KSRTC ಎಲೆಕ್ಟ್ರಿಕ್‌ ಬಸ್‌ ಸೇವೆಗೆ ಚಾಲನೆ – ಒಂದು ಬಾರಿ ಚಾರ್ಜ್‌ ಮಾಡಿದ್ರೆ 300 ಕಿ.ಮೀ ಸಂಚಾರ

By
1 Min Read

ಬೆಂಗಳೂರು: ಕೆಎಸ್‌ಆರ್‌ಟಿಸಿಯ(KSRTC) ಅಂತರ ನಗರ ಎಲೆಕ್ಟ್ರಿಕ್‌ ಬಸ್‌(Electric Bus) ಸೇವೆಗೆ ಶಾಂತಿನಗರದಲ್ಲಿರುವ ಕೇಂದ್ರ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಚಾಲನೆ ನೀಡಲಾಗಿದೆ.

ಭಾರತ ಸರ್ಕಾರದ ಮೇಕ್ ಇನ್ ಇಂಡಿಯಾ(Make In India) ವಿದ್ಯುತ್ ಬಸ್ ಫೇಮ್-2 ಯೋಜನೆ ಅಡಿಯಲ್ಲಿ 50 ಅಂತರ ನಗರ ಹವಾ ನಿಯಂತ್ರಿತ ವಿದ್ಯುತ್‍ ಚಾಲಿತ ಬಸ್ಸುಗಳನ್ನು ಮುಂದಿನ ದಿನಗಳಲ್ಲಿ ಕಾರ್ಯಾಚರಣೆಗೊಳಿಸಲಿದೆ.

ನಿಗಮವು ತನ್ನ ವಿದ್ಯುತ್ ವಾಹನಗಳಿಗೆ ‘ಇವಿ ಪವರ್ ಪ್ಲಸ್’ ಎಂದು ಹೆಸರಿಸಲಾಗಿದ್ದು ‘ಅತ್ಯುತ್ತಮ ಅನುಭವ’ ಎಂದು ಟ್ಯಾಗ್‍ಲೈನ್‌ ನೀಡಲಾಗಿದೆ.

ಈ ಪ್ರಾಯೋಗಿಕ ಯಶಸ್ವಿ ಕಾರ್ಯಾಚರಣೆ ನಂತರ  ಬೆಂಗಳೂರಿನಿಂದ ಮೈಸೂರು, ಮಡಿಕೇರಿ, ವಿರಾಜಪೇಟೆ, ದಾವಣಗೆರೆ, ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಮಾರ್ಗಗಳಲ್ಲಿ ಕಾರ್ಯಚರಣೆಗೊಳಿಸಲು ಯೋಜಿಸಲಾಗಿದೆ. ವಿದ್ಯುತ್ ವಾಹನಗಳ ಚಾರ್ಜಿಂಗ್‌ ಕೇಂದ್ರವನ್ನು ಬೆಂಗಳೂರಿನ ಕೆಂಪೇಗೌಡ ಬಸ್‌ ನಿಲ್ದಾಣ, ಮೈಸೂರು, ಮಡಿಕೇರಿ, ವಿರಾಜಪೇಟೆ, ದಾವಣಗೆರೆ, ಶಿವಮೊಗ್ಗ ಹಾಗೂ ಚಿಕ್ಕಮಗಳೂರಿನಲ್ಲಿ ಸ್ಥಾಪಿಸಲಾಗುವುದು.

ಎಂಇಐಎಲ್‌ ಹಾಗೂ ಕೆಎಸ್‌ಆರ್‌ಟಿಸಿ ಜಂಟಿಯಾಗಿ ರಸ್ತೆಗಿಳಿಸುತ್ತಿರುವ ಪರಿಸರ ಸ್ನೇಹಿ ಬಸ್‌ ಎರಡೂವರೆ ತಾಸು ಚಾರ್ಜ್‌ ಮಾಡಿದರೆ 300 ಕಿ.ಮೀ ಕ್ರಮಿಸುವಷ್ಟು ಸಾಮರ್ಥ್ಯ ಹೊಂದಿದೆ. ಸಂಪೂರ್ಣ ಹವಾನಿಯಂತ್ರಿತ ವ್ಯವಸ್ಥೆಯಿದೆ.

ಸಂಚರಿಸುವ ಹೊತ್ತಲ್ಲೇ ಅರ್ಧದಷ್ಟು ಬ್ಯಾಟರಿ ರಿಚಾರ್ಜ್‌ ಆಗುವ ರಿ ಜನರೇಷನ್‌ ಆಗುವ ಸಿಸ್ಟಮ್‌ ಇದಾಗಿದೆ. ಬಸ್‌ ಒಳಗೆ ಪ್ರಯಾಣಿಕರ ಅನುಕೂಲಕ್ಕೆ ಮೊಬೈಲ್‌ ಚಾರ್ಜಿಂಗ್‌ ಸ್ಪಾಟ್‌, ಮನರಂಜನೆಗಾಗಿ 2 ಟಿವಿ ಅಳವಡಿಸಲಾಗಿದೆ. ಒಟ್ಟಾರೆ ಬಸ್‌ 43 + 2 ಸೀಟಿಂಗ್‌ ಕೆಪಾಸಿಟಿ ಹೊಂದಿದೆ. ಬಸ್‌ ಸಂಪೂರ್ಣ ಸೆನ್ಸರ್‌ ಇರಲಿದೆ. ಮುಂದುಗಡೆ ಮತ್ತು ಹಿಂದುಗಡೆ ಕ್ಯಾಮೆರಾ ವ್ಯವಸ್ಥೆ ಇರಲಿದೆ. ಇದನ್ನೂ ಓದಿ: ಸಾಲ ಮಾಡಿ ವಿದೇಶಕ್ಕೆ ಪರಾರಿ – ಫೆಬ್ರವರಿಯಲ್ಲಿ ನೀರವ್‌ ಮೋದಿ ಆಸ್ತಿ ಹರಾಜು

ಈ ವೇಳೆ, ಅಪಘಾತದಲ್ಲಿ ಮೃತಪಟ್ಟ ಚಾಲಕನ ಕುಟುಂಬದ ಅವಲಂಬಿತರಿಗೆ ಅಪಘಾತ ಪರಿಹಾರ ವಿಮಾ ಸೌಲಭ್ಯದ 1 ಕೋಟಿ ರೂ. ಚೆಕ್ ಹಸ್ತಾಂತರಿಸಲಾಯ್ತು. ಅಂತರ ನಿಗಮ ವರ್ಗಾವಣೆ 1013 ನೌಕರರಿಗೆ ವರ್ಗಾವಣೆ ಆದೇಶವನ್ನು ನೀಡಲಾಯಿತು.

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *