KUWSDB ಕಚೇರಿ ಉತ್ತರ ಕರ್ನಾಟಕಕ್ಕೆ ಸ್ಥಳಾಂತರ: ಬೈರತಿ ಬಸವರಾಜ್

Public TV
1 Min Read

ರಾಯಚೂರು: ಕರ್ನಾಟಕ ನಗರ ನೀರು ಸರಬರಾಜು ಉತ್ತರ ಕರ್ನಾಟಕ ವ್ಯವಸ್ಥಾಪಕ ನಿರ್ದೇಶಕರ ಕಚೇರಿಯನ್ನು ಉತ್ತರ ಕರ್ನಾಟಕ ಭಾಗದಲ್ಲೇ ಸ್ಥಾಪಿಸಲಾಗುವುದು ಅಂತ ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ್ ತಿಳಿಸಿದ್ದಾರೆ.

ರಾಯಚೂರಿನ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಪ್ರಗತಿ ಪರಿಶೀಲನೆ ಸಭೆ ನಡೆಸಿದ ಬಳಿಕ ಮಾತನಾಡಿದ ಸಚಿವರು, ಉತ್ತರ ಕರ್ನಾಟಕ ಕಚೇರಿ ಬೆಂಗಳೂರಿನಲ್ಲಿದೆ, ಅದನ್ನು ಬಳ್ಳಾರಿ ಅಥವಾ ಹುಬ್ಬಳ್ಳಿಗೆ ಸ್ಥಳಾಂತರಿಸುವ ಕುರಿತು ಸಿಎಂ ಜತೆ ಚರ್ಚಿಸಲಾಗುವುದು ಎಂದರು.

ಉತ್ತರ ಕರ್ನಾಟಕದ ನಗರಗಳ ಅಭಿವೃದ್ಧಿಗೆ ಒತ್ತು ನೀಡಲಾಗಿದೆ. ನನೆಗುದಿಗೆ ಬಿದ್ದ ಕಾಮಗಾರಿಗಳಿಗೆ ಚುರುಕು ನೀಡಲು ತಾಕೀತು ಮಾಡಲಾಗಿದೆ. ಕಳಪೆ ಕಾಮಗಾರಿಗಳಾಗಿದ್ದಲ್ಲಿ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು. ಕೊರೊನಾದಿಂದ ಸರ್ಕಾರ ಆರ್ಥಿಕ ಸಂಕಷ್ಟ ಎದುರಾಗಿದ್ದು, ಹೊಸ ನೇಮಕಾತಿ ಸದ್ಯಕ್ಕೆ ಮಾಡುತ್ತಿಲ್ಲ. ಇರುವ ಸಿಬ್ಬಂದಿಯಿಂದಲೇ ಕೆಲಸ ಪಡೆಯಲಾಗುತ್ತಿದೆ ಎಂದು ತಿಳಿಸಿದರು.

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಭೇಟಿ ಬಗ್ಗೆ ನನಗೇನು ಗೊತ್ತಿಲ್ಲ. ಸದ್ಯಕ್ಕೆ ನಾಯಕತ್ವ ಬದಲಾವಣೆ ಮಾತೇ ಇಲ್ಲ. ಬಿಎಸ್‍ವೈ ಪ್ರಶ್ನಾತೀತ ನಾಯಕರು. ಅವರೇ ಸರ್ಕಾರದ ಅವಧಿ ಪೂರ್ಣಗೊಳಿಸುತ್ತಾರೆ ಅಂತ ಬೈರತಿ ಬಸವರಾಜ್ ಹೇಳಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *