ಜಮೀನು ವಿವಾದ – ಒಂದು ಎಕರೆ ಕಾಫಿ ಬೆಳೆ ನಾಶ ಮಾಡಿದ ಕಿಡಿಗೇಡಿಗಳು

Public TV
1 Min Read

ಹಾಸನ: ಜಮೀನಿನ ವಿಚಾರಕ್ಕೆ ಸಂಬಂಧಿಸಿದ ವಿವಾದದ ಹಿನ್ನೆಲೆ ಕಿಡಿಗೇಡಿಗಳು ಒಂದು ಎಕರೆ ಪ್ರದೇಶದಲ್ಲಿ ಬೆಳೆದಿದ್ದ ಕಾಫಿ ಗಿಡಗಳನ್ನು ನಾಶಪಡಿಸಿದ ಘಟನೆ ಬೇಲೂರಿನ ದೋಲನಮನೆ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ಕುರಂ ಎಂಬವರಿಗೆ ಸೇರಿದ ಕಾಫಿ ತೋಟವನ್ನು ಕಿಡಿಗೇಡಿಗಳು ನಾಶ ಮಾಡಿದ್ದಾರೆ. ಹತ್ತಾರು ವರ್ಷಗಳಿಂದ ಬೆಳೆದಿದ್ದ ಕಾಫಿ ಗಿಡಗಳನ್ನು ಜೆಸಿಬಿಯಿಂದ ನಾಶ ಮಾಡಲಾಗಿದೆ.

ಗ್ರಾಮದ ಮೊಸೀನ್, ಜಾಹಿದ್, ಅಫನಾನ್ ಶಾಕೀರ್ ಎಂಬವರು ಕಾಫಿ ತೋಟವನ್ನು ನಾಶ ಮಾಡಿದ್ದಾರೆ ಎಂದು ಕುರುಂ ಆರೋಪಿಸಿದ್ದಾರೆ. ಇನ್ನೂ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಅವರು ಆಗ್ರಹಿಸಿದ್ದಾರೆ. ಅರೇಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಸ್ಥಳಕ್ಕೆ ಪೊಲೀಸರು ಭೇಟಿನೀಡಿ ಪರಿಶೀಲನೆ ನಡೆಸಿದ್ದಾರೆ.

 

Share This Article