– ಶಿರಾಡಿಘಾಟ್ ರಸ್ತೆಯಲ್ಲಿ ವಾಹನ ಸಂಚಾರ ಸಂಪೂರ್ಣ ಬಂದ್
– ಸಂಕಷ್ಟಕ್ಕೆ ಸಿಲುಕಿದ ಸಾವಿರಾರು ಸವಾರರು
ಹಾಸನ: ಜಿಲ್ಲೆಯ ಮಲೆನಾಡು ಭಾಗದಲ್ಲಿ ಮಳೆರಾಯ ಅಬ್ಬರಿಸುತ್ತಿದ್ದು, ಭಾರೀ ಮಳೆಗೆ ರಾಷ್ಟ್ರೀಯ ಹೆದ್ದಾರಿ 75ರಲ್ಲಿ (NH 75) ಭೂಕುಸಿತ (Landslide) ಉಂಟಾಗಿದೆ. ಭೂಕುಸಿತ ಹಿನ್ನೆಲೆ ವಾಹನ ಸಂಚಾರದಲ್ಲಿ ಭಾರೀ ವ್ಯತ್ಯಯ ಉಂಟಾಗಿದೆ.
ಸಕಲೇಶಪುರ ತಾಲೂಕಿನ, ಮಾರನಹಳ್ಳಿ ಬಳಿ ಹಲವೆಡೆ ಭೂಕುಸಿತ ಉಂಟಾಗಿದೆ. ಮರ, ಗಿಡಗಳ ಸಮೇತ ಮಣ್ಣು ರಸ್ತೆಗೆ ಕುಸಿಯುತ್ತಿದೆ. ವೀಕೆಂಡ್ ಹಿನ್ನೆಲೆಯಲ್ಲಿ ವಾಹನಗಳ ಸಂಚಾರ ಹೆಚ್ಚಿದ್ದು, ಶಿರಾಡಿ ಘಾಟ್ (Shiradi Ghat) ರಸ್ತೆಯಲ್ಲಿ ಟ್ರಾಫಿಕ್ ಜಾಮ್‌ನಲ್ಲಿ (Traffic Jam) ಸಿಲುಕಿ ವಾಹನ ಸವಾರರು ಪರದಾಡಿದ್ದಾರೆ. ಇದನ್ನೂ ಓದಿ: ಬುರುಡೆ ಸಿಕ್ಕಿದ್ದೆಲ್ಲಿ? ತಂದಿದ್ದೆಲ್ಲಿ? – ಅನಾಮಿಕ ದೂರುದಾರನ ತೀವ್ರ ವಿಚಾರಣೆ
ಭೂಕುಸಿತ ಹಿನ್ನೆಲೆ ಶಿರಾಡಿ ಘಾಟ್ ರಸ್ತೆ ಸಂಚಾರ ಬಂದ್ ಆಗಿದ್ದು, ನೂರಾರು ವಾಹನಗಳು ರಸ್ತೆ ಮಧ್ಯೆ ನಿಂತಿದೆ. ನಿರಂತರವಾಗಿ ಮಳೆ ಸುರಿಯುತ್ತಿರುವ ಪರಿಣಾಮ ಟ್ರಾಫಿಕ್ ಜಾಮ್ ತೆರವುಗೊಳಿಸಲು ಪೊಲೀಸರು ಹರಸಾಹಸಪಡುತ್ತಿದ್ದಾರೆ. ಇದನ್ನೂ ಓದಿ: ಚಂದ್ರಶೇಖರ ಸ್ವಾಮೀಜಿ ಭೈರವೈಕ್ಯ – ನಾಥ ಸಂಪ್ರದಾಯದಂತೆ ನೆರವೇರಿದ ಅಂತ್ಯ ಸಂಸ್ಕಾರ
ರಾಷ್ಟ್ರೀಯ ಹೆದ್ದಾರಿ 75 ಶಿರಾಡಿ ಘಾಟ್ ರಸ್ತೆಯಲ್ಲಿ ವಾಹನ ಸಂಚಾರ ಸಂಪೂರ್ಣ ಬಂದ್ ಮಾಡಲಾಗಿದೆ. ಮಾರನಹಳ್ಳಿ ಬಳಿ ಪೊಲೀಸರು ಬ್ಯಾರಿಕೇಡ್ ಹಾಕಿ ಬದಲಿ ರಸ್ತೆಯಲ್ಲಿ ಸಂಚರಿಸುವಂತೆ ಸೂಚನೆ ನೀಡಿದ್ದಾರೆ. ಇದರಿಂದ ಸಾವಿರಾರು ವಾಹನ ಸವಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಇದನ್ನೂ ಓದಿ: ಧರ್ಮಸ್ಥಳದ ಬುಡಕ್ಕೆ ಕೈ ಹಾಕುವ ಕೆಲ್ಸ ಆಗ್ತಿದೆ: ವಿಶ್ವನಾಥ್