ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ರನ್ನ ಕರೆದು ಸಿಎಂ ಬುದ್ಧಿ ಮಾತು ಹೇಳಲಿ: ಹೆಚ್‌ಡಿಕೆ

Public TV
1 Min Read

ಬೆಂಗಳೂರು: ಸ್ವಾತಂತ್ರ್ಯ ಪೂರ್ವದಲ್ಲಿ ಬೆಳಗಾವಿ (Belagavi) ಮಹಾರಾಷ್ಟ್ರಕ್ಕೆ (Maharashtra) ಸೇರಿತ್ತು ಎಂಬ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ (Lakshmi Hebbalkar) ಹೇಳಿಕೆ ವಿರುದ್ಧ ಮಾಜಿ ಸಿಎಂ ಕುಮಾರಸ್ವಾಮಿ (HD Kumaraswamy) ವಾಗ್ದಾಳಿ ನಡೆಸಿದ್ದಾರೆ.

ಬೆಂಗಳೂರಿನಲ್ಲಿ (Bengaluru) ಈ ಕುರಿತು ಮಾತನಾಡಿದ ಅವರು, ಈ ಮಂತ್ರಿಗಳಿಗೆ ನಾಡಿನಲ್ಲಿ ಗ್ಯಾರಂಟಿ ಹೆಸರಲ್ಲಿ ಸರ್ಕಾರ ರಚನೆ ಮಾಡಿ ಯಾವುದೇ ಅಭಿವೃದ್ಧಿ ರಾಜ್ಯದಲ್ಲಿ ಕಾಣುತ್ತಿಲ್ಲ. ಇದನ್ನು ಸಿಎಂ ಆರ್ಥಿಕ ಸಲಹೆಗಾರ ರಾಯರೆಡ್ಡಿ ಹೇಳಿದ್ದಾರೆ. ಗ್ಯಾರಂಟಿ ಯೋಜನೆಯಿಂದ ಅಭಿವೃದ್ಧಿ ಕುಂಠಿತ ಆಗಿದೆ. ಸರ್ಕಾರ ಬಂದು 8 ತಿಂಗಳು ಆಗಿದೆ. ಬರ ಪರಿಹಾರ ವಿಚಾರದಲ್ಲಿ ಸರ್ಕಾರ ಹೇಗೆ ನಡೆದುಕೊಳ್ಳುತ್ತಿದೆ. 2 ಸಾವಿರ ಹಣ ಕೊಡಲು 105 ಕೋಟಿ ಹಣ ಬಿಡುಗಡೆ ಮಾಡಿದ್ದಾರೆ. ಅದು ಎಷ್ಟು ಜನರಿಗೆ ಹೋಗುತ್ತದೆ. 30 ಸಾವಿರ ಕೋಟಿ ನಷ್ಟ ಅಂತ ಹೇಳಿ 105 ಕೋಟಿ ಬಿಡುಗಡೆ ಮಾಡಿದ್ರೆ ಸಾಕಾ? ಇಷ್ಟು ಹಣದಿಂದ ಯಾವ ಪುರುಷಾರ್ಥ ಸಾಧಿಸುತ್ತಾರೆ? ರೈತರನ್ನು ಬದುಕಿಸೋಕೆ ಸಾಧ್ಯನಾ? ಈ ಸರ್ಕಾರದ ನಡವಳಿಕೆ ಗಮನಿಸುತ್ತಿದ್ದೇನೆ ಎಂದು ಕಿಡಿಕಾರಿದರು. ಇದನ್ನೂ ಓದಿ: ಡಿಕೆ ಶಿವಕುಮಾರ್ ದೊಡ್ಡ ಆಲದಹಳ್ಳಿಯಲ್ಲಿ ಅಕ್ಕಿ ಬೆಳೆದಿರೋದಾ – ಹೆಚ್‌ಡಿಕೆ

ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿಕೆ ಅದು ಈಗ ಮುಗಿದು ಹೋಗಿರೋ ಅಧ್ಯಾಯ. ಮತ್ತೆ ಅದನ್ನು ನೆನಪು ಮಾಡಿಕೊಳ್ಳುತ್ತಿರುವುದು ಸಚಿವರಿಗೆ ಮಹಾರಾಷ್ಟ್ರದ ಮೇಲೆ ಇನ್ನೂ ವ್ಯಾಮೋಹ ಇದೆ ಅಂತ ಎದ್ದು ಕಾಣುತ್ತಿದೆ. ಜವಾಬ್ದಾರಿಯುತ ಸ್ಥಾನದಲ್ಲಿ ಇರೋ ಸಚಿವರೇ ಇಂತಹ ವಿಷಯಗಳನ್ನ ಮಾತಾಡಿದ್ರೆ ನೀವೇ ನೀರು ಎರೆದ ಹಾಗೆ ಅಲ್ಲವಾ? ಸಿಎಂ ಅವರಿಗೆ ಮಂತ್ರಿಗಳ ಬಗ್ಗೆ ಹಿಡಿತ ಇದ್ದರೆ ಅವರನ್ನ ಕರೆದು ಸರಿಯಾಗಿ ಬುದ್ಧಿ ಹೇಳೋದು ಒಳ್ಳೆಯದು ಎಂದು ಸಲಹೆ ನೀಡಿದರು. ಇದನ್ನೂ ಓದಿ: ವಿದ್ಯುತ್ ಸ್ಪರ್ಶಿಸಿ ಯಶ್ ಅಭಿಮಾನಿಗಳ ದುರ್ಮರಣ – ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂ. ಪರಿಹಾರ

Share This Article