ಲತಾ ಮಂಗೇಶ್ಕರ್ ನಿಧನಕ್ಕೆ ಪ್ರಧಾನಿ ಮೋದಿ ಸೇರಿ ಗಣ್ಯರ ಸಂತಾಪ

Public TV
2 Min Read

ನವದೆಹಲಿ: ಕೊರೊನಾ ಸೋಂಕಿಗೆ ತುತ್ತಾಗಿ ನಿಧನರಾಗಿರುವ ಖ್ಯಾತ ಗಾಯಕಿ ಲತಾ ಮಂಗೇಶ್ಕರ್ ಸಾವಿಗೆ ಪ್ರಧಾನಿ ನರೇಂದ್ರ ಮೋದಿ ಹಾಗೂ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಸಂತಾಪ ಸೂಚಿಸಿದ್ದಾರೆ.

ಲತಾ ದೀದಿಯವರಿಂದ ನಾನು ಯಾವಾಗಲೂ ಅಪಾರ ಪ್ರೀತಿಯನ್ನು ಪಡೆದಿದ್ದೇನೆ. ಇದು ನನ್ನ ಸೌಭಾಗ್ಯವೆಂದೆ ಅಂದುಕೊಳ್ಳುತ್ತೇನೆ. ಅವರೊಂದಿಗಿನ ನನ್ನ ಸಂವಾದಗಳು ಎಂದಿಗೂ ಅವಿಸ್ಮರಣೀಯವಾಗಿ ಉಳಿಯುತ್ತವೆ. ಲತಾ ದೀದಿ ಅವರ ನಿಧನಕ್ಕೆ ಇಡೀ ದೇಶದ ಜೊತೆಗೆ ನಾನು ಸಹ ದುಃಖಿಸುತ್ತೇನೆ. ಲತಾ ಮಂಗೇಶ್ಕರ ಸಾವಿನ ಕುರಿತು ಕುಟುಂಬದವರೊಂದಿಗೆ ಮಾತನಾಡಿ ಅವರಿಗೆ ಸಾಂತ್ವನ ಹೇಳಿದ್ದೇನೆ ಎಂದು ಪ್ರಧಾನಿ ಮೋದಿ ತಿಳಿಸಿದರು. ಇದನ್ನೂ ಓದಿ: ಹಿರಿಯ ಗಾಯಕಿ ಲತಾ ಮಂಗೇಶ್ಕರ್ ಇನ್ನಿಲ್ಲ

ಲತಾ ಜಿ ಅವರ ನಿಧನವು ನನ್ನು ಸೇರಿದಂತೆ ಪ್ರಪಂಚದಾದ್ಯಂತ ಲಕ್ಷಾಂತರ ಜನರಿಗೆ ನೋವು ತಂದಿದೆ. ಅವರ ವಿಶಾಲ ಶ್ರೇಣಿಯ ಹಾಡುಗಳಲ್ಲಿ, ಭಾರತದ ಸಾರ ಮತ್ತು ಸೌಂದರ್ಯವನ್ನು ನಿರೂಪಿಸಿದೆ. ಮುಂದಿನ ತಲೆಮಾರುಗಳು ತಮ್ಮ ಆಂತರಿಕ ಭಾವನೆಗಳ ಅಭಿವ್ಯಕ್ತಿಯನ್ನು ಕಂಡುಕೊಳ್ಳಲು ಸಹಕಾರಿಯಾಗುವಂತಹ ಹಾಡುಗಳಾಗಿವೆ. ಭಾರತ ರತ್ನ, ಲತಾ ಮಂಗೇಶ್ಕರ್ ಅವರ ಸಾಧನೆಗಳು ಎಂದಿಗೂ ಅಚ್ಚಳಿಯದೇ ಉಳಿಯುತ್ತವೆ ಎಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಸಂತಾಪ ವ್ಯಕ್ತಪಡಿಸಿದರು.  ಇದನ್ನೂ ಓದಿ: ಹಿರಿಯ ಗಾಯಕಿ ಲತಾ ಮಂಗೇಶ್ಕರ್ ಇನ್ನಿಲ್ಲ

ಲತಾ ಮಂಗೇಶ್ಕರ್ ಅವರು ಹಲವು ದಶಕಗಳಿಂದ ಭಾರತದ ಅತ್ಯಂತ ಪ್ರೀತಿಯ ಧ್ವನಿಯಾಗಿ ಉಳಿದರು. ಅವರ ಚಿನ್ನದ ಧ್ವನಿಯು ಅಮರವಾಗಿದೆ ಮತ್ತು ಅವರ ಅಭಿಮಾನಿಗಳ ಹೃದಯದಲ್ಲಿ ಪ್ರತಿಧ್ವನಿಸುತ್ತಲೇ ಇರುತ್ತದೆ. ಅವರ ಕುಟುಂಬ, ಸ್ನೇಹಿತರು ಮತ್ತು ಅಭಿಮಾನಿಗಳಿಗೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಸಂತಾಪ ಸೂಚಿಸಿದರು.

ಗೃಹ ಸಚಿವ ಅಮಿತ್ ಶಾ ಟ್ವೀಟ್ ಮಾಡಿ, ಲತಾ ದೀದಿಯವರ ವಾತ್ಸಲ್ಯ ಮತ್ತು ಆಶೀರ್ವಾದವನ್ನು ಪಡೆದಿರುವುದು ನನ್ನ ಅದೃಷ್ಟ ಎಂದು ಭಾವಿಸುತ್ತೇನೆ. ಅಪ್ರತಿಮ ದೇಶಭಕ್ತಿ, ಮಧುರವಾದ ಮಾತು, ಸಜ್ಜನಿಕೆಯಿಂದ ಸದಾ ನಮ್ಮ ನಡುವೆ ಇರುತ್ತಾರೆ. ಅವರ ಕುಟುಂಬ ಮತ್ತು ಅಸಂಖ್ಯಾತ ಅಭಿಮಾನಿಗಳಿಗೆ ನನ್ನ ಸಂತಾಪವನ್ನು ವ್ಯಕ್ತಪಡಿಸುತ್ತೇನೆ ಎಂದರು.

Share This Article
Leave a Comment

Leave a Reply

Your email address will not be published. Required fields are marked *