ರಾಮನಗರ ಜಿಲ್ಲೆ ದುಸ್ಥಿತಿಗೆ ಕುಮಾರಸ್ವಾಮಿ ಕುಟುಂಬ ಕಾರಣ: ಸಿದ್ದರಾಮಯ್ಯ

Public TV
1 Min Read

ರಾಮನಗರ: ಜಿಲ್ಲೆಯಲ್ಲಿ 20 ವರ್ಷ ಜೆಡಿಎಸ್ (JDS) ಅಧಿಕಾರ ಹಿಡಿದಿತ್ತು. ಆದರೆ ಒಂದೂ ಅಭಿವೃದ್ಧಿ ಕೆಲಸ ಮಾಡಿಲ್ಲ. ಜಿಲ್ಲೆಯ ದುಸ್ಥಿತಿಗೆ ಕುಮಾರಸ್ವಾಮಿ (H.D.Kumaraswamy) ಕುಟುಂಬ ಕಾರಣ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaih) ಜೆಡಿಎಸ್ ವಿರುದ್ಧ ಕಿಡಿಕಾರಿದ್ದಾರೆ.

ರಾಮನಗರದಲ್ಲಿ (Ramanagara) ಗುರುವಾರ ಆಯೋಜಿಸಿದ್ದ ಐಕ್ಯತಾ ಪಾದಯಾತ್ರೆಯಲ್ಲಿ ಭಾಗಿಯಾಗಿದ್ದ ಅವರು, ಕಾರ್ಯಕ್ರಮದ ಸಮಾರೋಪ ಭಾಷಣದಲ್ಲಿ ಜೆಡಿಎಸ್ ಹಾಗೂ ಬಿಜೆಪಿ (BJP) ವಿರುದ್ಧ ವಾಗ್ದಾಳಿ ನಡೆಸಿದರು. ಜಿಲ್ಲೆಗೆ ಜೆಡಿಎಸ್ ಏನೂ ಕೆಲಸ ಮಾಡಿಲ್ಲ. ಈಗ ಬಿಜೆಪಿ-ಜೆಡಿಎಸ್ ಜಂಟಿಯಾಗಿ ರಾಮನಗರ ಬಂದ್‍ಗೆ ಕರೆ ನೀಡಿದ್ದಾರೆ. ಮೆಡಿಕಲ್ ಕಾಲೇಜು ವಿಚಾರವಾಗಿ ರಾಜಕೀಯ ಮಾಡುತ್ತಿದ್ದಾರೆ. ಅಧಿಕಾರ ಇದ್ದಾಗ ಸಚಿವನಾಗಿದ್ದ ಅಶ್ವಥ್ ನಾರಾಯಣ್ ಯಾಕಪ್ಪ ಮೆಡಿಕಲ್ ಕಾಲೇಜು ಮಾಡಲಿಲ್ಲ? ಕನಕಪುರಕ್ಕೆ ಕೊಟ್ಟ ಮೆಡಿಕಲ್ ಕಾಲೇಜನ್ನು ಚಿಕ್ಕಬಳ್ಳಾಪುರಕ್ಕೆ ಸುಧಾಕರ್ ತಗೆದುಕೊಂಡು ಹೋದ. ಇದಕ್ಕೆ ಬಿಜೆಪಿ ಕಾರಣ ಅಲ್ಲವೇ? ಈಗ ಬಂದ್ ಮಾಡುವ ನೈತಿಕತೆ ಇವರಿಗೆ ಇದೆಯಾ ಎಂದು ಪ್ರಶ್ನಿಸಿದರು. ಇದನ್ನೂ ಓದಿ: KRSಗೆ ಇಂದು ಬಿಜೆಪಿ ನಿಯೋಗ – ಮಂಡ್ಯದಲ್ಲಿ ಮುಂದುವರಿದ ಪ್ರತಿಭಟನೆ

ಜಿಲ್ಲೆಗೆ ಡಿ.ಕೆ.ಸುರೇಶ್ (D.K.Suresh) ವಿಶೇಷ ಅನುದಾನ ನೀಡುವಂತೆ ಮನವಿ ಮಾಡಿದ್ದಾರೆ. ಡಿಸೆಂಬರ್‌ನಲ್ಲಿ ಅನುದಾನ ನೀಡುತ್ತೇವೆ. ಗ್ಯಾರಂಟಿ ಯೋಜನೆ ಜಾರಿ ಹಿನ್ನೆಲೆ ಅನುದಾನಗಳನ್ನು ತಡವಾಗಿ ನೀಡಲಾಗುತ್ತಿದೆ. ರಾಮನಗರ ಜಿಲ್ಲೆ ಅಭಿವೃದ್ಧಿಗೆ ಸರ್ಕಾರ ಸಂಪೂರ್ಣ ಬದ್ಧವಾಗಿದೆ. ಮುಂದಿನ ಲೋಕಸಭಾ ಚುನಾವಣೆಯಲ್ಲಿ ಡಿ.ಕೆ.ಸುರೇಶ್ ಅವರನ್ನು ಮತ್ತೊಮ್ಮೆ ಹೆಚ್ಚು ಅಂತರದಲ್ಲಿ ಗೆಲ್ಲಿಸುವಂತೆ ಮನವಿ ಮಾಡಿದರು. ಇದನ್ನೂ ಓದಿ: ಬೆಂಗಳೂರು ಆರೋಗ್ಯ ಸುಧಾರಣೆಗೆ ಪ್ರತ್ಯೇಕ ವಿಭಾಗ, ಡೆಂಗ್ಯೂ ಪ್ರಕರಣಗಳ ಮೇಲ್ವೀಚಾರಣೆಗೆ ತಂತ್ರಾಶ: ದಿನೇಶ್ ಗುಂಡೂರಾವ್

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್