ಚಂದ್ರ ಇನ್ನೂ ಸನಿಹ – ಪ್ರೊಪಲ್ಷನ್ ಮಾಡ್ಯೂಲ್‌ನಿಂದ ಯಶಸ್ವಿಯಾಗಿ ಬೇರ್ಪಟ್ಟ ವಿಕ್ರಮ್‌ ಲ್ಯಾಂಡರ್‌

Public TV
3 Min Read

ಬೆಂಗಳೂರು: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ (ISRO) ಮಹತ್ವಾಕಾಂಕ್ಷೆ ಯೋಜನೆ ಚಂದ್ರಯಾನ-3ರ (Chandrayaan-3) ಲ್ಯಾಂಡರ್‌ ವಿಕ್ರಮ್‌ (Vikram Lander) ಯಶಸ್ವಿಯಾಗಿ ಬಾಹ್ಯಾಕಾಶ ನೌಕೆಯಿಂದ ಬೇರ್ಪಟ್ಟಿದೆ. ಗುರುವಾರ ಮಧ್ಯಾಹ್ನ 1:15 ಗಂಟೆಗೆ ಪ್ರೊಪಲ್ಷನ್ (Propulsion) ಮಾಡ್ಯೂಲ್‌ನಿಂದ ಲ್ಯಾಂಡರ್‌ ಮ್ಯಾಡ್ಯೂಲ್‌ ಬೇರ್ಪಟ್ಟಿದ್ದು, ಆಗಸ್ಟ್‌ 23ರಂದು ಚಂದ್ರನ (Moon) ಮೇಲೆ ಇಳಿಯಲು ಸಜ್ಜಾಗಿದೆ ಇಸ್ರೋ ತಿಳಿಸಿದೆ.

ಈ ಮಾಹಿತಿಯನ್ನು ಟ್ವಿಟ್ಟರ್‌ ಅಧಿಕೃತ ಖಾತೆಯಲ್ಲಿ ಹಂಚಿಕೊಂಡಿರುವ ಇಸ್ರೋ, ಲ್ಯಾಂಡರ್‌ ಮ್ಯಾಡ್ಯೂಲ್‌, ಪ್ರೊಪಲ್ಷನ್ ಮಾಡ್ಯೂಲ್ ನಿಂದ ಯಶಸ್ವಿಯಾಗಿ ಬೇರ್ಪಟ್ಟಿದೆ. ನಾಳೆಗೆ ಯೋಜಿಸಲಾದ 1,600 ಗಂಟೆಗಳ ಡಿಬೂಸ್ಟಿಂಗ್‌ ನಂತರ ಚಂದ್ರನ ಮೇಲೆ ಲ್ಯಾಂಡರ್‌ ಇಳಿಯಲಿದೆ. ಪ್ರೊಪಲ್ಷನ್‌ ಮಾಡ್ಯೂಲ್‌ ತಿಂಗಳುಗಳ ಕಾಲ‌ ಅಥವಾ ವರ್ಷಗಳ ವರೆಗೆ ಪ್ರಸ್ತುತ ಕಕ್ಷೆಯಲ್ಲೇ ತನ್ನ ಪ್ರಯಾಣ ಮುಂದುವರಿಸಲಿದೆ ಎಂದು ಮಾಹಿತಿ ಹಂಚಿಕೊಂಡಿದೆ. ಇದನ್ನೂ ಓದಿ: ತಮಿಳುನಾಡಿನಲ್ಲಿ iPhone-15 ಉತ್ಪಾದನೆ ಆರಂಭಿಸಿದ ಫಾಕ್ಸ್‌ಕಾನ್‌

‘ಚಂದ್ರಯಾನ-3’ ನೌಕೆಯು ಬುಧವಾರ ಚಂದ್ರನ ಅಂತಿಮ ಕಕ್ಷೆ ಪ್ರವೇಶಿಸಿತ್ತು. ನೌಕೆಯು ಚಂದ್ರನ ದಕ್ಷಿಣ ಧ್ರುವದಲ್ಲಿ ಲ್ಯಾಂಡ್‌ ಆಗುವ ಮುನ್ನ ಉಡಾವಣಾ (ಪ್ರೊಪಲ್ಷನ್ ಮಾಡ್ಯೂಲ್‌) ವಾಹನದಲ್ಲಿರುವ ಲ್ಯಾಂಡರ್‌ ಮಾಡ್ಯೂಲ್‌ ‘ವಿಕ್ರಮ್’ ಅನ್ನು ಪ್ರತ್ಯೇಕಗೊಳಿಸುವ ಕಾರ್ಯ ಗುರುವಾರ ನಡೆಯಲಿದೆ ಎಂದು ಹೇಳಿತ್ತು. ಇದೀಗ ʻವಿಕ್ರಮ್‌ʼ ಲ್ಯಾಂಡರ್‌ ಯಶಸ್ವಿಯಾಗಿ ಬೇರ್ಪಟ್ಟಿದ್ದು, ಚಂದ್ರಯನ ಮೇಲೆ ನೌಕೆ ಇಳಿಯುವ ಕನಸು ನನಸಾಗಲು ದಿನಗಣನೆ ಆರಂಭವಾಗಿದೆ.

ಚಂದ್ರನ ದಕ್ಷಿಣ-ಧ್ರುವ ಸವಾಲಿನ ಭೂಪ್ರದೇಶದ ಹೊರತಾಗಿಯೂ, ಗಣನೀಯ ಪ್ರಮಾಣದ ಮಂಜುಗಡ್ಡೆಯ ಸಂಭಾವ್ಯ ಉಪಸ್ಥಿತಿಯಿಂದಾಗಿ ವಿಜ್ಞಾನಿಗಳಿಗೆ ಹೆಚ್ಚು ಸೂಕ್ಷ್ಮವಾಗಿರಬೇಕಾಗಿದೆ. ಇಂಧನ, ಆಮ್ಲಜನಕ ಮತ್ತು ಕುಡಿಯುವ ನೀರನ್ನು ಹೊರತೆಗೆಯಲು ಇದು ಉಪಯುಕ್ತವಾಗಿದೆ. ಆ. 23ರಂದು ಚಂದ್ರನ ದಕ್ಷಿಣ ಧ್ರುವದಲ್ಲಿ ನೌಕೆಯ ಪ್ರಗ್ಯಾನ್ ರೋವರ್ ಅನ್ನು ಸುರಕ್ಷಿತವಾಗಿ ಇಳಿಸಲು ಸಿದ್ಧತೆ ನಡೆಸಲಾಗಿದೆ ಎಂದು ಇಸ್ರೋ ತಿಳಿಸಿದೆ. ಇದನ್ನೂ ಓದಿ: ಚಂದ್ರನ ಅಂತಿಮ ಕಕ್ಷೆ ಪ್ರವೇಶಿಸಿದ ಚಂದ್ರಯಾನ ನೌಕೆ

ಚಂದ್ರಯಾನ-3 ಮಿಷನ್ ಚಂದ್ರನ ಮೇಲ್ಮೈಯಲ್ಲಿ ಸುರಕ್ಷಿತ ಮತ್ತು ಸಾಫ್ಟ್ ಲ್ಯಾಂಡಿಂಗ್ ಮಾಡುವ ಗುರಿ ಹೊಂದಿದೆ ಮತ್ತು ಸ್ಥಳದಲ್ಲಿ ವೈಜ್ಞಾನಿಕ ಪ್ರಯೋಗಗಳನ್ನ ಕಾರ್ಯಗತಗೊಳಿಸುತ್ತದೆ. ಸೆಪ್ಟೆಂಬರ್ 2019 ರಲ್ಲಿ ವಿಕ್ರಮ್ ಲ್ಯಾಂಡರ್ ಲ್ಯಾಂಡಿಂಗ್ ಪ್ರಯತ್ನದ ಸಮಯದಲ್ಲಿ ಅದರ ಉದ್ದೇಶಿತ ಮಾರ್ಗದಿಂದ ವಿಚಲನಗೊಂಡು ಇಡೀ ಯೋಜನೆ ಹಿನ್ನಡೆ ಅನುಭವಿಸಿತ್ತು.

ಜುಲೈ 14ರಂದು ಉಡಾವಣೆಗೊಂಡಿದ್ದ ಚಂದ್ರಯಾನ-3 ನೌಕೆಯು, ಆ. 5ರಂದು ಚಂದ್ರನ ಕಕ್ಷೆ ಪ್ರವೇಶಿಸಿತ್ತು. ಮೂರು ಕಕ್ಷೆಗಳನ್ನು ದಾಟಿ ಚಂದ್ರನ ದಕ್ಷಿಣ ಧ್ರುವದ ಮೇಲ್ಮೈ ಸನಿಹ ತಲುಪಿತ್ತು.

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್