ಕಾಂಗ್ರೆಸ್ ಬಿಟ್ಟು ಜೆಡಿಎಸ್ ಸೇರ್ಪಡೆಗೆ ಮುಂದಾದ ಎಲ್.ಆರ್.ಶಿವರಾಮೇಗೌಡ ಪುತ್ರ

Public TV
1 Min Read

ಬೆಂಗಳೂರು: ಪದ್ಮನಾಭನಗರದಲ್ಲಿ ಸಚಿವ ಆರ್.ಅಶೋಕ್ ಎದುರು ಪರಾಜಿತಗೊಂಡಿರುವ ಕಾಂಗ್ರೆಸ್ ಅಭ್ಯರ್ಥಿ ಹಾಗೂ ಮಾಜಿ ಸಂಸದ ಎಲ್.ಆರ್.ಶಿವರಾಮೇಗೌಡ ಅವರ ಪುತ್ರ ಚೇತನ್‍ಗೌಡ ಇದೀಗ ಜೆಡಿಎಸ್ ಸೇರ್ಪಡೆಗೆ ಮುಂದಾಗಿದ್ದಾರೆ.

ಚೇತನ್ ಗೌಡ ಮಂಡ್ಯ ಮಾಜಿ ಸಂಸದ ಶಿವರಾಮೇಗೌಡ ಅವರ ಪುತ್ರರಾಗಿದ್ದು, ಜೆಡಿಎಸ್‍ನಿಂದ ಜಿಲ್ಲಾ ಪಂಚಾಯತಿಗೆ ಸ್ಪರ್ಧಿಸಲು ಸಿದ್ಧತೆ ಆರಂಭಿಸಿದ್ದಾರೆ. ಪದ್ಮನಾಭನಗರ ಎಂಎಲ್‍ಎ ಚುನಾವಣೆಯಲ್ಲಿ ಆರ್.ಅಶೋಕ್ ವಿರುದ್ಧ ಕಾಂಗ್ರೆಸ್ ಅಭ್ಯರ್ಥಿಯಾಗಿ ಚೇತನ್ ಸೋಲು ಕಂಡಿದ್ದರು. ರಾಜಕೀಯ ಭವಿಷ್ಯಕ್ಕಾಗಿ ಇದೀಗ ಜಿಲ್ಲಾ ಪಂಚಾಯತ್‍ನಿಂದ ಸ್ಪರ್ಧೆ ಮಾಡಲು ಮುಂದಾಗಿದ್ದಾರೆ.

ಮಂಡ್ಯ ಜಿಲ್ಲೆ ನಾಗಮಂಗಲದ ಬಿಂಡಿಗನವಿಲೆ ಜಿ.ಪಂ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಲು ತಯಾರಿ ಆರಂಭಿಸಿದ್ದಾರೆ. ಕಾರ್ಯಕರ್ತರು, ಅಭಿಮಾನಿಗಳ ಒತ್ತಾಯದಂತೆ ಚೇತನ್ ಜಿಪಂ ಚುನಾವಣೆಯಲ್ಲಿ ಸ್ಪರ್ಧೆ ಮಾಡಲು ನಿರ್ಧಾರ ಮಾಡಿದ್ದಾರೆ ಎಂದು ಮಾಜಿ ಸಂಸದ ಎಲ್.ಆರ್.ಶಿವರಾಮೇಗೌಡ ತಿಳಿಸಿದ್ದಾರೆ. ಕೈ ನಾಯಕರನ್ನ ಭೇಟಿಯಾಗಿ ಕಾಂಗ್ರೆಸ್ ಪಕ್ಷಕ್ಕೆ ಚೇತನ್ ರಾಜೀನಾಮೆ ನೀಡಿದ್ದಾನೆ, ಈಗಾಗಲೇ JDS ಪಕ್ಷ ಸೇರ್ಪಡೆಗೆ ವರಿಷ್ಠರ ಸಮ್ಮತಿ ಸಿಕ್ಕಿದೆ. ಕೆಲ ದಿನಗಳಲ್ಲಿ ಮಂಡ್ಯ ನಾಯಕರ ಸಮ್ಮುಖದಲ್ಲಿ ಪಕ್ಷ ಸೇರ್ಪಡೆಯಾಗುತ್ತೇನೆ. ತಂದೆ ಮಗ ಬೇರೆ ಬೇರೆ ಪಕ್ಷ ಎಂಬ ಟೀಕೆಗಳಿದ್ದವು. ತಂದೆಯ ಮಾರ್ಗದರ್ಶನದಂತೆ ನಡೆಯಲು ಜೆಡಿಎಸ್ ಸೇರಿದ್ದೇನೆ. ವರಿಷ್ಠರ ಆಶೀರ್ವಾದ ಪಡೆದು ಜಿಲ್ಲಾ ಪಂಚಾಯತ್‍ಗೆ ಸ್ಪರ್ಧಿಸುತ್ತೇನೆ ಎಂದು ಚೇತನ್ ಹೇಳಿದ್ದಾರೆ. ಇದನ್ನೂ ಓದಿ: ಹತ್ತಾರು ಎಕರೆ, ಮಾವಿನ ತೋಪು, ನಿರ್ಜನ ಪ್ರದೇಶ – ನೂರಾರು ಜನ… ಕೋಟಿ ಕೋಟಿ ವ್ಯವಹಾರ!

ಈ ಮೂಲಕ ಮಗನನ್ನ ಜೆಡಿಎಸ್‍ಗೆ ಕರೆತಂದಿರುವ ಶಿವರಾಮೇಗೌಡ ನಾಗಮಂಗಲ ಕ್ಷೇತ್ರದ ಎಂಎಲ್‍ಎ ಟಿಕೆಟ್ ಆಕಾಂಕ್ಷಿ ಸಹ ಆಗಿದ್ದಾರೆ. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಆಸೆ ಇದೆ. ನಾನು ಸ್ಪರ್ಧೆ ಮಾಡಿದ್ರೆ ಹಾಲಿ ಶಾಸಕ ಸುರೇಶ್‍ಗೌಡರನ್ನ ಮನೆಗೆ ಕಳುಹಿಸಲ್ಲ, ಅವರಿಗೆ ನನಗಿಂತ ಹೆಚ್ಚು ಭಾಷೆ ಗೊತ್ತಿದೆ. ಹಾಗಾಗಿ ಅವರನ್ನ ಲೋಕಸಭೆಗೆ ಪ್ರಮೋಷನ್ ಮಾಡೋಣ, ನಾನು ಅಥವಾ ಎಂಎಲ್‍ಸಿ ಅಪ್ಪಾಜಿಗೌಡ ಅಭ್ಯರ್ಥಿಯಾಗುತ್ತೇವೆ ಎಂದು ನಾಗಮಂಗಲದಲ್ಲಿ ಮಾಜಿ ಸಂಸದ ಶಿವರಾಮೇಗೌಡ ಹೇಳಿದ್ದಾರೆ. ಇದನ್ನೂ ಓದಿ: ಪಂಜ್‍ಶೀರ್ ವಶಕ್ಕೆ ಪಡೆದ ತಾಲಿಬಾನಿಗಳಿಂದ ಗಾಳಿಯಲ್ಲಿ ಗುಂಡು!

Share This Article
Leave a Comment

Leave a Reply

Your email address will not be published. Required fields are marked *