ಶಿವಮೊಗ್ಗ: ತಾನೇ ಜನ್ಮ ನೀಡಿದ ನವಜಾತ ಶಿಶುವಿನ ಕತ್ತು ಕೊಯ್ದು ಕೊಂದಿದ್ದ ಮಹಿಳೆಯನ್ನು ಬಂಧಿಸಿದ ಘಟನೆ ಶಿವಮೊಗ್ಗದಲ್ಲಿ (Shivamogga) ನಡೆದಿದೆ.
1 ದಿನದ ಗಂಡು ಮಗುವನ್ನು ಕತ್ತು ಸೀಳಿ ಕೊಲೆ ಮಾಡಿರುವುದು ತನಿಖೆಯಲ್ಲಿ ಬಯಲಾದ ಹಿನ್ನೆಲೆ ದಾವಣಗೆರೆ (Davanagere) ಜಿಲ್ಲೆಯ ಹೊನ್ನಾಳಿಯ (Honnali) ತಿಮ್ಲಾಪುರದ ಶೈಲಾ ಎಂಬಾಕೆಯನ್ನು ಪೊಲೀಸರು ಬಂಧಿಸಿದ್ದಾರೆ. ಆ.16ರಂದು ಮೆಗ್ಗಾನ್ ಆಸ್ಪತ್ರೆಯ ಪ್ರಸೂತಿ ಮತ್ತು ಸ್ತ್ರೀರೋಗ ವಿಭಾಗದ ಶೌಚಾಲಯದಲ್ಲಿ ಒಂದು ದಿನದ ನವಜಾತ ಶಿಶುವಿನ ಮೃತದೇಹ ಪತ್ತೆಯಾಗಿತ್ತು. ಶೌಚಾಲಯದಲ್ಲಿ ಶವ ನೋಡಿದ ಬೇರೆ ರೋಗಿಗಳು ಸಿಬ್ಬಂದಿಗೆ ಮಾಹಿತಿ ನೀಡಿದ್ದರು. ಘಟನಾ ಸ್ಥಳಕ್ಕೆ ಸೋಕೋ ಟೀಮ್ ಬಂದು ಮಾಹಿತಿ ಸಂಗ್ರಹಿಸಿತ್ತು. ಇದನ್ನೂ ಓದಿ: ಬೆಳಗಾವಿ| ದೇವಸ್ಥಾನದ ಜಾಗಕ್ಕಾಗಿ ಕೊಲೆ – ಐವರಿಗೆ ಜೀವಾವಧಿ ಶಿಕ್ಷೆ ಪ್ರಕಟ
ಹೊನ್ನಾಳಿ ಮೂಲದ ಶೈಲಾಗೆ 2 ಮಕ್ಕಳಿದ್ದು, ನಾಲ್ಕು ವರ್ಷಗಳ ಹಿಂದೆ ಸಂತಾನಹರಣ ಶಸ್ತ್ರಚಿಕಿತ್ಸೆ ಆಗಿತ್ತು. ಸಂತಾನಹರಣ ಶಸ್ತ್ರಚಿಕಿತ್ಸೆ ಆದರೂ ಶೈಲಾ ಗರ್ಭಿಣಿಯಾಗಿದ್ದಳು. ಥೈರಾಯ್ಡ್ ನೆಪ ಮಾಡಿಕೊಂಡು ಗರ್ಭಿಣಿ ಆಗಿರುವುದನ್ನು ಶೈಲಾ ಕುಟುಂಬಸ್ಥರಿಂದ ಮುಚ್ಚಿಟ್ಟಿದ್ದಳು. ಆಸ್ಪತ್ರೆಯ ಶೌಚಾಲಯದಲ್ಲಿ ಒಬ್ಬಳೇ ನಾರ್ಮಲ್ ಹೆರಿಗೆ ಮಾಡಿಕೊಂಡಿದ್ದ ಶೈಲಾ ಹೆರಿಗೆ ಬಳಿಕ ಶಸ್ತ್ರಚಿಕಿತ್ಸೆಗೆ ಬಳಸುವ ಬ್ಲೇಡ್‌ನಿಂದ ಮಗುವಿನ ಕತ್ತು ಕೊಯ್ದು ಕೊಲೆ ಮಾಡಿದ್ದಳು. ಇದೀಗ ಮಗುವಿನ ಕೊಲೆ ಮಾಡಿರುವ ಕುರಿತು ಪೊಲೀಸರ ಮುಂದೆ ಬಾಯಿಬಿಟ್ಟಿದ್ದಾಳೆ. ಘಟನೆ ಸಂಬಂಧ ಶಿವಮೊಗ್ಗದ ದೊಡ್ಡಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿತ್ತು. ಇದನ್ನೂ ಓದಿ: ಧರ್ಮಸ್ಥಳದ ಅಪಪ್ರಚಾರಕ್ಕೆ ಫಂಡಿಂಗ್ – ಸಮೀರ್ ವಿರುದ್ಧ ಐಟಿಗೆ ದೂರು ನೀಡಲು ಚಿಂತನೆ