ಮಲೆ ಮಹದೇಶ್ವರ ಬೆಟ್ಟದಲ್ಲಿ ಭಕ್ತನ ಕೊಂದಿದ್ದ ಚಿರತೆ ಸೆರೆ – ಮೃತನ ಕುಟುಂಬಕ್ಕೆ 5 ಲಕ್ಷ ಪರಿಹಾರ ವಿತರಣೆ

1 Min Read

ಚಾಮರಾಜನಗರ: ಮಲೆ ಮಹದೇಶ್ವರ ಬೆಟ್ಟಕ್ಕೆ ತಾಳು ಬೆಟ್ಟದಿಂದ ಪಾದಯಾತ್ರೆ ಹೋಗುತ್ತಿದ್ದ ಭಕ್ತನ ಕೊಂದಿದ್ದ ಚಿರತೆ ಕೊನೆಗೂ ಸೆರೆಯಾಗಿದೆ.

ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಚಿರತೆ ಪ್ರತ್ಯಕ್ಷವಾಗಿತ್ತು. ಚಿರತೆ ಸೆರೆಗಾಗಿ ಅರಣ್ಯಾಧಿಕಾರಿಗಳು ಹಾಗೂ ಸಿಬ್ಬಂದಿ ಸತತ ನಿಗಾ ವಹಿಸಿದ್ದರು. ಚಿರತೆ ಕಾರ್ಯಪಡೆ ಕೂಡ ಚಿರತೆ ಸೆರೆಗೆ ಎಂಟ್ರಿ ಕೊಟ್ಟಿತ್ತು. ಡ್ರೋನ್ ಮೂಲಕ ಕೂಡ ಕಾರ್ಯಾಚರಣೆ ನಡೆಸಿ ಚಿರತೆ ಸೆರೆಗೆ ಕಣ್ಗಾವಲು ವಹಿಸಿದ್ದರು. ಅರವಳಿಕೆ ಕೊಟ್ಟು ಚಿರತೆಯನ್ನು ಸೆರೆಹಿಡಿಯಲಾಗಿದೆ.

ಕಾರ್ಯಾಚರಣೆ ವೇಳೆ ಪಶುವೈದ್ಯ ಆದರ್ಶ್ ಭಾಗಿಯಾಗಿದ್ದರು. ಸುಮಾರು 50ಕ್ಕೂ ಹೆಚ್ಚು ಸಿಬ್ಬಂದಿ ಭಾಗಿಯಾಗಿದ್ದರು. ಸುಮಾರು ಎರಡರಿಂದ ಮೂರು ವರ್ಷದ ಗಂಡು ಚಿರತೆ ಸೆರೆಯಾಗಿದೆ. ಕೂರ್ಗಳ್ಳಿ ಪುನರ್ವಸತಿ ಕೇಂದ್ರಕ್ಕೆ ಚಿರತೆ ಸ್ಥಳಾಂತರಿಸಲು ಅರಣ್ಯಾಧಿಕಾರಿಗಳು ನಿರ್ಧಾರ ಮಾಡಿದ್ದಾರೆ.

ಚಿರತೆ ದಾಳಿಯಿಂದ ಮೃತಪಟ್ಟ ವ್ಯಕ್ತಿಯ ಕುಟುಂಬಕ್ಕೆ ಉಸ್ತುವಾರಿ ಸಚಿವ ವೆಂಕಟೇಶ್‍ರಿಂದ 5 ಲಕ್ಷ ರೂ. ಚೆಕ್ ಹಸ್ತಾಂತರ ಮಾಡಿದ್ದಾರೆ.

Share This Article