ಕಾಲ್ತುಳಿತದಲ್ಲಿ ಮೃತಪಟ್ಟವರ ಕುಟುಂಬಳಿಗೆ ಒಂದೊಂದು ಕೋಟಿ ಪರಿಹಾರ ಕೊಡಬೇಕು – ಲಕ್ಷ್ಮಿ ಹೆಬ್ಬಾಳ್ಕರ್‌ ಆಗ್ರಹ

Public TV
2 Min Read

ಬೆಳಗಾವಿ: ಕಾಲ್ತುಳಿತ ಪ್ರಕರಣದಲ್ಲಿ ಮೃತಪಟ್ಟವರ ಕುಟುಂಬಳಿಗೆ ತಲಾ ಒಂದೊಂದು ಕೋಟಿ ಪರಿಹಾರ ಕೊಡಬೇಕು ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ (Lakshmi Hebbalkar) ಆಗ್ರಹಿಸಿದ್ದಾರೆ.

ಬೆಳಗಾವಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸರ್ಕಾರ ಇನ್ನೂ ಹೆಚ್ಚಿನ ಪರಿಹಾರ ಕೊಡಬೇಕು ಅಂತಾ ನಾನು ಕೂಡ ಒತ್ತಾಯ ಮಾಡ್ತೀನಿ. ಸರ್ಕಾರ ಅಷ್ಟೇ ಅಲ್ಲ ಆರ್‌ಸಿಬಿ‌ ಫ್ರಾಂಚೈಸಿ (RCB Franchise), ಕರ್ನಾಟಕ ಕ್ರಿಕೆಟ್ ಅಸೋಸಿಯೇಷನ್ (KSCA) ಅವರೂ ಕೊಡಬೇಕು. ಬರೀ ಹತ್ತು ಲಕ್ಷ ಅಲ್ಲ ಒಂದೊಂದು ಕೋಟಿ ಪರಿಹಾರ ಕೊಡಬೇಕು ಅಂತ ಒತ್ತಾಯಿಸುತ್ತೇನೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಪರಾರಿಯಾಗುತ್ತಿದ್ದ ಆರ್‌ಸಿಬಿಯ ನಿಖಿಲ್‌ ಸೋಸಲೆ ವಿಮಾನ ನಿಲ್ದಾಣದಲ್ಲಿ ಅರೆಸ್ಟ್‌

ಎಷ್ಟೇ ಪರಿಹಾರ ಕೊಟ್ರೂ ಸತ್ತ ಜೀವ ವಾಪಸ್ ತರಲು ಆಗಲ್ಲ. ವಿಪಕ್ಷದವರು ಜನರ ದಿಕ್ಕು ತಪ್ಪಿಸಲು ಏನು ಮಾಡಬೇಕೋ ಅದನ್ನ ಮಾಡ್ತಾರೆ. ನಮ್ಮ ಹಿರಿಯರು ಏನೇನೋ ಉತ್ತರ ಕೊಡಬೇಕು ಕೊಡ್ತಾರೆ. ಘಟನೆಯಲ್ಲಿ ಇಂಟಲಿಜೆನ್ಸ್ ತಪ್ಪಾಗಿದ್ರೇ ತನಿಖೆಯಿಂದ ಗೊತ್ತಾಗುತ್ತೆ ಅಂತ ಹೇಳಿದ್ದಾರೆ. ಇದನ್ನೂ ಓದಿ:  ತನ್ನ ಬಾಯ್‌ಫ್ರೆಂಡ್‌ನಿಂದ ಮಗಳ ಮೇಲೆಯೇ ರೇಪ್‌ ಮಾಡಿಸಿದ್ದ ಬಿಜೆಪಿ ನಾಯಕಿ ಅರೆಸ್ಟ್‌

ಏನಿದು ಪ್ರಕರಣ?
ರಾಯಲ್ ಚಾಲೆಂಜರ್ಸ್ ಬೆಂಗಳೂರು 18 ವರ್ಷಗಳ ಬಳಿಕ ಐಪಿಎಲ್ ಚಾಂಪಿಯನ್ ಪಟ್ಟವನ್ನೇನೋ ಅಲಂಕರಿಸಿದೆ. ಆದರೆ, ಆರ್‌ಸಿಬಿ ಫ್ಯಾನ್ಸ್ ಐತಿಹಾಸಿಕ ಕ್ಷಣದ ಸಂಭ್ರಮದಲ್ಲಿ ದುರಂತ ಸಂಭವಿಸಿದೆ. 10ಕ್ಕೂ ಹೆಚ್ಚು ಅಭಿಮಾನಿಗಳು ಸಾವನ್ನಪ್ಪಿ ಸೂತಕವಾಗಿ ಆಗಿಬಿಟ್ಟಿದೆ. ಪಂಜಾಬ್ ವಿರುದ್ಧ ಬೆಂಗಳೂರು 6 ರನ್‌ಗಳ ಭರ್ಜರಿ ಜಯ ಸಾಧಿಸ್ತಿದ್ದಂತೆಯೇ ಸಿಲಿಕಾನ್ ಸಿಟಿಯಲ್ಲಿ ನಿನ್ನೆ ರಾತ್ರಿಯೇ ದೀಪಾವಳಿಯಂಥಹ ಸಂಭ್ರಮ ಇತ್ತು. ಇವತ್ತು ಇಡೀ ದಿನ ಹೆಚ್‌ಎಎಲ್ ಏರ್‌ಪೋರ್ಟ್ ರೋಡ್, ತಾಜ್ ವೆಸ್ಟ್ ಎಂಡ್ ಹೊಟೇಲ್ ರೋಡ್, ವಿಧಾನಸೌಧ, ಚಿನ್ನಸ್ವಾಮಿ ಸ್ಟೇಡಿಯಂ ರಸ್ತೆ ಸುತ್ತ ಮುತ್ತ ರೆಡ್ ಆರ್ಮಿ ಎಲ್ಲಾ ಕಡೆ ಆರ್‌ಸಿಬಿ ತಂಡಕ್ಕೆ ತಮ್ಮ ಅಭಿಮಾನ ತೋರಿದರು.

ಇವತ್ತು ದಿಢೀರನೆ ವಿಜಯೋತ್ಸವ ಕಾರ್ಯಕ್ರಮವನ್ನು ಆಯೋಜನೆ ಮಾಡಿದ್ದರಿಂದ ಅಭಿಮಾನಿಗಳ ಸುನಾಮಿಯೇ ಸೃಷ್ಟಿ ಆಯ್ತು… ಉಚಿತ ಪ್ರವೇಶ ಆಗಿದ್ದರಿಂದ ಕ್ರೀಡಾಂಗಣಕ್ಕೆ ಫ್ಯಾನ್ಸ್ ಹರಿದುಬಂದಿತ್ತು. ಗೇಟ್ ನಂಬರ್ 18, 19, 20ರ ಬಳಿ ಅಭಿಮಾನಿ ಸಾಗರ ತಡೆಯಲು ಪೊಲೀಸರು ಹೈರಾಣಾಗಿ ಹೋದರು. ಒಂದು ಹಂತದಲ್ಲಿ ಲಾಠಿಯನ್ನೂ ಬೀಸಿದರು. ಕ್ಷಣ ಕ್ಷಣಕ್ಕೂ ಆರ್‌ಸಿಬಿ ಅಭಿಮಾನಿಗಳ ಸುನಾಮಿ ಹೆಚ್ಚುತ್ತಲೇ ಇತ್ತು. ಆದರೆ, ಗೇಟ್ ನಂ.12ರ ಬಳಿ ಗೇಟ್ ತೆಗೆಯುತ್ತಿದ್ದಂತೆಯೇ ಭಾರೀ ಪ್ರಮಾಣದಲ್ಲಿ ನೂಕು ನುಗ್ಗಲು ನಡೀತು. ಒಬ್ಬರ ಮೇಲೋಬ್ಬರು ಬಿದ್ದರು, ಉಸಿರಾಡೋಕೂ ಕೂಡ ಸಾಧ್ಯವಾಗಲಿಲ್ಲ. ತಕ್ಷಣವೇ ಹತ್ತಿರದ ಬೌರಿಂಗ್ ಆಸ್ಪತ್ರೆ, ವೈದೇಹಿ ಆಸ್ಪತ್ರೆ (ಮಲ್ಯ ರಸ್ತ್ರೆ), ಮಣಿಪಾಲ್‌ಗೆ ದಾಖಲಿಸಲಾಯಿತು. ಆದರೆ, ಬೌರಿಂಗ್ ಆಸ್ಪತ್ರೆಯಲ್ಲಿ 6, ವೈದೇಹಿ ಆಸ್ಪತ್ರೆಯಲ್ಲಿ 4 ಹಾಗೂ ಮಣಿಪಾಲ ಆಸ್ಪತ್ರೆಯಲ್ಲಿ ಒಬ್ಬರು ಸಾವನ್ನಪ್ಪಿದ್ದಾರೆ.

Share This Article