜಾಗಿದ್ದು, ಸ್ಥಳೀಯರು ಜೆಸಿಬಿ ಬಳಸಿ ಚಾಲಕನನ್ನು ರಕ್ಷಿಸಿದ್ದಾರೆ. ಇದನ್ನೂ ಓದಿ: ಹೆಂಡತಿಯನ್ನು ಮನೆಗೆ ಕರೆದಿದ್ದಕ್ಕೆ ಚಾಕು ಇರಿದ ಬಾಮೈದ – ಆಸ್ಪತ್ರೆಯಲ್ಲಿ ಪ್ರಾಣಬಿಟ್ಟ ಪತಿ!

ಕ್ಯಾಂಟರ್ ಪಂಕ್ಚರ್ ಆಗಿ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಂತಿತ್ತು. ಇದನ್ನು ಗಮನಿಸದೇ ಚಾಲಕ ಬಸ್ ಚಲಾಯಿಸಿಕೊಂಡು ಬಂದಿದ್ದಾನೆ. ಪರಿಣಾಮ ಬಸ್ ಕ್ಯಾಂಟರ್‍ನ ಹಿಂಭಾಗಕ್ಕೆ ಡಿಕ್ಕಿಯಾಗಿದೆ. ಬಸ್ ಚಿಕ್ಕಮಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿತ್ತು ಎಂದು ತಿಳಿದು ಬಂದಿದೆ.

ಗಾಯಾಳುಗಳನ್ನು ನೆಲಮಂಗಲ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಸೋಲೂರು ಪೊಲೀಸರ ಭೇಟಿ ನೀಡಿ, ಪ್ರಕರಣ ದಾಖಲಿಸಿಕೊಂಡು, ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಸೀಜ್ ಆಗಿದ್ದ ಹಣಕ್ಕೆ ಕನ್ನ ಹಾಕಿದ ಸೈಬರ್ ವಂಚಕರು – ನಕಲಿ ಕೋರ್ಟ್ ಆರ್ಡರ್ ತಯಾರಿಸಿ 1.32 ಕೋಟಿ ಲೂಟಿ

Share This Article