ಕೆಎಸ್‌ಆರ್‌ಟಿಸಿ ಡಿವಿಜನಲ್ ಸೆಕ್ಯುರಿಟಿ ಇನ್ಸ್‌ಪೆಕ್ಟರ್ ಅನುಮಾನಾಸ್ಪದ ಸಾವು

By
1 Min Read

ಬಳ್ಳಾರಿ: ಕೆಎಸ್‌ಆರ್‌ಟಿಸಿ ಡಿವಿಜನಲ್ ಸೆಕ್ಯುರಿಟಿ ಇನ್ಸ್‌ಪೆಕ್ಟರ್ (KSRTC Divisional Security Inspector) ಒಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಬಳ್ಳಾರಿ (Security Inspector) ನಗರದ ಕೇಂದ್ರ ಕಾರಾಗೃಹದ ಬಳಿ ನಡೆದಿದೆ.

ಹುಸೇನಪ್ಪ (54) ಮೃತ ಸೆಕ್ಯುರಿಟಿ. ಅವರ ತಲೆಗೆ ಬಲವಾದ ಗಾಯಗಳಾಗಿದ್ದು, ಮಾರಕಾಸ್ತ್ರಗಳಿಂದ ಹೊಡೆದು ಕೊಲೆ ಮಾಡಿರುವ ಶಂಕೆ ಎದುರಾಗಿದೆ. ಹುಸೇನಪ್ಪ ಬೈಕ್‌ನಲ್ಲಿ ಬಸ್ ನಿಲ್ದಾಣಕ್ಕೆ ಹೋಗುತ್ತಿದ್ದ ಸಂದರ್ಭ ಈ ಘಟನೆ ನಡೆದಿದೆ.

ಕೆಎಸ್‌ಆರ್‌ಟಿಸಿಯಲ್ಲಿ ಕಳೆದ 20 ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿದ್ದ ಹುಸೇನಪ್ಪ ಬೀದರ್‌ನಲ್ಲಿ ನಡೆಯಲಿರುವ ಚಾಲಕರ ನೇಮಕಾತಿ ಪರೀಕ್ಷೆಗೆ ತೆರಳುತ್ತಿದ್ದರು. ಅವರು ಮನೆಯಿಂದ ಬಸ್ ನಿಲ್ದಾಣಕ್ಕೆ ಹೋಗುವ ವೇಳೆ ಹತ್ಯೆ ನಡೆಸಲಾಗಿದೆ ಎನ್ನಲಾಗಿದೆ. ಇದನ್ನೂ ಓದಿ: ಹಿಟ್ ಆ್ಯಂಡ್ ರನ್ ಕೇಸ್‌ಗೆ ತಂದೆ, ಮಗ ಬಲಿ – ಮತ್ತೋರ್ವನ ಸ್ಥಿತಿ ಗಂಭೀರ

ಸ್ಥಳಕ್ಕೆ ಎಸ್‌ಪಿ ರಂಜಿತ್ ಕುಮಾರ್ ಬಂಡಾರು, ಕೆಎಸ್‌ಆರ್‌ಟಿಸಿ ಡಿಸಿ ದೇವರಾಜ್, ಗಾಂಧಿ ನಗರ ಪೊಲೀಸ್ ಠಾಣೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ವೃದ್ಧೆಯನ್ನು ಛತ್ರಿಯಿಂದ ಹೊಡೆದು ಕೊಂದ ವೃದ್ಧ!

Web Stories

Share This Article
ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌ ಯೋಗ ದಿನದಂದು ನಟಿ ಪ್ರಣಿತಾ ಯೋಗ… ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್