2000 ರೂ. ನೋಟುಗಳ ವಿನಿಮಯ ಅವಧಿ ಇಂದಿಗೆ ಅಂತ್ಯವಾದರೂ ಬದಲಾಯಿಸಬಹುದು

Public TV
1 Min Read

ನವದೆಹಲಿ: 2000 ರೂ. ಮುಖಬೆಲೆಯ ನೋಟುಗಳ ಅಮಾನ್ಯೀಕರಣವನ್ನು ಆರ್‌ಬಿಐ (Reserve Bank of India) ಘೋಷಿಸಿದ ನಾಲ್ಕು ತಿಂಗಳ ಬಳಿಕ ನೋಟುಗಳನ್ನು ವಿನಿಮಯ ಮಾಡಿಕೊಳ್ಳುವ ಅವಧಿ ಇಂದು ಕೊನೆಯಾಗಿದೆ. ಈ ಮೂಲಕ ಅ.1 ರಿಂದ ಅಂದರೆ ನಾಳೆಯಿಂದ 2000 ರೂ. ನೋಟುಗಳು ಮೌಲ್ಯವನ್ನು ಕಳೆದುಕೊಳ್ಳಲಿವೆ.

ಈ ನೋಟುಗಳು ಮಾನ್ಯವಾಗಿ ಮುಂದುವರಿದರೂ ಸಹ ಅವುಗಳನ್ನು ಮಾರುಕಟ್ಟೆ ವಹಿವಾಟುಗಳಲ್ಲಿ ಸ್ವೀಕರಿಸಲಾಗುವುದಿಲ್ಲ. ಅಲ್ಲದೇ ಬ್ಯಾಂಕುಗಳು ಬದಲಾಯಿಸುವುದಿಲ್ಲ. ಒಂದು ವೇಳೆ ಈಗಲೂ 2000 ರೂ. ನೋಟುಗಳು ನಿಮ್ಮ ಬಳಿ ಇದ್ದರೆ ನೋಟುಗಳನ್ನು ಸ್ಥಳೀಯ ಆರ್‌ಬಿಐ (RBI) ಉಪ ಕಚೇರಿಗಳಿಂದ ಮಾತ್ರ ಬದಲಾಯಿಸಬಹುದಾಗಿದೆ. ಇದನ್ನೂ ಓದಿ: 84 ಬ್ಯಾಂಕ್ ಅಕೌಂಟ್, 854 ಕೋಟಿ ವಹಿವಾಟು – ಬೃಹತ್ ಸೈಬರ್ ಕ್ರೈಂ ಜಾಲ ಬೆಳಕಿಗೆ

2000 ರೂ. ಮುಖಬೆಲೆಯ ನೋಟುಗಳನ್ನು ನವೆಂಬರ್ 2016 ರಲ್ಲಿ ಭಾರತೀಯ ರಿಸರ್ವ್ ಬ್ಯಾಂಕ್ ಕಾಯಿದೆ 1934ರ ಸೆಕ್ಷನ್ 24 (1) ಅಡಿಯಲ್ಲಿ ಪರಿಚಯಿಸಲಾಗಿತ್ತು. ಅದಕ್ಕೂ ಮೊದಲು ಚಲಾವಣೆಯಲ್ಲಿದ್ದ 500 ಮತ್ತು 1000 ರೂ. ಮುಖಬೆಲೆಯ ನೋಟುಗಳನ್ನು ನಿಷೇಧಿಸಿದ ಈ ನೋಟನ್ನು ಬಿಡುಗಡೆ ಮಾಡಲಾಗಿತ್ತು.

ಇತರ ಮುಖಬೆಲೆಯ ನೋಟುಗಳು ಪ್ರಸುತ್ತ ಸಾಕಷ್ಟು ಪ್ರಮಾಣದಲ್ಲಿ ಲಭ್ಯವಿದೆ. ಈ ಹಿನ್ನಲೆಯಲ್ಲಿ ಆರ್‍ಬಿಐನ ಕ್ಲೀನ್ ನೋಟ್ ಪಾಲಿಸಿ ಅಡಿಯಲ್ಲಿ 2000 ರೂ. ನೋಟುಗಳನ್ನು ಹಿಂಪಡೆಯಲು ನಿರ್ಧರಿಸಲಾಗಿದೆ ಎಂದು ಈ ಹಿಂದೆ ಹಣಕಾಸು ರಾಜ್ಯ ಸಚಿವ ಪಂಕಜ್ ಚೌದರಿ ತಿಳಿಸಿದ್ದರು. ಇದನ್ನೂ ಓದಿ: ಪತ್ರ ಬರೆದು ಬೆದರಿಕೆ ಹಾಕಿದ್ದರೆ ಪ್ರಗತಿಪರರು ಸುಮ್ಮನಾಗುತ್ತಿದ್ದರು: ಶಿವಾಜಿರಾವ್‌ ಜಾಧವ್‌ ಹೇಳಿದ್ದೇನು?

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್