ಚಾ.ನಗರ: SSLC, 2nd PUC ಪರೀಕ್ಷೆ – ವಿದ್ಯಾರ್ಥಿಗಳಿಗೆ ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಉಚಿತ ಪ್ರಯಾಣ

By
1 Min Read

ಚಾಮರಾಜನಗರ: ಮಾರ್ಚ್‌ನಿಂದ ನಡೆಯಲಿರುವ ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಗಳಲ್ಲಿ ಹಾಜರಾಗುವ ವಿದ್ಯಾರ್ಥಿಗಳಿಗೆ ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಉಚಿತ ಪ್ರಯಾಣಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ.

ಈ ಕುರಿತು ಚಾಮರಾಜನಗರ ಜಿಲ್ಲಾಧಿಕಾರಿ ಶಿಲ್ಪಾನಾಗ್ ಅವರು ಮಾಹಿತಿ ನೀಡಿದ್ದಾರೆ. ಮಾ.1 ರಿಂದ ದ್ವಿತೀಯ ಪಿಯುಸಿ, ಮಾ.21 ರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ನಡೆಯಲಿವೆ. ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಉಚಿತ ಪ್ರಯಾಣ ಮಾಡಬಹುದು ಎಂದು ತಿಳಿಸಿದ್ದಾರೆ.

ಚಾಮರಾಜನಗರ ಜಿಲ್ಲೆಯಲ್ಲಿ ಪಿಯುಸಿಗೆ 17 ಪರೀಕ್ಷಾ ಕೇಂದ್ರ, ಎಸ್‌ಎಸ್‌ಎಲ್‌ಸಿಗೆ 47 ಪರೀಕ್ಷಾ ಕೇಂದ್ರಗಳನ್ನು ಸ್ಥಾಪನೆ ಮಾಡಲಾಗಿದೆ. ಪರೀಕ್ಷಾ ಕೇಂದ್ರಗಳಿರುವ ಸ್ಥಳಗಳಿಗೆ ಕೆಎಸ್‌ಆರ್‌ಟಿಸಿ ಹೆಚ್ಚುವರಿ ಬಸ್ ಸಂಚಾರಕ್ಕೆ ಕ್ರಮ ಕೈಗೊಳ್ಳಲಾಗುವುದು. ಪರೀಕ್ಷಾ ಕೇಂದ್ರದ ಪ್ರತಿ ಕೊಠಡಿಗೂ ಸಿಸಿ ಕ್ಯಾಮೆರಾಗಳ ಅಳವಡಿಕೆ ಮಾಡಲಾಗುವುದು ಎಂದು ಮಾಹಿತಿ ನೀಡಿದ್ದಾರೆ.

ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಒಟ್ಟು 7,364 ಹಾಗೂ ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು 12,432 ವಿದ್ಯಾರ್ಥಿಗಳು ಬರೆಯಲಿದ್ದಾರೆ. ಪರೀಕ್ಷೆ ನಡೆಸಲು ಜಿಲ್ಲಾಡಳಿತ ಸಜ್ಜಾಗಿದೆ ಎಂದು ಡಿಸಿ ತಿಳಿಸಿದ್ದಾರೆ.

Share This Article