ನೀರು ತರಲು ಹೋಗಿ ಕಾಲು ಜಾರಿ ಬಾವಿಗೆ ಬಿದ್ದು ಕೂಲಿ ಕಾರ್ಮಿಕ ಸಾವು

Public TV
1 Min Read

ಬೀದರ್: ಕುಡಿಯುವ ನೀರು ತರಲು ಬಾವಿಗೆ ಹೋಗಿದ್ದ ಕೂಲಿ ಕಾರ್ಮಿಕ ಕಾಲು ಜಾರಿ ಬಿದ್ದು ಸಾವನ್ನಪ್ಪಿದ ಘಟನೆ ಬೀದರ್ (Bidar) ಜಿಲ್ಲೆಯ ಹುಲಸೂರು ತಾಲೂಕಿನ ಮಾಚಾನಾಳ ಗ್ರಾಮದಲ್ಲಿ ನಡೆದಿದೆ.

ಕಾರ್ಮಿಕ ಸತೀಶ್ ಲಿಂಬಾಜಿ ಬಾಗುವಾಲೆ (40) ಮೃತ ದುರ್ದೈವಿ. ಗುರುವಾರ ಸಂಜೆ ಹೊಲದಲ್ಲಿ ಕೆಲಸ ಮಾಡುವಾಗ ಪಕ್ಕದ ಬಾವಿಯಲ್ಲಿ ಕುಡಿಯಲು ನೀರು ತರಲು ಹೋಗಿದ್ದಾಗ ಈ ಘಟನೆ ಸಂಭವಿಸಿದೆ.ಇದನ್ನೂ ಓದಿ: ಟಿಕೆಟ್ ಕಳೆದುಕೊಂಡು ವರ್ಷವಾಯ್ತು, ಜನರ ಆಶೀರ್ವಾದ ಇವತ್ತಿಗೂ ಹಾಗೇ ಇದೆ: ಪ್ರತಾಪ್‌ ಸಿಂಹ

ಮಾಚಾನಾಳ ಗ್ರಾಮದ ಹೊಲದಲ್ಲಿ ಕೃಷಿ ಕೆಲಸ ಮಾಡಲು ಕಾರ್ಮಿಕ ತೆರಳಿದ್ದು, ನೀರು ತರಲು ಬಾವಿಗೆ ಹೋದಾಗ ಕಾಲು ಜಾರಿದೆ. ಈಜು ಬಾರದ ಕಾರಣ ಬಾವಿಯಿಂದ ಹೊರಬರಲಾಗದೆ ಸಾವನ್ನಪ್ಪಿದ್ದಾರೆ.

ವಿಷಯ ತಿಳಿದು ಶುಕ್ರವಾರ ಬೆಳಿಗ್ಗೆ ಸ್ಥಳಕ್ಕೆ ಬಂದ ಅಗ್ನಿಶಾಮಕ ದಳದ ಸಿಬ್ಬಂದಿ, ಬಾವಿಗೆ ಇಳಿದು ಹಗ್ಗದ ಸಹಾಯದಿಂದ ಮೃತದೇಹವನ್ನು ಹೊರತೆಗೆದಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದು, ಹುಲಸೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಇದನ್ನೂ ಓದಿ: IPL 2025: ಡೆಲ್ಲಿ ಕ್ಯಾಪಿಟಲ್ಸ್‌ ತಂಡಕ್ಕೆ ಅಕ್ಷರ್‌ ಪಟೇಲ್‌ ನಾಯಕ

Share This Article