Tumakuru | ಟೈಯರ್ ಬ್ಲಾಸ್ಟ್ ಆಗಿ ಮನೆಗೆ ನುಗ್ಗಿದ KSRTC ಬಸ್

Public TV
1 Min Read

– ಬಸ್ಸಿನಲ್ಲಿದ್ದ 10ಕ್ಕೂ ಹೆಚ್ಚು ಜನರಿಗೆ ಸಣ್ಣಪುಟ್ಟ ಗಾಯ

ತುಮಕೂರು: ಚಲಿಸುತ್ತಿದ್ದ ಬಸ್ಸಿನ ಟೈರ್ ಬ್ಲಾಸ್ಟ್ (Tyre Blast) ಆದ ಪರಿಣಾಮ ನಿಯಂತ್ರಣ ತಪ್ಪಿ ಕೆಎಸ್‌ಆರ್‌ಟಿಸಿ (KSRTC) ಬಸ್ ಮನೆಗೆ ನುಗ್ಗಿದ ಘಟನೆ ತುಮಕೂರು (Tumakuru) ಜಿಲ್ಲೆ ತಿಪಟೂರು ತಾಲೂಕಿನ ಸಿದ್ದಾಪುರ ಗ್ರಾಮದಲ್ಲಿ ನಡೆದಿದೆ.

ಚಾಲಕನ ನಿಯಂತ್ರಣ ತಪ್ಪಿ ಬಸ್ ಮನೆಗೆ ನುಗ್ಗಿದ್ದು, ಅದೃಷ್ಟವಶಾತ್ ಪ್ರಯಾಣಿಕರು ಪ್ರಾಣಪಾಯದಿಂದ ಪಾರಾಗಿದ್ದಾರೆ. ಸಿದ್ದಪುರ ಗ್ರಾಮದ ಬಳಿ ಹಾದುಹೋಗಿರುವ ರಾಷ್ಟ್ರೀಯ ಹೆದ್ದಾರಿ 206ರ ಸಮೀಪವೇ ಇರುವ ಪುಟ್ಟಣ್ಣ ಎಂಬುವರ ಮನೆಗೆ ಬಸ್ ನುಗ್ಗಿದೆ. ಬಸ್ ನುಗ್ಗಿದ ರಭಸಕ್ಕೆ ಗೋಡೆ ಪುಲ್ ಡ್ಯಾಮೇಜ್ ಆಗಿದೆ. ಇದನ್ನೂ ಓದಿ: ಗಾಳಿಯಲ್ಲಿ ಗುಂಡು ಹಾರಿಸಿ ಹುಟ್ಟುಹಬ್ಬ ಆಚರಣೆ – ಪಂಚಾಯತ್‌ ಸದಸ್ಯ ಅರೆಸ್ಟ್‌

ಆಗುಂಬೆಯಿಂದ ಕೋಲಾರಕ್ಕೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ಸಿನ ಟೈರ್ ಬ್ಲಾಸ್ಟ್ ಆಗಿ ಏಕಾಏಕಿ ರಸ್ತೆ ಬದಿಯಿದ್ದ ಮನೆಗೆ ಡಿಕ್ಕಿ ಹೊಡೆದಿದೆ. ಬಸ್‌ನಲ್ಲಿದ್ದ 10ಕ್ಕೂ ಹೆಚ್ಚು ಜನರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಾಳುಗಳನ್ನ ತಿಪಟೂರು ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನಾ ಸ್ಥಳಕ್ಕೆ ತಿಪಟೂರು ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಮಹಾರಾಷ್ಟ್ರದ ಪಶ್ಚಿಮ ಘಟ್ಟ ಪ್ರದೇಶದಲ್ಲಿ ಧಾರಾಕಾರ ಮಳೆ – ಗೋಕಾಕ್ ಜಲಪಾತಕ್ಕೆ ಜೀವಕಳೆ

Share This Article