ಉದ್ಯೋಗ ಖಾತ್ರಿ ಕೆಲಸಕ್ಕೆ ಹೋಗಿದ್ದ ಕೂಲಿ ಕಾರ್ಮಿಕ ಸಾವು – ಬಿಸಿಲಿನ ತಾಪಕ್ಕೆ ಕುಸಿದು ಬಿದ್ದಿರುವ ಶಂಕೆ

1 Min Read

ರಾಯಚೂರು: ಉದ್ಯೋಗ ಖಾತ್ರಿ (Udyog Khatri) ಕೆಲಸಕ್ಕೆ ತೆರಳಿದ್ದ ವೇಳೆ ವ್ಯಕ್ತಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಸಿಂಧನೂರು (Sindhanur) ತಾಲೂಕಿನ ಮುಳ್ಳೂರು ಗ್ರಾಮದಲ್ಲಿ ನಡೆದಿದೆ.

65 ವರ್ಷದ ಅಂಬಣ್ಣ ಮೃತಪಟ್ಟ ನರೆಗಾ ಕೂಲಿಕಾರ್ಮಿಕ. ಎದೆನೋವು ಕಾಣಿಸಿಕೊಂಡಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ ವೇಳೆ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾನೆ. ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ. ಬಿರು ಬಿಸಿಲಿನ ತಾಪಮಾನಕ್ಕೆ ಸುಸ್ತಾಗಿ ಕುಸಿದು ಬಿದ್ದು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಸಿಂಧನೂರು ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಉದ್ಯೋಗ ಖಾತ್ರಿ ಯೋಜನೆ ಅಡಿ ಕೆಲಸಕ್ಕೆ ಹೋದಾಗ ಸಾವನ್ನಪ್ಪಿರುವುದಿಂದ ಸರ್ಕಾರ ಸೂಕ್ತ ಪರಿಹಾರ ನೀಡಬೇಕು ಅಂತ ಗ್ರಾಮಸ್ಥರು ಒತ್ತಾಯಿಸಿದ್ದಾರೆ. ಇದನ್ನೂ ಓದಿ: ಪತ್ನಿಯನ್ನು ಕೊಡಲಿಯಿಂದ ಹೊಡೆದು ಕೊಂದು ಪೊಲೀಸರಿಗೆ ಶರಣಾದ ಪತಿ

ರಾಯಚೂರು ತಾಲೂಕಿನ ಯಾಪಲದಿನ್ನಿಯಲ್ಲಿ ನರೆಗಾ ಕೂಲಿ ಕೆಲಸಕ್ಕೆ ಹೋದ ವೇಳೆ ವ್ಯಕ್ತಿಯೋರ್ವ ಸಾವನ್ನಪ್ಪಿದ್ದು, ಜಿಲ್ಲೆಯಲ್ಲಿ ಇದು ಎರಡನೇ ಘಟನೆಯಾಗಿದೆ. ಅತಿಯಾದ ಬಿಸಿಲಿನ ತಾಪಮಾನವೇ ಸಾವಿಗೆ ಕಾರಣ, ಸರ್ಕಾರ ಪರಿಹಾರ ನೀಡಬೇಕು ಅಂತ ಕೂಲಿಕಾರ್ಮಿಕರು, ಗ್ರಾಮಸ್ಥರು ಆಗ್ರಹಿಸಿದ್ದಾರೆ. ಇದನ್ನೂ ಓದಿ: ಇಂದೂ ಸಹ ಬೆಂಗಳೂರಲ್ಲಿ ಆರ್ಭಟಿಸಲಿದ್ದಾನೆ ವರುಣ – ಮೇ 1ರವರೆಗೂ ಮಳೆ ಮುನ್ಸೂಚನೆ

Share This Article