ತೋಟದ ಮನೆಯಲ್ಲಿದ್ದ ವ್ಯಕ್ತಿ ಮೇಲೆ ಚಿರತೆ ದಾಳಿ: ಆತಂಕದಲ್ಲಿ ಗ್ರಾಮಸ್ಥರು

Public TV
0 Min Read

ಕೋಲಾರ: ಮಾಲೂರು ತಾಲೂಕು ಉಳ್ಳೇರಹಳ್ಳಿ ಗ್ರಾಮದಲ್ಲಿ ಕಳೆದ ರಾತ್ರಿ ವ್ಯಕ್ತಿಯೊಬ್ಬರ ಮೇಲೆ ಚಿರತೆ ದಾಳಿ ನಡೆಸಿ ಗಾಯಗೊಳಿಸಿದೆ.

ಉಳ್ಳೇರಹಳ್ಳಿ ಗ್ರಾಮದ ನಾರಾಯಣ ಸ್ವಾಮಿ ಚಿರತೆ ದಾಳಿಯಿಂದ ಗಾಯಗೊಂಡ ವ್ಯಕ್ತಿ. ರಾತ್ರಿ ತೋಟದ ಮನೆಯಲ್ಲಿದ್ದ ವೇಳೆ ಚಿರತೆ ದಾಳಿ ನಡೆಸಿದೆ. ಈ ಚಿರತೆ ದಾಳಿಯಿಂದ ತೀವ್ರ ಗಾಯಗೊಂಡಿರುವ ನಾರಾಯಣ ಸ್ವಾಮಿ ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಕಳೆದ ಮೂರು ತಿಂಗಳಿಂದ ಚಿರತೆ ಹಾವಳಿಗೆ ಕಂಗಾಲಾಗಿದ್ದು, ಸುತ್ತಮುತ್ತಲಿನ ಜನ ಆತಂಕದಲ್ಲಿ ಬದುಕುವಂತಾಗಿದೆ. ಹೀಗಾಗಿ ಸೂಕ್ತ ಕ್ರಮ ಕೈಗೊಳ್ಳದ ಅರಣ್ಯ ಇಲಾಖೆ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *