ಟಿ. ನರಸೀಪುರದ ದೇಗುಲದಲ್ಲಿ ಕಾಣಿಸಿಕೊಂಡ ಚಿರತೆ

Public TV
0 Min Read

ಮೈಸೂರು: ಜಿಲ್ಲೆಯ ಟಿ. ನರಸೀಪುರ (T Narasipura Mysuru) ದಲ್ಲಿ ಮತ್ತೆ ಚಿರತೆಗಳ ಹಾವಳಿ ಹೆಚ್ಚಾಗಿದೆ. ಕಳೆದ ಒಂದು ತಿಂಗಳ ಅಂತರದಲ್ಲಿ ಎರಡು ಚಿರತೆಗಳು ಬೋನಿಗೆ ಬಿದ್ದಿವೆ.

ಇದೀಗ ಮತ್ತೆ ಅಲ್ಲಲ್ಲಿ ಚಿರತೆಗಳು ಕಾಣಿಸಿಕೊಳ್ಳುತ್ತಿವೆ. ಒಡ್ಗಲ್ ರಂಗನಾಥಸ್ವಾಮಿ ದೇವಸ್ಥಾನದಲ್ಲಿ ಚಿರತೆ ಪ್ರತ್ಯಕ್ಷವಾಗಿದೆ. ತಾಲೂಕಿನ ಬಿ.ಬೆಟ್ಟಹಳ್ಳಿ ಗ್ರಾಮದಲ್ಲಿರುವ ಈ ದೇವಸ್ಥಾನದಲ್ಲಿ ತಡರಾತ್ರಿ ಚಿರತೆ ಕಾಣಿಸಿಕೊಂಡಿದೆ. ದೇವಸ್ಥಾನದ ಸಿಸಿಟಿವಿಯಲ್ಲಿ ಈ ದೃಶ್ಯ ಸೆರೆಯಾಗಿದೆ.

ದೇವಸ್ಥಾನದಲ್ಲಿ ಚಿರತೆ (Cheetah ಕಾಣಿಸಿಕೊಂಡ ಬೆನ್ನಲ್ಲೇ. ಸುತ್ತಮುತ್ತಲಿನ ಗ್ರಾಮಸ್ಥರಲ್ಲಿ ಆತಂಕ ಶುರುವಾಗಿದೆ. ಇದನ್ನೂ ಓದಿ: ಬೆಳಗಾವಿಯಲ್ಲಿ ರಾತ್ರೋರಾತ್ರಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಪ್ರತಿಷ್ಠಾಪನೆ – ಸ್ಥಳದಲ್ಲಿ ಬಿಗಿ ಪೊಲೀಸ್ ಭದ್ರತೆ

Share This Article