ಸಮಂತಾ ನಿರ್ಮಾಣದ ಚೊಚ್ಚಲ ಸಿನಿಮಾ ರಿಲೀಸ್‌ಗೆ ರೆಡಿ

Public TV
1 Min Read

ಸೌತ್ ಬ್ಯೂಟಿ ಸಮಂತಾ (Samantha) ಬೇಡಿಕೆ ನಟಿಯರಲ್ಲಿ ಒಬ್ಬರಾಗಿದ್ದಾರೆ. ಈಗ ನಿರ್ಮಾಪಕರಾಗಿ (Producer) ಹೊಸಬರ ಕನಸಿಗೆ ಅವರು ಸಾಥ್ ನೀಡುತ್ತಿದ್ದಾರೆ. ಇದೀಗ ನಟಿಯ ನಿರ್ಮಾಣದ ಚೊಚ್ಚಲ ಸಿನಿಮಾ ರಿಲೀಸ್‌ಗೆ ಸಜ್ಜಾಗಿದೆ. ಈ ಕುರಿತು ಸೋಶಿಯಲ್ ಮೀಡಿಯಾದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

ಸಮಂತಾ ನಿರ್ಮಾಣದ ‘ಶುಭಂ’ (Shubham) ಸಿನಿಮಾ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ. ನಮ್ಮ ‘ಶುಭಂ’ ಸಿನಿಮಾ ಚಿತ್ರೀಕರಣ ಮುಗಿದಿದ್ದು, ರಿಲೀಸ್‌ಗೆ ರೆಡಿಯಾಗಿದೆ. ಇನ್ನಷ್ಟು ಸುದ್ದಿಗಳನ್ನು ಶೀಘ್ರವೇ ಹಂಚಿಕೊಳ್ಳುತ್ತೇನೆ ಎಂದಿದ್ದಾರೆ. ಸಿನಿಮಾ ರಿಲೀಸ್ ಡೇಟ್ ಬಗ್ಗೆ ಅಧಿಕೃತವಾಗಿ ತಿಳಿಸಬೇಕಿದೆ. ಇದನ್ನೂ ಓದಿ:ಇಂದು ಸುಮಲತಾ ಅಂಬರೀಶ್ ಮೊಮ್ಮಗನ ನಾಮಕರಣ – ಸಮಾರಂಭಕ್ಕೆ ಮನೆಮಗ ದರ್ಶನ್ ಬರ್ತಾರಾ?

ಸಮಂತಾ ನಿರ್ಮಾಣ ಮಾಡಿರುವ ಈ ಸಿನಿಮಾ ರೆಟ್ರೋ ಕಾಲದ ಕತೆ ಹೊಂದಿದ್ದು, ಹಾಸ್ಯ ಮಿಶ್ರಿತ ಕೌಟುಂಬಿಕ ಕತೆಯುಳ್ಳ ಸಿನಿಮಾ ಆಗಿದೆ. ಈ ಸಿನಿಮಾದಲ್ಲಿ ಹಲವು ಹೊಸ ನಟ-ನಟಿಯರು ನಟಿಸಿದ್ದಾರೆ. ಸಿನಿಮಾದ ನಿರ್ದೇಶಕರು ಕೂಡ ಹೊಸಬರೇ ಆಗಿದ್ದಾರೆ. ಚಿತ್ರಕ್ಕೆ ಪ್ರವೀಣ್ ಕಂಡ್ರೇಗುಳ ಅವರು ಆ್ಯಕ್ಷನ್ ಕಟ್ ಹೇಳಿದ್ದಾರೆ.

ಇನ್ನೂ ‘ಮಾ ಈಂಟಿ ಬಂಗಾರಂ’ ಸಿನಿಮಾ, ನಿರ್ದೇಶಕಿ ನಂದಿನಿ ರೆಡ್ಡಿ ಜೊತೆ ಹೊಸ ಚಿತ್ರ, ಬಾಲಿವುಡ್ ಸಿನಿಮಾಗಳಲ್ಲಿ ಸಮಂತಾ ತೊಡಗಿಸಿಕೊಂಡಿದ್ದಾರೆ. ನಿರ್ಮಾಪಕಿಯೂ ಅವರು ಬ್ಯುಸಿಯಾಗಿದ್ದಾರೆ.

Share This Article