ಬೆಂಗಳೂರು – ಸಿಗಂದೂರು ನಡುವೆ ಕೆಎಸ್ಆರ್‌ಟಿಸಿ ನಾನ್ ಎಸಿ ಸ್ಲೀಪರ್ ಬಸ್ ಸಂಚಾರ ಆರಂಭ

Public TV
1 Min Read

ಶಿವಮೊಗ್ಗ: ನೂತನ ಸೇತುವೆ ಉದ್ಘಾಟನೆಯಾದ ಬೆನ್ನಲ್ಲೇ ಬೆಂಗಳೂರಿನಿಂದ (Bengaluru) ಸಿಗಂದೂರಿಗೆ (Siganduru) ಕೆಎಸ್‌ಆರ್‌ಟಿಸಿ ನಾನ್​ ಎಸಿ ಬಸ್​ ಸಂಚಾರ ಆರಂಭವಾಗಿದೆ. ಈ ಬಗ್ಗೆ ಕೆಎಸ್​ಆರ್​ಟಿಸಿ ಪ್ರಕಟಣೆಯಲ್ಲಿ ತಿಳಿಸಿದೆ.

ಪ್ರಯಾಣಿಕರ ಅನುಕೂಲಕ್ಕಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು (KSRTC) ಬೆಂಗಳೂರು ಮತ್ತು ಸಿಗಂದೂರು ನಡುವೆ ಹೊಸದಾಗಿ ನಾನ್ ಎಸಿ ಸ್ಲೀಪರ್ ಬಸ್​ (Non AC Sleeper Bus) ಪ್ರಾರಂಭಿಸಿದೆ. ಆ. 22 ರಿಂದ ಸಂಚಾರ ಆರಂಭಿಸಿದೆ. ಬೆಂಗಳೂರಿನಿಂದ ರಾತ್ರಿ 9:40ಕ್ಕೆ ಹೊರಟು ಚಿತ್ರದುರ್ಗ, ಹೊಳಲ್ಕೆರೆ, ಚನ್ನಗಿರಿ, ಮತ್ತು ಶಿವಮೊಗ್ಗ ತಲುಪಲಿದೆ. ಬಳಿಕ ಸಿಗಂದೂರನ್ನು ಬೆಳಗ್ಗೆ 6 ಗಂಟೆಗೆ ತಲುಪಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ. ಇದನ್ನೂ ಓದಿ: 60 ವರ್ಷಗಳ ಕನಸು ನನಸು | ಇಂದು ಸಿಗಂದೂರು ಸೇತುವೆ ಲೋಕಾರ್ಪಣೆ – ಬ್ರಿಡ್ಜ್‌ ಬಗ್ಗೆ ಇಲ್ಲಿದೆ ಸಂಪೂರ್ಣ ಮಾಹಿತಿ

ಸಿಗಂದೂರು ಕಡೆಯಿಂದ ರಾತ್ರಿ 8 ಗಂಟೆಗೆ ಹೊರಡಲಿದ್ದು, ಬೆಂಗಳೂರಿಗೆ ಬೆಳಗಿನ ಜಾವ 4:15 ಕ್ಕೆ ತಲುಪಲಿದೆ. ಟಿಕೆಟ್​ ದರ 950 ರೂ. ನಷ್ಟಿದೆ. ಟಿಕೆಟ್‌ಗಳನ್ನು KSRTCಯ ಅಧಿಕೃತ ವೆಬ್‌ಸೈಟ್‌ಗಳಾದ www.ksrtc.in ಮತ್ತು www.ksrtc.karnataka.gov.in ಮೂಲಕ ಕಾಯ್ದಿರಿಸಬಹುದು. ಮಾಹಿತಿಗಾಗಿ 080-26252625, 7760990100,7760990560, 7760990287 ನಂಬರ್​ಗಳನ್ನು ಸಂಪರ್ಕಿಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

ಬಸ್‌ ಸಂಚಾರದಿಂದ ಬೆಂಗಳೂರಿನಿಂದ ಸಿಗಂದೂರು ದೇವಾಲಯಕ್ಕೆ ತೆರಳುವವರಿಗೆ ಅನುಕೂಲವಾಗಲಿದೆ. ಅಲ್ಲದೇ ಒಂದೇ ದಿನದಲ್ಲಿ ಸಿಗಂದೂರು ಸಮೀಪದ ಕೆಲವು ಪ್ರವಾಸಿ ತಾಣಗಳಲ್ಲಿ ಸುತ್ತಿ ವಾಪಸ್‌ ಬರುವ ಅವಕಾಶ ಸಿಕ್ಕಂತಾಗಿದೆ.  ಇದನ್ನೂ ಓದಿ: ಸಿಗಂದೂರು ಸೇತುವೆ ಮೇಲೆ ವ್ಹೀಲಿಂಗ್ – ಪೊಲೀಸರಿಂದ ಪುಂಡನಿಗೆ ದಂಡದ ರುಚಿ!

Share This Article