RSS ಹುಟ್ಟಿದಾಗಿಂದ್ಲೂ ಏನೆಲ್ಲ ಮಾಡ್ಕೊಂಡು ಬಂದಿದೆ ಅನ್ನೋದು ಜಗತ್ತಿಗೆ ಗೊತ್ತಿದೆ: ಎಚ್‍ಡಿಕೆ

By
1 Min Read

ಬೆಂಗಳೂರು: ಸೇವೆಯ ಸೋಗಿನಲ್ಲಿ ಸಂಸ್ಥೆಗಳು ರಾಜಕೀಯ ಮಾಡಬಾರದು. ಜನರ ಬವಣೆಗಳ ನಿವಾರಣೆ ನಿಟ್ಟಿನಲ್ಲಿ ದುಡಿಯಬೇಕೆ ಹೊರತು ಬದುಕಿಗೇ ಬೆಂಕಿ ಇಡಬಾರದು. ಸಮಾಜದ ಶಾಂತಿಯನ್ನು ಕಾಪಾಡಬೇಕೇ ಹೊರತು, ಅದಕ್ಕೆ ಕೊಳ್ಳಿ ಇಡಬಾರದು. ಆರ್‌ಎಸ್‌ಎಸ್‌ ಹುಟ್ಟಿದಾಗಿನಿಂದಲೂ ಏನೆಲ್ಲ ಮಾಡಿಕೊಂಡು ಬಂದಿದೆ ಎನ್ನುವುದು ಜಗತ್ತಿಗೇ ಗೊತ್ತಿರುವ ಸಂಗತಿ ಎಂದು ಎಚ್.ಡಿ ಕುಮಾರಸ್ವಾಮಿ ಆರ್‌ಎಸ್‌ಎಸ್‌ ವಿರುದ್ಧ ಟ್ವಿಟ್ಟರ್‍ ನಲ್ಲಿ ಟ್ವೀಟ್ ಮಾಡಿದ್ದಾರೆ.

ಟ್ವೀಟ್‍ನಲ್ಲಿ ಏನಿದೆ?

ಜನ ಪ್ರತಿನಿಧಿಗಳನ್ನು, ಸರ್ಕಾರಗಳನ್ನು, ಆಡಳಿತ ಯಂತ್ರಾಂಗವನ್ನು ಕಪಿಮುಷ್ಠಿಯಲ್ಲಿ ಇಟ್ಟುಕೊಳ್ಳುವ ಪರಿಪಾಠ ದೇಶಕ್ಕೆ ಒಳ್ಳೆಯದಲ್ಲ. ಅರ್ಥ ಮಾಡಿಕೊಳ್ಳಿ ಸಿ.ಟಿ ರವಿಯರೇ. ನಾನು ಸತ್ಯದ ಪರ. ಸಿ.ಟಿ ರವಿಯವರೇ, ಮನೆಯಲ್ಲಿ ಕೂತು ಪುಸ್ತಕ ಓದಿದರೆ ಸಾಲದು ಎಂದಿದ್ದೀರಿ. ಆರ್‌ಎಸ್‌ಎಸ್‌ ಬಗ್ಗೆ ಜ್ಞಾನಾರ್ಜನೆ, ಅಧ್ಯಯನ, ಸಂಶೋಧನೆ ಮಾಡಲು ಸಂಘದ ಶಾಖೆಗೆ ಬನ್ನಿ ಎಂದು ನನಗೆ ಆಹ್ವಾನ ಕೊಟ್ಟಿದ್ದೀರಿ. ನಿಮ್ಮ ಸಂಘದೊಳಗಿನ ವಾಸ್ತಾವಾಂಶಗಳನ್ನು ಪ್ರತ್ಯಕ್ಷವಾಗಿ ನೋಡಿದವರೇ ಬರೆದ ಪುಸ್ತಕ ಓದಿ ನನಗೆ ಅಲ್ಲಿನ ವ್ಯವಹಾರಗಳ ವಿರಾಟ್ ದರ್ಶನ ಆಗಿದೆ. ಇನ್ನು ಶಾಖೆಯನ್ನೇ ಸೇರಿಕೊಂಡರೆ ಇನ್ನೆಷ್ಟು ಸತ್ಯ ಸಂಗತಿಗಳು ಗೊತ್ತಾಗಬಹುದು. ನೀವೇ ಒಮ್ಮೆ ಊಹಿಸಿ. ಇದನ್ನೂ ಓದಿ: RSS ಜಾತಿ, ಧರ್ಮ ಮೀರಿದ ಮಾತೃಹೃದಯಿ ಸಂಘಟನೆ: ಜಗ್ಗೇಶ್

ಶಿವಮೊಗ್ಗದಲ್ಲಿ 2,000 ರೂ. ಪರಿಹಾರ ಪಡೆಯಲು 100 ರೂ. ಲಂಚ ಕೇಳಿದ ವರದಿಗಳು ಬಂದಿವೆ. ಇದಾ ನಿಮ್ಮ ಸಮಾಜ ಸೇವೆ? ಛಿದ್ರವಾದ ಬದುಕುಗಳನ್ನೊಮ್ಮೆ ನೋಡಿ. ಜನರ ಬವಣೆಗಳ ಬಗ್ಗೆ ಆರ್‌ಎಸ್‌ಎಸ್‌ ಶಾಖೆಗಳಲ್ಲಿ ನಿಮಗೆಲ್ಲರಿಗೂ ಏನನ್ನೂ ಹೇಳಿಕೊಡುವುದಿಲ್ಲವಾ ಸಿ.ಟಿ.ರವಿಯವರೇ? ಸ್ವಜನ ಪಕ್ಷಪಾತ, ಭ್ರಷ್ಟಾಚಾರ, ಕುಟುಂಬ ರಾಜಕಾರಣದ ಬಗ್ಗೆ ಮಾತನಾಡಿದ್ದೀರಿ. ನಿಮ್ಮ ಪಕ್ಷ ಮತ್ತು ನಿಮ್ಮ ಸರ್ಕಾರದಲ್ಲಿ ತಾಂಡವವಾಡುತ್ತಿರುವ ಅಪರಿಮಿತ ಭ್ರಷ್ಟಾಚಾರ, ಕುಟುಂಬ ರಾಜಕಾರಣ, ಸ್ವಜನ ಪಕ್ಷಪಾತದ ಬಗ್ಗೆಯೂ ನೀವು ಹೇಳಬೇಕು. ಅದಕ್ಕೂ RSS ಶಾಖೆಯಲ್ಲೇ ತರಬೇತಿ ನೀಡಲಾಯಿತಾ? ಪ್ರಜಾಪ್ರಭುತ್ವ ವ್ಯವಸ್ಥೆಯನ್ನೇ ಬುಡಮೇಲು ಮಾಡುವಂಥ ‘ಆಪರೇಷನ್ ಕಮಲ’ದಂಥ ‘ಅನೈತಿಕ’, ‘ನಿರ್ಲಜ್ಜ’, ‘ನೀಚ’ ರಾಜಕಾರಣವನ್ನು ಆರ್‌ಎಸ್‌ಎಸ್‌ ಶಾಖೆಯಲ್ಲೇ ಕಲಿಸಲಾಯಿತಾ ಎಂಬುದನ್ನೂ ನೀವು ಜನರಿಗೆ ಹೇಳಬೇಕು ಸಿ.ಟಿ.ರವಿಯವರೇ?. ಇದನ್ನೂ ಓದಿ: ಗ್ರಾಹಕರಿಗೆ ಇನ್ನಷ್ಟು ಹೊರೆ- ಸಿಲಿಂಡರ್ ದರದಲ್ಲಿ 15 ರೂ. ಏರಿಕೆ

Share This Article
Leave a Comment

Leave a Reply

Your email address will not be published. Required fields are marked *