ಲಾಲೂ ಪ್ರಸಾದ್ ಯಾದವ್ ಕಿರುಕುಳ ಎದುರಿಸುತ್ತಿದ್ದಾರೆ: ಬಿಜೆಪಿ ವಿರುದ್ಧ ಪ್ರಿಯಾಂಕಾ ವಾಗ್ದಾಳಿ

By
1 Min Read

ರಾಂಚಿ: ಬಿಜೆಪಿ ಮುಂದೆ ತಲೆ ಬಾಗದವರು ಕಿರುಕುಳ ಎದುರಿಸುತ್ತಾರೆ ಎಂದು ಹೇಳುವ ಮೂಲಕ ಮೇವು ಹಗರಣದಲ್ಲಿ ದೋಷಿಯಾಗಿರುವ ಬಿಹಾರದ ಮಾಜಿ ಮುಖ್ಯಮಂತ್ರಿ ಲಾಲು ಪ್ರಸಾದ್ ಯಾದವ್ ಅವರ ಬೆಂಬಲಕ್ಕೆ ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ನಿಂತಿದ್ದಾರೆ.

ಪ್ರಿಯಾಂಕಾ ಗಾಂಧಿ ಅವರು ಬಿಜೆಪಿ ಎಂಬ ರಾಜಕೀಯ ಬ್ರಾಂಡ್ ಮುಂದೆ ಬಾಗದವರು ಕಿರುಕುಳವನ್ನು ಎದುರಿಸುತ್ತಾರೆ. ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ನಾಯಕರಿಗೆ ಅಂತಿಮವಾಗಿ ನ್ಯಾಯ ಸಿಗುತ್ತದೆ ಎಂಬ ಭರವಸೆ ಇದೆ ಎಂದು ತಮ್ಮ ಟ್ವಿಟ್ಟರ್‌ನಲ್ಲಿ ಬರೆದುಕೊಂಡಿದ್ದಾರೆ. ಇದನ್ನೂ ಓದಿ: ಬಹುಕೋಟಿ ಮೇವು ಹಗರಣ, ಲಾಲೂ ಪ್ರಸಾದ್ ಯಾದವ್‌ ದೋಷಿ – CBI ಕೋರ್ಟ್‌

ಬಿಜೆಪಿ ಬ್ರಾಂಡ್ ರಾಜಕಾರಣದ ಪ್ರಮುಖ ಅಂಶವೆಂದರೆ, ತಲೆಬಾಗದವರು (ಪಕ್ಷದ ಮುಂದೆ) ಕಿರುಕುಳವನ್ನು ಎದುರಿಸಬೇಕಾಗುತ್ತದೆ. ಲಾಲು ಪ್ರಸಾದ್ ಯಾದವ್ ಅವರು ರಾಜಕೀಯದಲ್ಲಿ ರಾಜಿ ಮಾಡಿಕೊಳ್ಳದ ರೀತಿಯಲ್ಲಿ ದಾಳಿ ನಡೆಸುತ್ತಿದ್ದಾರೆ. ಅವರಿಗೆ ನ್ಯಾಯ ಸಿಗುತ್ತದೆ ಎಂಬ ಭರವಸೆ ನನಗಿದೆ ಎಂದು ತಿಳಿಸಿದ್ದಾರೆ.

ಮಂಗಳವಾರ ಜಾರ್ಖಂಡ್ ರಾಜಧಾನಿ ರಾಂಚಿಯ ಸಿಬಿಐ ವಿಶೇಷ ನ್ಯಾಯಾಲಯವು ಡೊರಾಂಡಾ ಮೇವು ಹಗರಣದ ಪ್ರಕರಣದಲ್ಲಿ ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ಮುಖ್ಯಸ್ಥ, ಮಾಜಿ ಮುಖ್ಯಮಂತ್ರಿ ಲಾಲು ಪ್ರಸಾದ್ ಯಾದವ್ ಕೂಡಾ ದೋಷಿ ಎಂದು ಘೋಷಿಸಿದೆ. ಇದನ್ನೂ ಓದಿ: ಕೋರ್ಟ್ ತೀರ್ಪು ಬರುವವರೆಗೂ ಮಗಳು ಮನೆಯಲ್ಲೇ ಇರಲಿ: ಮಂಡ್ಯ ಪೋಷಕರು

Share This Article
Leave a Comment

Leave a Reply

Your email address will not be published. Required fields are marked *