KSRTC ಬಸ್‌ ಚಲಾಯಿಸುವಾಗಲೇ ಹೃದಯಾಘಾತ – ಪ್ರಯಾಣಿಕರನ್ನು ರಕ್ಷಿಸಿ ಪ್ರಾಣಬಿಟ್ಟ ಚಾಲಕ

Public TV
1 Min Read

ನೆಲಮಂಗಲ: ಬಸ್ ಚಲಾಯಿಸುವಾಗ ಎದೆನೋವು ಕಾಣಿಸಿಕೊಂಡರೂ ಲೆಕ್ಕಿಸದೇ ಪ್ರಯಾಣಿಕರ ರಕ್ಷಣೆಗಾಗಿ ಬಸ್ ನಿಲ್ಲಿಸಿ ಚಾಲಕ ಪ್ರಾಣಬಿಟ್ಟಿರುವ ಘಟನೆ ಬೆಂಗಳೂರು (Bengaluru) ಹೊರವಲಯದ ನೆಲಮಂಗಲ (Nelamangala) ಟೋಲ್ ಬಳಿ ನಡೆದಿದೆ.

ಉತ್ತರ ಕರ್ನಾಟಕ ಮೂಲದ ರಾಜೀವ್ ಬಿರಾದಾರ ಮೃತ ಕೆಎಸ್‌ಆರ್‌ಟಿಸಿ ಚಾಲಕ. ಬಸ್ ಬೆಂಗಳೂರಿನ ಮೆಜೆಸ್ಟಿಕ್‌ನಿಂದ ದಾವಣಗೆರೆಯ ಹರಿಹರಕ್ಕೆ ತೆರಳುತ್ತಿತ್ತು ಎಂದು ತಿಳಿದುಬಂದಿದೆ.ಇದನ್ನೂ ಓದಿ: ವೈದ್ಯಕೀಯ ಸೀಟ್‌ಗಾಗಿ ಕಿವುಡರಾದ 21 ಅಭ್ಯರ್ಥಿಗಳು – ನಕಲಿ ದಾಖಲೆ ನೀಡಿದ್ದವರು ಲಾಕ್

ಬೆಂಗಳೂರಿನಿಂದ ಹೊರಟ ಬಸ್ ನೆಲಮಂಗಲ ಟೋಲ್ ಸಮೀಪಿಸುತ್ತಿದ್ದಂತೆ ಚಾಲಕನಿಗೆ ಎದೆನೋವು ಕಾಣಿಸಿಕೊಂಡಿದೆ. ನೋವಿನಲ್ಲಿಯೂ ಬಸ್ ನಿಲ್ಲಿಸಿ ಪ್ರಯಾಣಿಕರ ಪ್ರಾಣ ಕಾಪಾಡಿದ್ದಾರೆ. ಈ ವೇಳೆ ಪ್ರಯಾಣಿಕರು 108ಗೆ ಕರೆ ಮಾಡಿ, ಆಂಬುಲೆನ್ಸ್ ಕರೆಯಿಸಿಕೊಂಡಿದ್ದಾರೆ. ದುರದೃಷ್ಟವಶಾತ್ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆಯೇ ಚಾಲಕ ಸಾವನ್ನಪ್ಪಿದ್ದಾರೆ.

ನೆಲಮಂಗಲ ಸಾರ್ವಜನಿಕ ಆಸ್ಪತ್ರೆ ವೈದ್ಯರು ಸಾವನ್ನಪ್ಪಿರುವುದಾಗಿ ಧೃಡಪಡಿಸಿದ್ದು, ಮೃತದೇಹವನ್ನು ಶವಾಗಾರಕ್ಕೆ ರವಾನಿಸಲಾಗಿದೆ. ಸದ್ಯ ನೆಲಮಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಇದನ್ನೂ ಓದಿ: ಪ್ರಿಯಕರನ ಎದುರೇ ಯುವತಿಯ ಮೇಲೆ ಗ್ಯಾಂಗ್ ರೇಪ್ – ಮೂವರು ಅರೆಸ್ಟ್

Share This Article