ನಟಿ ಲೀಲಾವತಿ ಮನೆಗೆ ಲಹರಿ ವೇಲು ಭೇಟಿ: ಆರೋಗ್ಯ ವಿಚಾರಣೆ

Public TV
1 Min Read

ನ್ನಡ ಸಿನಿಮಾ ರಂಗದ ಹಿರಿಯ ನಟಿ ಲೀಲಾವತಿ (Leelavati) ಅವರು ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಹಲವು ದಿನಗಳಿಂದ ಅವರಿಗೆ ಕೃತಕ ಉಸಿರಾಟ ನೀಡಲಾಗುತ್ತಿದೆ. ಹಾಗಾಗಿ ಚಿತ್ರೋದ್ಯಮದ ಅನೇಕ ಗಣ್ಯರು ಲೀಲಾವತಿ ಅವರ ಮನೆಗೆ ತೆರಳಿ ಆರೋಗ್ಯ ವಿಚಾರಿಸುತ್ತಿದ್ದಾರೆ. ಮೊನ್ನೆಯಷ್ಟೇ ಶಿವರಾಜ್ ಕುಮಾರ್, ಅರ್ಜುನ್ ಸರ್ಜಾ, ಡಿ.ಕೆ.ಶಿವಕುಮಾರ್ ಸೇರಿದಂತೆ ಹಲವರು ಈಗಾಗಲೇ ಮನೆಗೆ ಬಂದು ಆರೋಗ್ಯ ವಿಚಾರಿಸಿದ್ದಾರೆ. ಇದೀಗ ಲಹರಿ ವೇಲು (Lahari Velu) ಕೂಡ ಭೇಟಿ ನೀಡಿದ್ದಾರೆ.

ನೆಲಮಂಗಲ ತಾಲೂಕಿನ ಸೋಲದೇವನಹಳ್ಳಿಯ ತೋಟದ ಮನೆಗೆ ಆಗಮಿಸಿದ್ದ ಲಹರಿ ವೇಲು, ಲೀಲಾವತಿ ಅವರ ಪುತ್ರ ವಿನೋದ್ ರಾಜ್ (Vinod Raj) ಜೊತೆ ಕೆಲ ಹೊತ್ತು ಮಾತನಾಡಿದ್ದಾರೆ. ತಾಯಿ ಆರೋಗ್ಯದ ಬಗ್ಗೆ ವಿಚಾರಿಸಿದರು. ನಂತರ ಮಾಧ್ಯಮಗಳ ಜೊತೆ ಮಾತನಾಡಿದ ವೇಲು, ಅವರನ್ನ ನೋಡಿದ್ರೆ ನನ್ನ ತಾಯಿ ನೆನಪಾಗುತ್ತಾರೆ. ಅವರು ಎಲ್ಲರಿಗೂ ತಾಯಿ. ಬೇಗ ಗುಣಮುಖರಾಗುತ್ತಾರೆ. ಪ್ರಾಥಮಿಕ ಆರೋಗ್ಯ ಆಸ್ಪತ್ರೆ, ಪಶು ಆಸ್ಪತ್ರೆ ಹೀಗೆ ನಾಡಿಗೆ ಸಾಕಷ್ಟು ನೆರವಾಗಿದ್ದಾರೆ . ತಾಯಿಯ ಸೇವೆ ಅಪಾರವಾದದ್ದು ಎಂದರು.

ಲೀಲಾವತಿ ಅವರ ಅನಾರೋಗ್ಯದ ಹಿನ್ನೆಲೆಯಲ್ಲಿ ಸ್ಯಾಂಡಲ್ ವುಡ್ ನ ಅನೇಕ ತಾರೆಯರು ಈಗಾಗಲೇ ಮನೆಗೆ ಬಂದು ಆರೋಗ್ಯ ವಿಚಾರಿಸಿದ್ದಾರೆ. ಅಲ್ಲದೇ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕೂಡ ಎರಡು ದಿನಗಳ ಹಿಂದೆಯಷ್ಟೇ ಮನೆಗೆ ಬಂದು ಲೀಲಾವತಿಯವರನ್ನು ಭೇಟಿ ಮಾಡಿದ್ದರು.

Share This Article