ರಾಷ್ಟ್ರಪತಿ ಚುನಾವಣೆಗೆ ಲಾಲೂ ಪ್ರಸಾದ್ ಯಾದವ್ ಸ್ಪರ್ಧೆ

Public TV
1 Min Read

ಪಾಟ್ನಾ: ಮುಂದಿನ ಜುಲೈ 18ರಂದು ನಡೆಯಲಿರುವ ರಾಷ್ಟ್ರಪತಿ ಚುನಾವಣೆಗೆ ಕಣಕ್ಕಿಳಿಯಲು ಲಾಲೂ ಪ್ರಸಾದ್ ಯಾದವ್ ಸಿದ್ಧತೆ ನಡೆಸಿದ್ದಾರೆ. ಆದರೆ ಇವರು ರಾಷ್ಟ್ರೀಯ ಜನತಾ ದಳದ (RJD) ಮುಖ್ಯಸ್ಥರಲ್ಲ.

ಇವರು ಬಿಹಾರದ ಸರನ್ ಜಿಲ್ಲೆಯ ನಿವಾಸಿಯಾಗಿದ್ದಾರೆ. ಜೂನ್ 15ರಂದು ನಾಮಪತ್ರ ಸಲ್ಲಿಸುವ ಸಲುವಾಗಿ ದೆಹಲಿಗೆ ತೆರಳಲು ವಿಮಾನದ ಟಿಕೆಟ್ ಸಹ ಬುಕ್ ಮಾಡಿರುವುದಾಗಿ ತಿಳಿಸಿದ್ದಾರೆ. ಇದನ್ನೂ ಓದಿ: ಸತತ 2ನೇ ದಿನ ಪಾಸಿಟಿವಿಟಿ ದರ ಏರಿಕೆ – ರಾಜ್ಯದಲ್ಲಿಂದು 463 ಮಂದಿಗೆ ಕೊರೊನಾ

ಲಾಲೂ ಪ್ರಸಾದ್ ಯಾದವ್ ಚುನಾವಣೆಗೆ ಸ್ಪರ್ಧಿಸುತ್ತಿರುವುದು ಇದೇ ಮೊದಲೇನಲ್ಲ. 2017ರಲ್ಲಿಯೂ ಅವರು ರಾಷ್ಟ್ರಪತಿ ಚುನಾವಣೆಗೆ ನಾಮಪತ್ರ ಸಲ್ಲಿಸಿದ್ದರು. ಅಂದಿನ ಬಿಹಾರದ ರಾಜ್ಯಪಾಲ ರಾಮನಾಥ ಕೋವಿಂದ್ ಹಾಗೂ ಬಿಹಾರದವರೇ ಆದ ಲೋಕಸಭೆಯ ಮಾಜಿ ಸ್ಪೀಕರ್ ಮೀರಾ ಕುಮಾರ್ ಮಧ್ಯೆ ಪೈಪೋಟಿ ಏರ್ಪಟ್ಟಿತ್ತು. ಈ ಪೈಕಿ ರಾಮನಾಥ್ ಕೋವಿಂದ್ ಅವರು ರಾಷ್ಟ್ರಪತಿಯಾಗಿ ಆಯ್ಕೆಯಾಗಿದ್ದರು. ಇದನ್ನೂ ಓದಿ: ದೈನಂದಿನ ಜೀವನದ ಭಾಗವಾಗಲಿ ಯೋಗ – ಪ್ರಧಾನಿ ಮೋದಿ ಕರೆ

ರಾಜಕೀಯ ಇತಿಹಾಸದಲ್ಲಿ ಸತತವಾಗಿ ಚುನಾವಣೆಗಳಲ್ಲಿ ಸ್ಫರ್ಧಿಸುತ್ತಿದ್ದೂ ಸೋಲುತ್ತಲೇ ಇರುವುದರಿಂದ ಕೆಲವರು ಪ್ರಚಾರದ ಸಲುವಾಗಿಯೇ ಚುನಾವಣಾ ಕಣಕ್ಕೆ ಧುಮುಕುತ್ತಾರೆ. ಅಂಥವರ ಸಾಲಿಗೆ ಲಾಲೂ ಪ್ರಸಾದ್ ಸೇರಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ. ಆದರೆ ತಮ್ಮ ವಿರುದ್ಧದ ಟೀಕೆಗಳಿಗೆ ತಲೆಕೆಡಿಸಿಕೊಳ್ಳದ ಯಾದವ್ ಸತತ ಒಂದಿಲ್ಲೊಂದು ಚುನಾವಣೆಯಲ್ಲಿ ಸ್ಪರ್ಧಿಸುತ್ತಲೇ ಇದ್ದಾರೆ.

ಇಷ್ಟಾದರೂ ಅವರು ಚುನಾವಣೆಯ ಆಸಕ್ತಿ ಕಳೆದುಕೊಂಡಿರಲಿಲ್ಲ. 2019ರ ಚುನಾವಣೆಯಲ್ಲಿ ಮತ್ತೆ ಕಣಕ್ಕಿಳಿದಿದ್ದರು. ಆಗ ಸುಮಾರು 6 ಸಾವಿರ ಮತಗಳನ್ನು ಪಡೆದುಕೊಂಡಿದ್ದರು. ಇದೀಗ ಮತ್ತೆ ರಾಷ್ಟ್ರಪತಿ ಚುನಾವಣೆಗೆ ಸ್ಪರ್ಧಿಸಲು ಸಜ್ಜಾಗಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ಲಾಲೂ ಪ್ರಸಾದ್ ಯಾದವ್, ಕಳೆದ ಬಾರಿ ನನ್ನ ನಾಮಪತ್ರ ತಿರಸ್ಕೃತವಾಗಿತ್ತು. ನನ್ನ ಉಮೇದುವಾರಿಕೆಯನ್ನು ಬೆಂಬಲಿಸಲು ಸಾಕಷ್ಟು ಸಂಖ್ಯೆಯ ಅನುಮೋದಕರೂ ಇರಲಿಲ್ಲ. ಆದರೆ ಈ ಬಾರಿ ನಾನು ಉತ್ತಮ ತಯಾರಿ ನಡೆಸಿದ್ದೇನೆ ಎಂದಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *