ಎಲ್ಲರ ಮಾತು ಮುಗಿಯಲಿ, ನಮಗೆ ಉತ್ತರ ನೀಡಲು ಸಾಕಷ್ಟು ಸಮಯವಿದೆ: ಡಿಕೆಶಿ

Public TV
1 Min Read

ಬೆಂಗಳೂರು: ಯರ‍್ಯಾರು ಏನೆಲ್ಲಾ ಹೇಳಬೇಕೋ ಹೇಳಲಿ. ಅವರದ್ದು ಏನಿದೆಯೋ ಅದೆಲ್ಲವೂ ಮೊದಲು ಹೊರಗಡೆ ಬರಲಿ. ಅವರ ಮಾತುಗಳೆಲ್ಲ ಮುಗಿಯಲಿ. ಅನಂತರ ನಮ್ಮ ಬಳಿ ಇರುವುದನ್ನು ಬಯಲು ಮಾಡುತ್ತೇವೆ ಎಂದು ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಹೇಳಿದ್ದಾರೆ.

ಸದಾಶಿವನಗರದಲ್ಲಿರುವ (Sadashivanagar) ತಮ್ಮ ನಿವಾಸದ ಬಳಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ನಮ್ಮ ಬಳಿ ಇರುವ ಮಾಹಿತಿ ಬಹಿರಂಗ ಪಡಿಸಲು ಸಾಕಷ್ಟು ಸಮಯವಿದೆ. ನಮ್ಮ ಬಗ್ಗೆ ತುಂಬಾ ಚರ್ಚೆ ನಡೆಸುತ್ತಿರುವವರಿಗೆ ಉತ್ತರ ನೀಡುವ ಕಾಲ ಸಮೀಪಿಸಿದೆ. ಉತ್ತರ ನೀಡೋಣ ಎಂದರು. ಇದನ್ನೂ ಓದಿ: ನಾನು ಜೈಲಿಗೆ ಬೇಕಾದ್ರೂ ಹೋಗ್ತೀನಿ ಆದ್ರೆ, ಕಾಂಗ್ರೆಸ್‍ಗೆ ಹೋಗಲ್ಲ: ಮುನಿರತ್ನ

ಆಪರೇಷನ್ ಹಸ್ತದ ವಿಚಾರವಾಗಿ ಮಾತನಾಡಿದ ಅವರು, ನಮ್ಮ ಮುಂದಿನ ಗುರಿ ಲೋಕಸಭಾ ಚುನಾವಣೆ. ಯಾವುದೇ ಕಾರಣಕ್ಕೂ ದ್ವೇಷ ಸಾಧಿಸಬೇಡಿ. ಪಕ್ಷದ ಮತಗಳಿಕೆ ಪ್ರಮಾಣ ಹೆಚ್ಚು ಮಾಡಿ ಎಂದು ನಮ್ಮ ಪಕ್ಷದ ಕಾರ್ಯಕರ್ತರಿಗೆ ಸೂಚನೆ ನೀಡಿದ್ದೇವೆ. ಸ್ಥಳೀಯವಾಗಿ ಒಮ್ಮೊಮ್ಮೆ ಅನುಕೂಲಸಿಂಧು ರಾಜಕಾರಣ ಮಾಡಿಕೊಳ್ಳಬೇಕಾಗುತ್ತದೆ ಎಂದು ಹೇಳಿದರು. ಇದನ್ನೂ ಓದಿ: ಬಿಜೆಪಿ ಶಾಸಕರು ಕಾಂಗ್ರೆಸ್‌ಗೆ ಬರಬಹುದು ಆದರೆ ಫಸ್ಟ್ ಬೆಂಚ್ ಸಿಗಲ್ಲ: ಪರಮೇಶ್ವರ್

ಯಾರನ್ನು ಪಕ್ಷಕ್ಕೆ ಸೇರಿಸಿಕೊಳ್ಳಬೇಕು ಎನ್ನುವುದು ಸ್ಥಳೀಯ ನಾಯಕರಿಗೆ ಬಿಟ್ಟ ವಿಚಾರ. ದೊಡ್ಡ, ದೊಡ್ಡ ನಾಯಕರನ್ನು ಸೇರಿಸಿಕೊಳ್ಳುತ್ತಿಲ್ಲ. ಅನ್ಯಪಕ್ಷಗಳ ಕಾರ್ಯಕರ್ತರು ದೊಡ್ಡ ಸಂಖ್ಯೆಯಲ್ಲಿ ಕಾಂಗ್ರೆಸ್ (Congress) ಸೇರ್ಪಡೆಗೆ ಒಲವು ತೋರಿದ್ದಾರೆ ಎಂದರು. ಇದನ್ನೂ ಓದಿ: ಲೋಕಸಭಾ ಚುನಾವಣೆ ಮುನ್ನ ಆಪರೇಷನ್ ಕಾಂಗ್ರೆಸ್- ಬೆಂಗ್ಳೂರಿನ ಕೆಲ ಶಾಸಕರಿಗೆ ಗಾಳ

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್