ಮಾದಕ ವಸ್ತು ಮಾರಾಟ ಮಾಡ್ತಿದ್ದವರನ್ನು ಥಳಿಸಿ ಪೊಲೀಸರಿಗೆ ಒಪ್ಪಿಸಿದ ಸ್ಥಳೀಯರು

Public TV
1 Min Read

ಹಾಸನ: ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದವರ ಮೇಲೆ ಸ್ಥಳೀಯರೇ ದಾಳಿ ನಡೆಸಿ ಹಿಗ್ಗಾಮುಗ್ಗ ಥಳಿಸಿ ಪೊಲೀಸರಿಗೆ (Police) ಒಪ್ಪಿಸಿದ ಘಟನೆ ಹಾಸನ ನಗರದ (Hassan) ಬಾಹರ್‌ಪೇಟೆಯಲ್ಲಿ ನಡೆದಿದೆ.

ಪ್ರಮುಖ ಆರೋಪಿ ಫಜಲ್ ಹಾಗೂ ಆತನ ಜೊತೆಗಿದ್ದವರು ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದರು. ಈ ವೇಳೆ ಸ್ಥಳೀಯರು ದಾಳಿ ನಡೆಸಿದ್ದಾರೆ. ಬಳಿಕ ಫಜಲ್ ಗ್ಯಾಂಗ್‍ನ ಸಹಚರರಿಗೆ ಥಳಿಸಿ ನಾಲ್ವರನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ.

ಸಾರ್ವಜನಿಕರು ದಾಳಿ ಮಾಡುತ್ತಿದ್ದಂತೆ ಪ್ರಮುಖ ಆರೋಪಿ ಫಜಲ್ ಪರಾರಿ ಆಗಿದ್ದಾನೆ. ಫಜಲ್ ಮಾದಕ ವಸ್ತುಗಳ ಮಾರಾಟ ಜಾಲದ ಕಿಂಗ್‍ಪಿನ್ ಆಗಿದ್ದು ಆತನ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.

ಪೆನ್‍ಷನ್ ಮೊಹಲ್ಲಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Share This Article