ವೈಯರ್‌ನಿಂದ ಕತ್ತು ಬಿಗಿದು ಲಿವ್ ಇನ್ ಗೆಳತಿಯ ಹತ್ಯೆ – ವಿವಾಹಿತ ಅರೆಸ್ಟ್‌

1 Min Read

ಬೆಂಗಳೂರು: ವೈಯರ್‌ನಿಂದ ಕತ್ತು ಬಿಗಿದು ಲಿವ್ ಇನ್‌ ಗೆಳತಿಯನ್ನು ವಿವಾಹಿತ ಕೊಲೆ ಮಾಡಿರುವ ಘಟನೆ ಬೆಂಗಳೂರಿನ (Bengaluru) ವರ್ತೂರಿನಲ್ಲಿ (Varthuru) ನಡೆದಿದೆ.

ಕೊಡಗು ಮೂಲದ ರಂಜಿತಾಳನ್ನು (23) ಆರೋಪಿ ಅಯ್ಯಪ್ಪ ಕೊಲೆ ಮಾಡಿದ್ದಾನೆ. ಇಬ್ಬರು ಲಿವ್‌ ಇನ್‌ ರಿಲೇಶನ್ಶಿಪ್‌ನಲ್ಲಿದ್ದರು ಎಂದು ತಿಳಿದುಬಂದಿದೆ. ಇದನ್ನೂ ಓದಿ: ಕುಡಿದ ಮತ್ತಲ್ಲಿ ಆಟೋದಲ್ಲೇ ಕುಳಿತು ಮಹಿಳೆ ಮೇಲೆ ಮೂತ್ರ ವಿಸರ್ಜನೆ – ಗುಂಪಿನಿಂದ ಹಲ್ಲೆ, ವ್ಯಕ್ತಿ ಸಾವು

ಆರೋಪಿ ಅಯ್ಯಪ್ಪನಿಗೆ ಈ ಮೊದಲೇ ಮದುವೆಯಾಗಿತ್ತು. ಆದರೆ ಮದುವೆಯಾಗಿರುವ ವಿಷಯ ಯುವತಿಗೆ ತಿಳಿದಿರಲಿಲ್ಲ. ಇದೀಗ ಈ ವಿಚಾರ ತಿಳಿದು ಇಬ್ಬರ ಮಧ್ಯೆ ಗಲಾಟೆ ಶುರುವಾಗಿತ್ತು. ಗಲಾಟೆ ತಾರಕಕ್ಕೇರಿ ಆರೋಪಿ ವೈಯರ್‌ನಿಂದ ಯುವತಿಯ ಕತ್ತು ಬಿಗಿದು ಕೊಲೆ ಮಾಡಿದ್ದಾನೆ.

ಸದ್ಯ ಈ ಸಂಬಂಧ ವರ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಬಂಧಿಸಿದ್ದಾರೆ.ಇದನ್ನೂ ಓದಿ: ಬಿಡದಿ ರೆಸಾರ್ಟ್‌ನಿಂದ ಮೈಸೂರು ಪ್ರವಾಸಕ್ಕೆ ತೆರಳಿದ ಒಡಿಶಾ ಕೈ ಶಾಸಕರು

Share This Article