ಜಾಮೀನಿಗಾಗಿ ವಕೀಲನ ಕಿಡ್ನಾಪ್ – ರಾತ್ರಿ ಇಡೀ ಹಲ್ಲೆ ನಡೆಸಿ ಕ್ರೌರ್ಯ ಮೆರೆದ ರೌಡಿಶೀಟರ್

Public TV
1 Min Read

ಬೆಂಗಳೂರು: ಜೈಲಿನಲ್ಲಿರುವ ತನ್ನ ಕಡೆಯ 8 ಜನರಿಗೆ ಜಾಮೀನು ಕೊಡಿಸಲು ವಕೀಲರನ್ನೇ (Lawyer) ಕಿಡ್ನಾಪ್ ಮಾಡಿ ರಾತ್ರಿ ಪೂರ್ತಿ ಹಲ್ಲೆ ನಡೆಸಿದ ಪ್ರಕರಣ ಬೆಂಗಳೂರಿನಲ್ಲಿ (Bengaluru) ನಡೆದಿದೆ.

ವಕೀಲ ಗಿರಧರ್ ಎಂಬುವವರನ್ನು ಅವರ ಕಾರ್‌ನಲ್ಲೇ ಅಪಹರಿಸಲಾಗಿದೆ. ಬಳಿಕ 8 ಜನರಿಗೂ ಬೇಲ್ ವ್ಯವಸ್ಥೆ ಮಾಡಬೇಕು ಎಂದು ಹೇಳಿದ್ದಾರೆ. ಬಳಿಕ ಬಟ್ಟೆ ಬಿಚ್ಚಿಸಿ ಕಾರಿನ ಜಾಕ್ ರಾಡ್ ಹಾಗೂ ಸ್ಪಾನರ್ ಬಳಸಿ ಹಲ್ಲೆ ಮಾಡಲಾಗಿದೆ. 5 ಲಕ್ಷ ರೂ. ಹಣ ತಂದು ಕೊಡಬೇಕು ಅಲ್ಲದೇ ಈ ವಿಚಾರವನ್ನು ಪೊಲೀಸರಿಗೆ ತಿಳಿಸಿದರೆ ಕೊಲ್ಲುವುದಾಗಿ ಬೆದರಿಕೆಯನ್ನೂ ಒಡ್ಡಿದ್ದಾರೆ. ಬಳಿಕ ಗಿರಿಧರ್ ಅವರಿಂದ 10 ಸಾವಿರ ರೂ. ಕಸಿದುಕೊಂಡು ಕಳಿಸಿದ್ದಾರೆ. ಇದನ್ನೂ ಓದಿ: ಹಂಪಿ ಬೀದಿ ಬದಿ ವ್ಯಾಪಾರಿಯ ಮಗ ಮೆಕ್ಯಾನಿಕಲ್ ಎಂಜಿನಿಯರಿಂಗ್‌ನಲ್ಲಿ 3ನೇ ರ‍್ಯಾಂಕ್

ಈ ಸಂಬಂಧ ರೌಡಿಶೀಟರ್‍ಗಳಾದ ರಾಜೇಶ್ ಅಲಿಯಾಸ್ ಕೋಳಿ ರಾಜೇಶ್, ಹರ್ಷಿತ್ ಅಲಿಯಾಸ್ ಆಪಲ್, ಜಾನ್ ಹಾಗೂ ಭರತ್ ವಿರುದ್ಧ ಚೆನ್ನಮ್ಮನಕೆರೆ ಅಚ್ಚುಕಟ್ಟು ಪೊಲೀಸ್ (Police) ಠಾಣೆಯಲ್ಲಿ ದೂರು ದಾಖಲಿಸಿದ್ದರು. ಕಾರ್ಯಾಚರಣೆ ನಡೆಸಿ ಮೂವರು ಆರೋಪಿಗಳನ್ನು ಬಂಧಿಸಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಎಸ್‍ಇಪಿ ಜಾರಿಗೆ ಸರ್ಕಾರದ ಸಿದ್ಧತೆ – ಮುಂದಿನ ಶೈಕ್ಷಣಿಕ ವರ್ಷದಿಂದಲೇ ಜಾರಿ ಸಾಧ್ಯತೆ

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್