ಬಳ್ಳಾರಿ: ಕೂಡ್ಲಿಗಿ ಹಾಗೂ ಸುತ್ತಮುತ್ತ ಬಾರಿ ಮಳೆ ಸುರಿದ ಭಾರೀ ಮಳೆ (Rain) ಪರಿಣಾಮ ಕೂಡ್ಲಿಗಿ ದೊಡ್ಡ ಕೆರೆ (Kudligi Lake) ಕೋಡಿ ಬಿದ್ದಿದೆ. ಇದೇ ಮೊದಲ ಬಾರಿಗೆ ಆಗಸ್ಟ್ ತಿಂಗಳಲ್ಲಿ ಕೆರೆ ಕೋಡಿ ಬಿದ್ದಿದ್ದು ರೈತರ (Farmers) ಮೊಗದಲ್ಲಿ ಮಂದಹಾಸ ಮೂಡಿಸಿದೆ.
ತಡರಾತ್ರಿ ಸುರಿದ ಭಾರೀ ಮಳೆಗೆ ಹಳ್ಳ ಕೊಳ್ಳಗಳು ತುಂಬಿ ಹರಿಯುತ್ತಿವೆ. ಮೆಕ್ಕೆಜೋಳ, ಜೋಳ, ಶೇಂಗಾ ಬೆಳೆಯುವ ರೈತರಿಗೆ ಸದ್ಯ ಮಳೆಯ ಅವಶ್ಯಕತೆ ಇತ್ತು. ಮತ್ತೊಂದೆಡೆ ಕೂಡ್ಲಿಗಿ ದೊಡ್ಡ ಕೆರೆ ಕೋಡಿ ಬಿದ್ದ ಪರಿಣಾಮ ಕೆರೆ ಕೋಡಿ ಬಿದ್ದ ಜಾಗ ಪ್ರವಾಸಿತಾಣದಂತಾಗಿದ್ದು, ಕೆರೆಯ ಮುಂಭಾಗ ಮೊಬೈಲ್ ಮೂಲಕ ಸೆಲ್ಫಿ ತೆಗೆದುಕೊಳ್ಳಲು ಯುವಕರು ಮುಂದಾಗುತ್ತಿದ್ದಾರೆ. ಇದನ್ನೂ ಓದಿ: ಬೈಕ್ ಸಮೇತ ನೀರಿನಲ್ಲಿ ಕೊಚ್ಚಿ ಹೋದ ವ್ಯಕ್ತಿ
ರಾಜ್ಯದಲ್ಲಿ ಮಳೆಯ (Rain) ಆರ್ಭಟ ಮುಂದುವರಿದಿದ್ದು, ಇಂದು 5 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ (Orange Alert) ಘೋಷಣೆ ಮಾಡಲಾಗಿದೆ. ಇದನ್ನೂ ಓದಿ: ಮೈಸೂರು | ಲಾರಿ ಚಲಿಸುತ್ತಿದ್ದಾಗಲೇ ಹಠಾತ್ತನೆ ಕುಸಿದ ಸೇತುವೆ
ಹವಾಮಾನ ಇಲಾಖೆಯು ಕೊಡಗು (Kodagu), ಉಡುಪಿ, ದಕ್ಷಿಣ ಕನ್ನಡ, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಿದೆ. ಉಳಿದ ಎಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದ್ದು, ಭಾರೀ ಮಳೆಯ ಮುನ್ಸೂಚನೆ ನೀಡಿದೆ.