ಬೆಂಗಳೂರಿನಿಂದ ಹೊರಟ ಲೀಲಾವತಿ ಪಾರ್ಥಿವ ಶರೀರ

Public TV
1 Min Read

ಹಿರಿಯ ನಟಿ ಲೀಲಾವತಿ (Leelavati) ಅವರ ಪಾರ್ಥಿವ ಶರೀರ ಬೆಂಗಳೂರಿನ (Bengaluru) ರವೀಂದ್ರ ಕಲಾಕ್ಷೇತ್ರದಿಂದ ನೆಲಮಂಗಲದ ಸೋಲದೇವನಹಳ್ಳಿಗೆ (Soladevanahalli) ಹೊರಟಿದೆ. ಸಿಎಂ ಸಿದ್ದರಾಮಯ್ಯ ಸೇರಿದಂತೆ ರಾಜಕೀಯ ಗಣ್ಯರು ಮತ್ತು ಸಿನಿಮಾರಂಗದ ಅನೇಕ ಕಲಾವಿದರು ಮತ್ತು ತಂತ್ರಜ್ಞರು ಲೀಲಾವತಿ ಅವರು ಅಂತಿಮ ದರ್ಶನ ಪಡೆದರು.

ಲೀಲಾವತಿ ಅವರ ಅಂತ್ಯಸಂಸ್ಕಾರವನ್ನು ಸರ್ಕಾರಿ ಗೌರವದೊಂದಿಗೆ ಸೋಲದೇವನಹಳ್ಳಿಯಲ್ಲಿರುವ ಅವರ ತೋಟದಲ್ಲಿ ನೆರವೇರಿಸಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ. ಸರ್ಕಾರ ಮತ್ತು ಲೀಲಾವತಿ ಅವರ ಕುಟುಂಬದೊಂದಿಗೆ ಚರ್ಚಿಸಿ ಈ  ತೀರ್ಮಾನ ತೆಗೆದುಕೊಳ್ಳಲಾಗಿದೆ ಎಂದಿದ್ದಾರೆ. ಬೆಳಗ್ಗೆಯಿಂದ ನೆಲಮಂಗದಲ್ಲಿ ಲೀಲಾವತಿ ಅವರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು, ಮಧ್ಯಾಹ್ನ 3:30ಕ್ಕೆ ಅಂತ್ಯಸಂಸ್ಕಾರ (Cremation) ನೆರವೇರಿಸಲಾಗುತ್ತಿದೆ.

 

ಕನ್ನಡ ಸಿನಿಮಾ ರಂಗದ ಹಿರಿಯ ನಟಿ ಲೀಲಾವತಿ ಅವರ ಅಂತಿಮ ದರ್ಶನಕ್ಕೆ ಇಂದು ಬೆಳಗ್ಗೆಯಿಂದ ನೆಲಮಂಗಲದ ಅಂಬೇಡ್ಕರ್ ಮೈದಾನದಲ್ಲಿ ವ್ಯವಸ‍್ಥೆ ಮಾಡಲಾಗಿತ್ತು. ನೆಲಮಂಗಲ ಸುತ್ತಮುತ್ತಲಿನ ಗ್ರಾಮಸ್ಥರು, ಸಿನಿಮಾ ಅಭಿಮಾನಿಗಳು ಹಾಗೂ ಕಲಾವಿದರು ಮತ್ತು ತಂತ್ರಜ್ಞರು ಮೈದಾನಕ್ಕೆ ಆಗಮಿಸಿ ಅಗಲಿದ ನೆಚ್ಚಿನ ನಟಿಯ ಅಂತಿಮ ದರ್ಶನ ಪಡೆದರು. ನಂತರ ಬೆಂಗಳೂರಿಗೆ ಅವರ ಪಾರ್ಥಿವ ಶರೀರವನ್ನು ಕೊಂಡೊಯ್ಯಲಾಗಿತ್ತು.

Share This Article