ಟಚ್ ಮಾಡ್ಬೇಡ: ಕಾರ್ಮಿಕ ಇಲಾಖೆಯ ಕಾರ್ಯದರ್ಶಿಯಿಂದ ಬಿಜೆಪಿ ಶಾಸಕನಿಗೆ ಅವಾಜ್

Public TV
1 Min Read

ಹುಬ್ಬಳ್ಳಿ: ಕಾರ್ಮಿಕ ಇಲಾಖೆಯ ಕಾರ್ಯದರ್ಶಿ ಅಮ್ಲನ್ ಆದಿತ್ಯ ಬಿಸ್ವಾಸ್, ಬಿಜೆಪಿ ಶಾಸಕ ಅರವಿಂದ ಬೆಲ್ಲದ್‍ಗೆ ಆವಾಜ್ ಹಾಕಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.

ನಗರದ ಇಎಸ್‍ಐ ಆಸ್ಪತ್ರೆ ಮೇಲ್ದರ್ಜೆಗೆ ಏರಿಸುವ ಕಾರ್ಯಕ್ರಮದಲ್ಲಿ ಆದಿತ್ಯ ಬಿಸ್ವಾಸ್ ಶಾಸಕರಿಗೆ ಅವಾಜ್ ಹಾಕಿದ್ದಾರೆ. ಕಾರ್ಯಕ್ರಮಕ್ಕೆ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ಬರ್ತಾಯಿದ್ದಾರೆ ಸೈಡ್ ಸರಿಯುವಂತೆ ಬಿಜೆಪಿ ಶಾಸಕ ಅರವಿಂದ ಬೆಲ್ಲದವರು ಆದಿತ್ಯ ಬಿಸ್ವಾಸ್ ಅವರಿಗೆ ಭುಜ ಹಿಡಿದು ಸರಿಸಿದ್ದಾರೆ. ಇಷ್ಟಕ್ಕೆ ಕೋಪಗೊಂಡ ಬಿಸ್ವಾಸ್ ಟಚ್ ಮಾಡಬೇಡ ಅಂತ ಏರು ಧ್ವನಿಯಲ್ಲಿ ಹೇಳಿದ್ದಾರೆ. ಆಗ ಕಾರ್ಮಿಕ ಸಚಿವ ವೆಂಕಟರಮಣಪ್ಪ ಅರವಿಂದ ಬೆಲ್ಲದ್ ಅವರಿಗೆ ಸಮಾಧಾನ ಮಾಡಿದರು. ಈ ವೇಳೆ ಸಂಸದ ಪ್ರಲ್ಹಾದ ಜೋಶಿ ಸೇರಿದಂತೆ ಹಲವು ಗಣ್ಯವ್ಯಕ್ತಿಗಳು ಇದ್ದರು.

ಇದೇ ವೇಳೆ ಹುಬ್ಬಳ್ಳಿಯಲ್ಲಿ ಕೇಂದ್ರ ಕಾರ್ಮಿಕ ಖಾತೆ ರಾಜ್ಯ ಸಚಿವ ಸಂತೋಷ್‍ಕುಮಾರ್ ಗಂಗ್ವಾರ್ ಅವರು ಕೇಂದ್ರ ಸರ್ಕಾರ ಸಕಾರಾತ್ಮಕ ಮಾರ್ಗದಲ್ಲಿ ಕೆಲಸ ಮಾಡುತ್ತಿದೆ. ಅನಾರೋಗ್ಯ ಪೀಡಿತರಿಗೆ ಸೂಕ್ತ ಸಂದರ್ಭದಲ್ಲಿ ಔಷಧೋಪಚಾರ ಸಿಗಬೇಕು. ರಾಜ್ಯ ಸರ್ಕಾರ ಔಷಧ ಮತ್ತು ಸೌಲಭ್ಯಗಳ ಕೊರತೆಯಾದರೆ ಕೂಡಲೇ ಕೇಂದ್ರದ ಗಮನಕ್ಕೆ ತರಬೇಕು. ನಾವು ಕಾರ್ಮಿಕರ ಬಗ್ಗೆ ಸಾಕಷ್ಟು ಕಾಳಜಿ ವಹಿಸುತ್ತಿದ್ದೇವೆ. ಕಾರ್ಮಿಕರ ಹಿತಕ್ಕಾಗಿ ನಾಲ್ಕು ಕೋಡ್‍ಗಳ ಸಮಗ್ರ ಕಾನೂನು ಜಾರಿಗೆ ತರಲಾಗುತ್ತಿದೆ. ದೇಶದ ನಲವತ್ತು ಕೋಟಿ ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗೆ ನಿರಂತರವಾಗಿ ಶ್ರಮಿಸುತ್ತಿದ್ದೇವೆ ಎಂದು ಇಎಸ್‍ಐ ಆಸ್ಪತ್ರೆಯ ಶಂಕುಸ್ಥಾಪನೆ ಸಮಾರಂಭದಲ್ಲಿ ಹೇಳಿದ್ದಾರೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

Share This Article
Leave a Comment

Leave a Reply

Your email address will not be published. Required fields are marked *