ಸ್ಮೃತಿ ಇರಾನಿ ಕಾಣುತ್ತಿಲ್ಲ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ವ್ಯಂಗ್ಯ

1 Min Read

ಬೆಂಗಳೂರು: ಅಡುಗೆ ಅನಿಲದ ಬೆಲೆ ಏರಿಕೆ ಮಾಡುವ ಮೂಲಕ ಮಹಿಳೆಯರಿಗೆ ಉಡುಗೊರೆ ನೀಡಿರುವ ಕೇಂದ್ರ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸಲು ಬಯಸುವೆ. ಈ ಬಗ್ಗೆ ಮಾತನಾಡಲು ಕೇಂದ್ರದ ಮಾಜಿ ಸಚಿವೆ ಸ್ಮೃತಿ ಇರಾನಿ (Smriti Irani) ಕಾಣಿಸುತ್ತಿಲ್ಲ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ (Lakshmi Hebbalkar) ವ್ಯಂಗ್ಯವಾಡಿದ್ದಾರೆ.

ವಿಧಾನಸೌಧದಲ್ಲಿ ಮಂಗಳವಾರ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ಈ ಹಿಂದೆ 10, 20 ರೂಪಾಯಿ ಏರಿಕೆ ಮಾಡಿದರೂ ಸ್ಮೃತಿ ಇರಾನಿ ಹೋರಾಟ ಮಾಡುತ್ತಿದ್ದರು. ಯಾಕೆ ಈಗ ಮಾತಾಡುತ್ತಿಲ್ಲ, ಎಲ್ಲಿ ಕಾಣೆಯಾಗಿದ್ದಾರೆ ಎಂದು ಪ್ರಶ್ನಿಸಿದರು. ಇದನ್ನೂ ಓದಿ: ವಾಣಿಜ್ಯ ಬಳಕೆಯ ಗ್ಯಾಸ್ ಸಮಸ್ಯೆ – ಕೇಂದ್ರ ಸಚಿವರಿಗೆ ಸಿಎಂ ಸಿದ್ದರಾಮಯ್ಯ ಪತ್ರ

ಈಗ ಯುದ್ಧ ನಡೆಯುತ್ತಿದ್ದು, ಇದರಿಂದ ಪೆಟ್ರೋಲ್‌, ಡಿಸೇಲ್‌, ಗ್ಯಾಸ್‌ ಬೆಲೆ ಏರಿಕೆಯಾಗುತ್ತಿದೆ. ಈಗಷ್ಟೇ ಸಂಕಷ್ಟ ಶುರುವಾಗಿದ್ದು, ಮುಂದಿನ ದಿನಗಳಲ್ಲಿ ಮತ್ತಷ್ಟು ಸಂಕಷ್ಟ ಎದುರಾಗಲಿದೆ. ಕೇಂದ್ರ ಸರ್ಕಾರ ತಕ್ಷಣ ಎಚ್ಚೆತ್ತುಕೊಳ್ಳಬೇಕು. ಗ್ರಾಹಕರ ಹಾಗೂ ಹೋಟೆಲ್‌ನವರ ಹಿತಾಸಕ್ತಿಯನ್ನು ಕಾಪಾಡಬೇಕು ಎಂದು ಸಚಿವರು ಹೇಳಿದರು.

Share This Article