ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಕಂದಾಯ ಇಲಾಖೆಯಿಂದ ಜಮೀನು ವಶ – ಮನನೊಂದು ಮಹಿಳೆ ಆತ್ಮಹತ್ಯೆ

Public TV
1 Min Read

ಚಾಮರಾಜನಗರ: ಅಂಬೇಡ್ಕರ್ ಭವನ (Ambedkar Bhavan) ನಿರ್ಮಾಣ ಮಾಡುವುದಕ್ಕೆ ಕಂದಾಯ ಇಲಾಖೆ ಅಧಿಕಾರಿಗಳು (Revenue Department officials) ಜಮೀನು ವಶ ಪಡಿಸಿಕೊಂಡ ಹಿನ್ನೆಲೆ ಮನನೊಂದು ಮಹಿಳೆ ನೇಣಿಗೆ ಶರಣಾದ ಘಟನೆ ಚಾಮರಾಜನಗರದಲ್ಲಿ (Chamarajanagar) ನಡೆದಿದೆ.

ರಾಜಮ್ಮ (52) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಚಾಮರಾಜನಗರ ಜಿಲ್ಲೆ ಹನೂರು (Hanur) ತಾಲೂಕಿನ ದೊಡ್ಡಾಲತ್ತೂರಿನಲ್ಲಿ ಘಟನೆ ನಡೆದಿದೆ. ರಾಜಮ್ಮರಿಗೆ ಪಿತ್ರಾರ್ಜಿತವಾಗಿ 90 ಸೆಂಟ್ಸ್ ಭೂಮಿ ಬಂದಿತ್ತು. ಇದ್ದ ಚೂರುಪಾರು ಭೂಮಿಯಲ್ಲಿ ಕುಟುಂಬ ವ್ಯವಸಾಯ ಮಾಡಿಕೊಂಡಿತ್ತು. ಕಳೆದ ವಾರ ಇದ್ದಕ್ಕಿದ್ದ ಹಾಗೆ ಬಂದ ಕಂದಾಯ ಇಲಾಖೆಯ ಅಧಿಕಾರಿಗಳು 20 ಸೆಂಟ್ಸ್ ಭೂಮಿ ವಶಪಡಿಸಿಕೊಂಡಿದ್ದರು. ಅಂಬೇಡ್ಕರ್ ಭವನ ನಿರ್ಮಾಣಕ್ಕಾಗಿ ಜಮೀನು ವಶಪಡಿಸಿಕೊಳ್ಳಲಾಗಿತ್ತು. ಇದರಿಂದ ಬೇಸತ್ತು ರಾಜಮ್ಮ ಇಂದು ಮುಂಜಾನೆ ತಮ್ಮ ಜಮೀನಿನಲ್ಲಿ ನೇಣಿಗೆ ಶರಣಾಗಿದ್ದಾರೆ. ಇದನ್ನೂ ಓದಿ: ಧರ್ಮಸ್ಥಳ ಬುರುಡೆ ರಹಸ್ಯ| ಗುಂಡಿ ತೋಡಿದ್ದ ಕಾರ್ಮಿಕರ ಸಹಿ ಪಡೆದು ಕಳುಹಿಸಿದ ಎಸ್‌ಐಟಿ

ರಾಜಮ್ಮರ ಶವ ಇಟ್ಟು ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದಾರೆ. ಸ್ಥಳಕ್ಕೆ ಜಿಲ್ಲಾಧಿಕಾರಿಗಳು ಬರುವವರೆಗೂ ಯಾವುದೇ ಕಾರಣಕ್ಕೂ ಶವ ತೆಗೆಯುವುದಿಲ್ಲವೆಂದು ಪ್ರತಿಭಟನೆ ನಡೆಸಿದರು. ಘಟನೆ ಸಂಬಂಧ ರಾಮಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಶ್ರಾವಣ ಶನಿವಾರ – ಕೋಲಾರದ ಚಿಕ್ಕ ತಿರುಪತಿ, ಬಂಗಾರ ತಿರುಪತಿ ದೇವಾಲಯದಲ್ಲಿ ಭಕ್ತ ಸಾಗರ

Share This Article